ಕಾರ್ಕಳ ಬ್ಲಾಕ್ ಕಾಂಗ್ರೆಸ್‌ ಕಾರ್ಯಕಾರಿಣಿ ಸಮಿತಿ ಸಭೆ

| Published : May 13 2025, 01:05 AM IST

ಕಾರ್ಕಳ ಬ್ಲಾಕ್ ಕಾಂಗ್ರೆಸ್‌ ಕಾರ್ಯಕಾರಿಣಿ ಸಮಿತಿ ಸಭೆ
Share this Article
  • FB
  • TW
  • Linkdin
  • Email

ಸಾರಾಂಶ

ಕಾರ್ಕಳ ಬ್ಲಾಕ್ ಕಾಂಗ್ರೆಸ್ ಕಾರ್ಯಕಾರಿಣಿ ಸಮಿತಿಯ ಸಭೆ ಬ್ಲಾಕ್ ಅಧ್ಯಕ್ಷ ಶುಭದ್ ರಾವ್ ಅಧ್ಯಕ್ಷತೆಯಲ್ಲಿ ಕಾರ್ಕಳ ಕಾಂಗ್ರೆಸ್ ಕಚೇರಿಯಲ್ಲಿ ನಡೆಯಿತು.

ಕನ್ನಡಪ್ರಭ ವಾರ್ತೆ ಕಾರ್ಕಳ

ಕಾರ್ಕಳ ಬ್ಲಾಕ್ ಕಾಂಗ್ರೆಸ್ ಕಾರ್ಯಕಾರಿಣಿ ಸಮಿತಿಯ ಸಭೆ ಬ್ಲಾಕ್ ಅಧ್ಯಕ್ಷ ಶುಭದ್ ರಾವ್ ಅಧ್ಯಕ್ಷತೆಯಲ್ಲಿ ಕಾರ್ಕಳ ಕಾಂಗ್ರೆಸ್ ಕಚೇರಿಯಲ್ಲಿ ನಡೆಯಿತು. ಸಭೆಯ ಆರಂಭದಲ್ಲಿ ಪಹಲ್ಗಾಮ್ ಭಯೋತ್ಪಾದಕ ದಾಳಿಯಲ್ಲಿ ಮಡಿದ 26 ಜನ ಪ್ರವಾಸಿಗರ ಆತ್ಮಕ್ಕೆ ಹಾಗೂ ಅಗಲಿದ ಹಿರಿಯ ಕಾಂಗ್ರೆಸ್ ನಾಯಕರ ಆತ್ಮಕ್ಕೆ ಶ್ರದ್ಧಾಂಜಲಿ ಕೋರಲಾಯಿತು. ಸಭೆಯನ್ನುದ್ದೇಶಿಸಿ ಮಾತನಾಡಿದ ಕಾರ್ಕಳ ಕಾಂಗ್ರೆಸ್ ನಾಯಕ ಉದಯ ಶೆಟ್ಟಿ ಮುನಿಯಾಲು, ಸ್ಥಳೀಯಾಡಳಿತ ಸಂಸ್ಥೆಗಳ ಚುನಾವಣೆ ನಮ್ಮ ಮುಂದಿದ್ದು ಅದಕ್ಕಾಗಿ ಸರ್ವ ರೀತಿಯಲ್ಲೂ ನಾವು ಸನ್ನದ್ದರಾಗ ಬೇಕಾಗಿದೆ ಎಂದರು.

ಕಾಂಗ್ರೆಸ್ ವಿರುದ್ದ ವಿರೋಧಿಗಳು ಸುಳ್ಳು ಸುದ್ದಿಗಳೊಂದಿಗೆ ಅಪಪ್ರಚಾರ ನಡೆಸುತ್ತಿದ್ದು ಕಾಂಗ್ರೆಸ್ ಕಾರ್ಯಕರ್ತರು ಇದಕ್ಕೆ ತಕ್ಕ ಪ್ರತ್ಯುತ್ತರ ನೀಡಬೇಕಾಗಿದೆ, ನಕಲಿ ಪ್ರತಿಮೆಯ ಭಗ್ನ ಅವಶೇಷಗಳಿಂದ ಅವಮಾನಕಾರಿ ರೀತಿಯಲ್ಲಿ ನಿಂತು ಕಾರ್ಕಳಕ್ಕೆ ಕಳಂಕದಂತಾಗಿರುವ ಬೈಲೂರು ಪರಶುರಾಮ ಥೀಮ್ ಪಾರ್ಕ್‌ನ ಪರಶುರಾಮ ಪ್ರತಿಮೆಯ ಪುನರ್ ನಿರ್ಮಾಣಕ್ಕೆ ಹೋರಾಟದ ಅಗತ್ಯವಿದ್ದು ಈ ನಿಟ್ಟಿನಲ್ಲಿ ಕೆಲಸ ಮಾಡಬೇಕಿದೆ ಎಂದರು.

ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಶುಭದ್ ರಾವ್ ಮಾತನಾಡಿ, ಕಾರ್ಕಳ ತಾಲೂಕು ಸರ್ಕಾರಿ ಆಸ್ಪತ್ರೆಯಲ್ಲಿ ಸಮಸ್ಯೆಗಳ ಕುರಿತು ಪಕ್ಷದ ಗಮನಕ್ಕೆ ಬಂದಿದ್ದು ಆರೋಗ್ಯ ಸಚಿವರ ಗಮನಕ್ಕೆ ತರಲಾಗುವುದು ಎಂದರು.

ಕಾರ್ಯಕಾರಿಣಿ ಸಭೆಯಲ್ಲಿ ಚರ್ಚಿಸಲಾದ ವಿಚಾರಗಳನ್ನು ಸವಾಲಾಗಿ ಪರಿಗಣಿಸಿ ಪಕ್ಷದ ಎಲ್ಲಾ ಸ್ಥರಗಳ ಪ್ರಮುಖರು ಕಾರ್ಯೋನ್ಮುಖ ಆಗಬೇಕಿದೆ ಎಂದರು. ಹಾಗೂ ಎಂದರು.

ಕಾರ್ಕಳ ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಅಧ್ಯಕ್ಷ ಅಜಿತ್ ಹೆಗ್ಡೆ ಮಾಳ ಮಾತನಾಡಿ ಜಿಲ್ಲಾ ಗ್ಯಾರಂಟಿ ಸಮಿತಿಯ ನಿರ್ಣಯದಂತೆ ಪ್ರತಿ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಗ್ಯಾರಂಟಿ ಸಮಾವೇಶ ನಡೆಸಲು ಯೋಜಿಸಲಾಗಿದೆ ಎಂದರು.

ಹೆಬ್ರಿಯಲ್ಲಿ ಸ್ಥಾಪಿಸಲು ಉದ್ದೇಶಿಸಲಾದ ಮಾಜಿ ಶಾಸಕ ದಿ. ಗೋಪಾಲ ಭಂಡಾರಿ ಪುತ್ಥಳಿ ಸ್ಥಾಪನೆಯಲ್ಲಿ ಸಹಕಾರ ನೀಡುವ ಕುರಿತು ಸಭೆಯಲ್ಲಿ ನಿರ್ಣಯಿಸಲಾಯಿತು. ಕಾರ್ಕಳ ತಾಲೂಕು ಸರ್ಕಾರಿ ಆಸ್ಪತ್ರೆಯ ಸಿಬ್ಬಂದಿ ಸಮಸ್ಯೆ, ಪರಶುರಾಮ ಥೀಮ್ ಪಾರ್ಕ್ ಹೋರಾಟ ಮುಂತಾದ ಪ್ರಮುಖ ವಿಷಯಗಳ ಬಗ್ಗೆ ಸಭೆಯಲ್ಲಿ ನಿರ್ಣಯ ಕೈಗೊಳ್ಳಲಾಯಿತು.

ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಭಾನು ಭಾಸ್ಕರ್ ಪೂಜಾರಿ, ಕೆ.ಎಮ್.ಎಫ್‌. ನಿರ್ದೇಶಕರಾದ ಸುಧಾಕರ ಶೆಟ್ಟಿ ಮುಡಾರು, ಕುಶ.ಆರ್. ಮೂಲ್ಯ, ಜಾರ್ಜ್ ಕ್ಯಾಸ್ತಲಿನೊ, ಯುವ ಕಾಂಗ್ರೆಸ್ ಮಾಜಿ ಜಿಲ್ಲಾಧ್ಯಕ್ಷ ದೀಪಕ್ ಕೋಟ್ಯಾನ್ ಇನ್ನಾ, ಯುವ ಕಾಂಗ್ರೆಸ್ ವಿಧಾನಸಭಾ ಕ್ಷೇತ್ರದ ಅಧ್ಯಕ್ಷ ಸೂರಜ್ ಶೆಟ್ಟಿ ನಕ್ರೆ, ಕಾರ್ಕಳ ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕ್ ಅತ್ತೂರು, ನಗರ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ರೀನಾ ಜೂಲಿಯೆಟ್‌ ಡಿಸೋಜ, ಪುರಸಭಾ ಸದ್ಯರು, ಗ್ರಾಮೀಣ ಕಾಂಗ್ರೆಸ್ ಅಧ್ಯಕ್ಷರುಗಳು, ಚುನಾಯಿತ ಜನ ಪ್ರತಿನಿಧಿಗಳು, ವಿವಿಧ ಘಟಕಗಳ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು ಇದ್ದರು.

ಅಲ್ಪ ಸಂಖ್ಯಾತ ಘಟಕದ ಅಧ್ಯಕ್ಷರಾದ ಶಬೀರ್ ಅಹಮದ್ ಮಿಯಾರು ನಿರೂಪಿಸಿದರು. ಗ್ಯಾರಂಟಿ ಸಮಿತಿಯ ‌ಸದಸ್ಯರಾದ ಹೇಮಂತ್ ಆಚಾರ್ಯ ವಂದಿಸಿದರು.