ಸಾರಾಂಶ
ಕಾರ್ಕಳ: ಕಾರ್ಕಳ ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ಮಹಾತ್ಮಾ ಗಾಂಧೀಜಿ ಹಾಗೂ ಮಾಜಿ ಪ್ರಧಾನಮಂತ್ರಿ ಲಾಲ್ ಬಹದ್ದೂರ್ ಶಾಸ್ತ್ರಿ ಜಯಂತಿ ಭಾವಪೂರ್ಣವಾಗಿ ಆಚರಿಸಲಾಯಿತು.ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಶುಭದರಾವ್ ಮಾತನಾಡಿ, ಶೂದ್ರ ಮತ್ತು ತಳ ಸಮುದಾಯದ ಜನರಿಗೆ ದೇವಸ್ಥಾನ ಪ್ರವೇಶ ದೊರಕಬೇಕು ಎಂಬ ಗಾಂಧೀಜಿ ಹೋರಾಟವೇ ವಿರೋಧಿಗಳಿಗೆ ಅಸಹ್ಯವಾಯಿತು. ಜಾತಿ ವ್ಯವಸ್ಥೆಯ ವಿರುದ್ಧ ಅವರ ಹೋರಾಟವೇ ಇಂದಿಗೂ ಪ್ರಸ್ತುತ ಎಂದು ಅಭಿಪ್ರಾಯಪಟ್ಟರು.ಹಿರಿಯ ಕಾಂಗ್ರೆಸ್ ಮುಖಂಡ ಶೇಖರ್ ಮಡಿವಾಳ ಮಾತನಾಡಿ, ಗಾಂಧೀಜಿಯವರ ತತ್ವ,ಸಿದ್ಧಾಂತಗಳು ಸರ್ವಕಾಲಕ್ಕೂ ಪ್ರಸ್ತುತ. ದೇಶವನ್ನು ಸರ್ವಾಂಗೀಣ ಪ್ರಗತಿಗೇರಿಸಲು ಅವರ ಆದರ್ಶಗಳನ್ನು ಅನುಸರಿಸುವುದು ಮಾತ್ರವೇ ಮಾರ್ಗ ಎಂದರು.ತಾಲೂಕು ಪಂಚಾಯಿತಿ ಮಾಜಿ ಅಧ್ಯಕ್ಷ ನಾಗಪ್ಪ ಮೇರ ಮಹನೀಯರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ದೀಪ ಬೆಳಗಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.ಈ ಸಂದರ್ಭ ಪುರಸಭೆಯ ಮಾಜಿ ಅಧ್ಯಕ್ಷರು ಸುಬಿತ್ ಕುಮಾರ್, ಪ್ರತಿಮಾ ರಾಣೆ, ಸೀತಾರಾಮ್, ರೆಹಮತ್ ಶೇಖ್, ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ಸುಧಾಕರ್ ಕೋಟ್ಯಾನ್, ಬ್ಲಾಕ್ ಮಹಿಳಾ ಅಧ್ಯಕ್ಷೆ ಬಾನು ಭಾಸ್ಕರ್ ಪೂಜಾರಿ, ಪುರಸಭಾ ಸದಸ್ಯ ವಿವೇಕ್ ಶೆಣೈ, ಸೇವಾದಳ ಅಧ್ಯಕ್ಷ ಅಬ್ದುಲ್ಲಾ ಸಾಣೂರು, ಅಲ್ಪಸಂಖ್ಯಾತ ಘಟಕದ ತನ್ವೀರ್ ತೆಳ್ಳಾರ್, ಭೂನ್ಯಾಯ ಮಂಡಳಿ ಸದಸ್ಯ ಸುನೀಲ್ ಭಂಡಾರಿ, ಗ್ಯಾರಂಟಿ ಸದಸ್ಯರು ಹೇಮಂತ್ ಮತ್ತು ಪಿಲಿಫ್ಸ್, ಯುವ ಕಾಂಗ್ರೆಸ್‌ನ ಮಂಜುನಾಥ್ ಜೋಗಿ, ಪ್ರಕಾಶ್ ಆಚಾರ್ಯ ಸೇರಿದಂತೆ ಬ್ಲಾಕ್ ಪದಾಧಿಕಾರಿಗಳು ಇದ್ದರು.ಜಾರ್ಜ್ ಕ್ಯಾಸ್ಟಲೀನೋ ಸ್ವಾಗತಿಸಿದರು. ರಮೇಶ್ ಪತೊಂಜಿಕಟ್ಟೆ ಧನ್ಯವಾದ ಸಲ್ಲಿಸಿದರು