ಸಾರಾಂಶ
ಕಾರ್ಕಳ ಬ್ಲಾಕ್ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ಆಶ್ರಯದಲ್ಲಿ ಸೋಮವಾರ ಸಾಲ್ಮರದ ಜಾಮೀಯ ಶಾದಿ ಮಹಲ್ ಸಭಾಂಗಣದಲ್ಲಿ ವಿವಿಧ ಇಲಾಖೆಗಳ ಸೌಲಭ್ಯಗಳ ಕುರಿತು ಮಾಹಿತಿ ಕಾರ್ಯಾಗಾರ ಜರುಗಿತು.
ಕನ್ನಡಪ್ರಭ ವಾರ್ತೆ ಕಾರ್ಕಳ
ಕಾರ್ಕಳ ಬ್ಲಾಕ್ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ಆಶ್ರಯದಲ್ಲಿ ಸೋಮವಾರ ಸಾಲ್ಮರದ ಜಾಮೀಯ ಶಾದಿ ಮಹಲ್ ಸಭಾಂಗಣದಲ್ಲಿ ವಿವಿಧ ಇಲಾಖೆಗಳ ಸೌಲಭ್ಯಗಳ ಕುರಿತು ಮಾಹಿತಿ ಕಾರ್ಯಾಗಾರ ಜರುಗಿತು.ಕಾರ್ಯಕ್ರಮದಲ್ಲಿ ಪ್ರಮುಖ ಭಾಷಣ ನೀಡಿದ ಕಾಂಗ್ರೆಸ್ ಮುಖಂಡ ಉದಯ್ ಶೆಟ್ಟಿ, ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಅಲ್ಪಸಂಖ್ಯಾತ ಸಮುದಾಯದ ಸರ್ವತೋಮುಖ ಅಭಿವೃದ್ಧಿಗೆ ನೂರಾರು ಕೋಟಿ ರು. ಅನುದಾನ ಬಿಡುಗಡೆ ಮಾಡಿದ್ದು, ಅನೇಕ ಜನಪರ ಯೋಜನೆಗಳನ್ನು ಜಾರಿಗೆ ತಂದಿದೆ. ಸಮುದಾಯದ ಸದಸ್ಯರು ಈ ಸೌಲಭ್ಯಗಳ ಬಗ್ಗೆ ಮಾಹಿತಿ ಪಡೆದು ಅದರ ಲಾಭ ಪಡೆದುಕೊಳ್ಳಬೇಕು ಎಂದರು.ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಶುಭದ ರಾವ್ ಮಾತನಾಡಿ, ನುಕೂಲಗಳ ಬಗ್ಗೆ ಮಾಹಿತಿ ಇಲ್ಲದ ಕಾರಣ ಅನುದಾನಗಳು ಸರ್ಕಾರಕ್ಕೆ ಮರಳಿ ಹೋಗುತ್ತಿರುವ ಉದಾಹರಣೆಗಳು ಇವೆ. ಹಾಗಾಗಿ, ಸಮಗ್ರ ಮಾಹಿತಿ ನೀಡುವ ಉದ್ದೇಶದಿಂದ ಈ ಕಾರ್ಯಗಾರವನ್ನು ಆಯೋಜಿಸಲಾಗಿದೆ ಎಂದರು.ಕಾರ್ಯಕ್ರಮದಲ್ಲಿ ಎಂ.ಪಿ. ಮೊಹಿದ್ದೀನ್, ಪುರಸಭಾ ಸದಸ್ಯ ಹಾಗೂ ಜಮಾತ್ ಅಧ್ಯಕ್ಷ ಆಶ್ಪಕ್ ಅಹಮ್ಮದ್, ಕಾನೂನು ಘಟಕದ ಅಧ್ಯಕ್ಷ ರೆಹಮ್ಮತ್ತುಲ್ಲಾ, ಬ್ಲಾಕ್ ಉಪಾಧ್ಯಕ್ಷ ಜಾರ್ಜ್ ಕ್ಯಾಸ್ಟಲೀನೊ, ಸೊಲೊಮನ್ ಅಲ್ವಾರಿಸ್ ಭಾಗವಹಿಸಿದ್ದರು.ಅಲ್ಪಸಂಖ್ಯಾತ ಕಲ್ಯಾಣ ಇಲಾಖೆಯ ಸಿಬ್ಬಂದಿ ದೀಪಾ ಇಲಾಖೆಗಳಲ್ಲಿ ಲಭ್ಯವಿರುವ ಸೌಲಭ್ಯಗಳ ಬಗ್ಗೆ ಮಾಹಿತಿ ನೀಡಿದ್ದು, ಪ್ರಶ್ನೋತ್ತರ ಹಾಗೂ ಸಂವಾದ ನಡೆಸಿಕೊಟ್ಟರು.ಕಾರ್ಮಿಕ ಘಟಕದ ಅಧ್ಯಕ್ಷ ವಲೇರಿಯನ್ ಪಾಯಸ್, ಸೇವಾದಳದ ಅಧ್ಯಕ್ಷ ಅಬ್ದುಲ್ಲಾ ಸಾಣೂರು, ಎನ್‌ಎನ್‌ಒ ಮೇಲ್ವಿಚಾರಕ ಫರ್ಮನ್ ಉಪಸ್ಥಿತರಿದ್ದರು.ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಶಬ್ಬಿರ್ ಮಿಯಾರು ಕಾರ್ಯಕ್ರಮ ನಿರೂಪಿಸಿದರು. ಮುಡಾರು ಗ್ರಾಮೀಣ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಪ್ರಥ್ವಿರಾಜ್ ಜೈನ್ ಸ್ವಾಗತಿಸಿದರು. ಯುವ ಕಾಂಗ್ರೆಸ್ ಅಧ್ಯಕ್ಷ ಅತ್ತೂರು ಮಲ್ಲಿಕ್ ವಂದಿಸಿದರು.