ಕಾರ್ಕಳ ಬ್ಲಾಕ್ ಕಾಂಗ್ರೆಸ್‌: 79ನೇ ಸ್ವಾತಂತ್ರ್ಯೋತ್ಸವ

| Published : Aug 19 2025, 01:00 AM IST

ಸಾರಾಂಶ

ಕಾರ್ಕಳ ಬ್ಲಾಕ್ ಕಾಂಗ್ರೆಸ್ ಆಶ್ರಯದಲ್ಲಿ 79ನೇ ಸ್ವಾತಂತ್ರ್ಯೋತ್ಸವ ಹಾಗೂ ಕಾರ್ಯಕಾರಿಣಿ ಸಭೆಯನ್ನು ಕಾಂಗ್ರೆಸ್ ಕಚೇರಿಯಲ್ಲಿ ಇತ್ತೀಚೆಗೆ ಆಚರಿಸಲಾಯಿತು.

ಕಾರ್ಕಳ: ಕಾರ್ಕಳ ಬ್ಲಾಕ್ ಕಾಂಗ್ರೆಸ್ ಆಶ್ರಯದಲ್ಲಿ 79ನೇ ಸ್ವಾತಂತ್ರ್ಯೋತ್ಸವ ಹಾಗೂ ಕಾರ್ಯಕಾರಿಣಿ ಸಭೆಯನ್ನು ಕಾಂಗ್ರೆಸ್ ಕಚೇರಿಯಲ್ಲಿ ಇತ್ತೀಚೆಗೆ ಆಚರಿಸಲಾಯಿತು.

ಕಾರ್ಯಕ್ರಮದ ಅಂಗವಾಗಿ ಕಾಂಗ್ರೆಸ್ ಮುಖಂಡ ಉದಯ ಶೆಟ್ಟಿ ಮುನಿಯಾಲು ದ್ವಜಾರೋಹಣ ನೆರವೇರಿಸಿ ಮಾತನಾಡಿ, ದೇಶದ ಸ್ವಾತಂತ್ರ್ಯಕ್ಕಾಗಿ ಹೋರಾಡಿದ ಪಕ್ಷ ಕಾಂಗ್ರೆಸ್, ನಾವು ಕಾಂಗ್ರೆಸ್ ಪಕ್ಷದ ಸದಸ್ಯರೆಂದು ಹೆಮ್ಮೆಪಡಬೇಕು. ಸ್ವಾತಂತ್ರ್ಯದ ಸವಿ ನಮಗೆ ಲಭ್ಯವಾಗಿರುವುದು ಸ್ವಾತಂತ್ರ್ಯ ಸೇನಾನಿಗಳ ಬಲಿದಾನದ ಫಲ ಎಂದರು.

ಉಡುಪಿ ಜಿಲ್ಲಾ ಕಾಂಗ್ರೆಸ್ ವಕ್ತಾರ ಬಿಪಿನ್ ಚಂದ್ರ ಪಾಲ್ ನಕ್ರೆ ಮಾತನಾಡಿ, ಬ್ರಿಟಿಷರು ದೇಶದ ಸಂಪತ್ತನ್ನು ದೋಚಿ ದುರ್ಬಲ ಭಾರತವನ್ನು ಕಾಂಗ್ರೆಸ್ ಪಕ್ಷದ ಕೈಗೆ ಬಿಟ್ಟಿದ್ದರು. ಆದರೆ ಕಾಂಗ್ರೆಸ್ ಪಕ್ಷದ ನೇತೃತ್ವದಲ್ಲಿ ಭಾರತವು ವಿಶ್ವದ ಶಕ್ತಿಶಾಲಿ ರಾಷ್ಟ್ರವಾಗಿ ಪರಿಣಮಿಸಿದೆ ಎಂದು ಅಭಿಪ್ರಾಯಪಟ್ಟರು.ಹಿರಿಯ ಮುಖಂಡ ಶೇಖರ ಮಡಿವಾಳ, ಕಾರ್ಕಳದ ಸರ್ವಾಂಗೀಣ ಅಭಿವೃದ್ಧಿಗೆ ಕೊಡುಗೆ ನೀಡಿದ ಮಾಜಿ ಶಾಸಕ ದಿ. ಗೋಪಾಲ ಭಂಡಾರಿ ಪುತ್ಥಳಿ ನಿರ್ಮಾಣಕ್ಕೆ ಪ್ರಸ್ತಾಪ ಮಾಡಿದರು. ಹಿರಿಯ ಮುಖಂಡ ಮಂಜುನಾಥ ಪೂಜಾರಿ ಮುದ್ರಾಡಿ, ಕೆಪಿಸಿಸಿ ಸದಸ್ಯ ಸುರೇಂದ್ರ ಶೆಟ್ಟಿ ಮಾತನಾಡಿದರು.ಅಧ್ಯಕ್ಷತೆ ವಹಿಸಿದ್ದ ಬ್ಲಾಕ್ ಅಧ್ಯಕ್ಷ ಶುಭದ ರಾವ್ ಮಾತನಾಡಿ, ಶೀಘ್ರದಲ್ಲಿ ಕಾರ್ಕಳದಲ್ಲಿ ಮಾಜಿ ಶಾಸಕ ದಿ. ಗೋಪಾಲ ಭಂಡಾರಿಯವರ ಪುತ್ಥಳಿ ನಿರ್ಮಾಣದ ಕಾರ್ಯ ಕೈಗೊಳ್ಳಲಾಗುವುದು. ಸ್ವಾತಂತ್ರ್ಯ ಹೋರಾಟ ನಡೆಸಿದ ಪಕ್ಷ ಕಾಂಗ್ರೆಸ್, ಇಂದು ಅದರ ಬ್ಲಾಕ್ ಅಧ್ಯಕ್ಷನಾಗಿ ಸ್ವಾತಂತ್ರ್ಯೋತ್ಸವವನ್ನು ಆಚರಿಸಲು ನನಗೆ ಹೆಮ್ಮೆಯಾಗಿದೆ ಎಂದರು.ಪರಿಶಿಷ್ಟ ಜಾತಿ ಘಟಕದ ನೂತನ ಅಧ್ಯಕ್ಷರಾಗಿ ದೇವದಾಸ್ ಕೆ. ನೇಮಕಗೊಂಡಿದ್ದು, ಅವರಿಗೆ ಆದೇಶ ಪತ್ರ ನೀಡಿ ಅಭಿನಂದಿಸಲಾಯಿತು.ಜಿಲ್ಲಾ ಉಪಾಧ್ಯಕ್ಷ ಸುಧಾಕರ ಕೋಟ್ಯಾನ್, ಇಂಟೆಕ್ ಅಧ್ಯಕ್ಷ ಕಿರಣ್ ಹೆಗ್ಡೆ, ಗ್ಯಾರಂಟಿ ಸಮಿತಿಯ ಅಧ್ಯಕ್ಷ ಅಜಿತ್ ಹೆಗ್ಡೆ ಮಾಳ, ಬ್ಲಾಕ್ ಉಪಾಧ್ಯಕ್ಷ ಜಾರ್ಜ್ ಕ್ಯಾಸ್ಟಲಿನೊ, ಕೆಪಿಸಿಸಿ ರೈತ ಘಟಕದ ಪ್ರಧಾನ ಕಾರ್ಯದರ್ಶಿ ಉದಯ ಶೆಟ್ಟಿ ಕುಕ್ಕುಂದೂರು, ಕೋಶಾಧಿಕಾರಿ ಉಮೇಶ್ ರಾವ್ ಬಜಗೋಳಿ, ಕುಕ್ಕುಂದೂರು ಗ್ರಾಮ ಪಂಚಾಯತಿ ಅಧ್ಯಕ್ಷೆ ಉಷಾ ಕೆ., ಸೊಸೈಟಿ ಅಧ್ಯಕ್ಷ ಸಿರಿಯಣ್ಣ ಶೆಟ್ಟಿ, ಜಾನ್ ಡಿ’ಸಿಲ್ವಾ, ಮಾಜಿ ಬ್ಲಾಕ್ ಅಧ್ಯಕ್ಷ ಸದಾಶಿವ ದೇವಾಡಿಗ, ಯುವ ಕಾಂಗ್ರೆಸ್ ಅಧ್ಯಕ್ಷ ಸೂರಜ್ ಶೆಟ್ಟಿ ನಕ್ರೆ, ಸೇವಾದಳದ ಅಬ್ದುಲ್ ಸಾಣೂರು, ಕಾನೂನು ಘಟಕದ ರೆಹಮತ್ತುಲ್ಲಾ, ಪ.ಪಂ ಅಧ್ಯಕ್ಷ ಕಿರಣ್ ನಾಯ್ಕ, ಮೀನುಗಾರ ಘಟಕದ ಮುರಳಿ ರಾಣೆ ಹಾಗೂ ವಿವಿಧ ಘಟಕದ ಅಧ್ಯಕ್ಷರು, ಜನಪ್ರತಿನಿಧಿಗಳು, ಬ್ಲಾಕ್ ಪದಾಧಿಕಾರಿಗಳು ಇದ್ದರು.ರಮೇಶ್ ನಿಟ್ಟೆ ದೇಶಭಕ್ತಿ ಗೀತೆಯನ್ನು ಹಾಡಿ ಸಮಾರಂಭವನ್ನು ಆರಂಭಿಸಿದರು. ಹಿಂದುಳಿದ ವರ್ಗ ಘಟಕದ ಅಧ್ಯಕ್ಷ ಅನಿಲ್ ಪೂಜಾರಿ ನೆಲ್ಲಿಗುಡ್ಡೆ ಸ್ವಾಗತಿಸಿದರು. ಯುವ ಕಾಂಗ್ರೆಸ್ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಯೋಗೀಶ್ ಆಚಾರ್ಯ ಇನ್ನಾ ವಂದಿಸಿದರು. ಬ್ಲಾಕ್ ವಕ್ತಾರ ಪ್ರದೀಪ್ ಬೇಲಾಡಿ ಕಾರ್ಯಕ್ರಮ ನಿರೂಪಿಸಿದರು.