ಕಾರ್ಕಳ: 26ರಂದು ಮೂಳೆಯ ಖನಿಜಾಂಶಗಳ ಸಾಂದ್ರತೆ ಪರೀಕ್ಷಾ ಶಿಬಿರ

| Published : Feb 25 2024, 01:51 AM IST

ಕಾರ್ಕಳ: 26ರಂದು ಮೂಳೆಯ ಖನಿಜಾಂಶಗಳ ಸಾಂದ್ರತೆ ಪರೀಕ್ಷಾ ಶಿಬಿರ
Share this Article
  • FB
  • TW
  • Linkdin
  • Email

ಸಾರಾಂಶ

ಮೂಳೆಗಳನ್ನು ದುರ್ಬಲಗೊಳಿಸುವ ಮತ್ತು ಮುರಿತದ ಅಪಾಯವನ್ನು ಹೆಚ್ಚಿಸುವ ಸ್ಥಿತಿಯಾದ ಆಸ್ಟಿಯೊಪೊರೋಸಿಸ್, ಅದರ ಬಗ್ಗೆ ಅರಿವಿನ ಕೊರತೆಯಿಂದಾಗಿ ಪತ್ತೆಯಾಗುವುದೇ ಇಲ್ಲ. ಇದು ಪ್ರಧಾನವಾಗಿ ಋತುಬಂಧಕ್ಕೊಳಗಾದ ಮಹಿಳೆಯರ ಮೇಲೆ ಪರಿಣಾಮ ಬೀರುತ್ತದೆ ಮತ್ತು ಅದು ಹೆಚ್ಚುವುದನ್ನು ತಡೆಗಟ್ಟಲು ಆರಂಭಿಕ ರೋಗನಿರ್ಣಯವು ನಿರ್ಣಾಯಕವಾಗಿದೆ.

ಕನ್ನಡಪ್ರಭ ವಾರ್ತೆ ಕಾರ್ಕಳ

ಡಾ.ಟಿ.ಎಂ.ಎ. ಪೈ ರೋಟರಿ ಆಸ್ಪತ್ರೆ ಫೆ. 26ರಂದು ಮೂಳೆ ಮತ್ತು ಕೀಲು ವಿಭಾಗದಲ್ಲಿ ಉಚಿತ ಬೋನ್ ಮಿನರಲ್ ಡೆನ್ಸಿಟಿ ಶಿಬಿರವನ್ನು ಬೆಳಗ್ಗೆ 9 ಗಂಟೆಯಿಂದ ಮಧ್ಯಾಹ್ನ 3 ಗಂಟೆ ವರೆಗೆ ವರೆಗೆ ಆಯೋಜಿಸಿದೆ. ಶಿಬಿರದಲ್ಲಿ 35 ವರ್ಷಕ್ಕಿಂತ ಮೇಲ್ಪಟ್ಟ ವ್ಯಕ್ತಿಗಳು, ವಿಶೇಷವಾಗಿ ಮಹಿಳೆಯರು ಇದರ ಪ್ರಯೋಜನ ಪಡೆಯಬಹುದು. ಇದು ಮೊದಲು ನೋಂದಾಯಿಸುವ 120 ವ್ಯಕ್ತಿಗಳಿಗೆ ಸೀಮಿತವಾಗಿದೆ. ನೋಂದಣಿಯು ಮೊದಲು ಬಂದವರಿಗ ಮೊದಲ ಆದ್ಯತೆ ಆಧಾರದ ಮೇಲೆ ಇರುತ್ತದೆ. ನೋಂದಣಿಗಾಗಿ 9731601150/08258-230583 ಅನ್ನು ಸಂಪರ್ಕಿಸಬಹುದು ಎಂದು ಡಾ. ಟಿ.ಎಂ.ಎ. ಪೈ ರೋಟರಿ ಆಸ್ಪತ್ರೆ ಕಾರ್ಕಳದ ಮುಖ್ಯ ವೈದ್ಯಾಧಿಕಾರಿ ಡಾ. ಕೀರ್ತಿನಾಥ ಬಲ್ಲಾಳ ತಿಳಿಸಿದ್ದಾರೆ.

ಮೂಳೆಗಳನ್ನು ದುರ್ಬಲಗೊಳಿಸುವ ಮತ್ತು ಮುರಿತದ ಅಪಾಯವನ್ನು ಹೆಚ್ಚಿಸುವ ಸ್ಥಿತಿಯಾದ ಆಸ್ಟಿಯೊಪೊರೋಸಿಸ್, ಅದರ ಬಗ್ಗೆ ಅರಿವಿನ ಕೊರತೆಯಿಂದಾಗಿ ಪತ್ತೆಯಾಗುವುದೇ ಇಲ್ಲ. ಇದು ಪ್ರಧಾನವಾಗಿ ಋತುಬಂಧಕ್ಕೊಳಗಾದ ಮಹಿಳೆಯರ ಮೇಲೆ ಪರಿಣಾಮ ಬೀರುತ್ತದೆ ಮತ್ತು ಅದು ಹೆಚ್ಚುವುದನ್ನು ತಡೆಗಟ್ಟಲು ಆರಂಭಿಕ ರೋಗನಿರ್ಣಯವು ನಿರ್ಣಾಯಕವಾಗಿದೆ. ಈ ಹಿನ್ನೆಲೆಯಲ್ಲಿ ಆರ್ಥೋಪೆಡಿಕ್ಸ್ ವಿಭಾಗದ ಮುಖ್ಯಸ್ಥ ಡಾ.ಸುನಿಲ್ ಬಾಳಿಗ, ಡಾ.ಟಿ.ಎಂ.ಎ. ಪೈ ರೋಟರಿ ಆಸ್ಪತ್ರೆ ಕಾರ್ಕಳ, ಅವರು ಆಸ್ಟಿಯೊಪೊರೋಸಿಸ್ ತೊಂದರೆಯನ್ನು ಪತ್ತೆಹಚ್ಚುವಲ್ಲಿ ಬೋನ್ ಮಿನರಲ್ ಡೆನ್ಸಿಟಿ (BMD) ಪರೀಕ್ಷೆಯ ಮಹತ್ವವನ್ನು ಒತ್ತಿ ಹೇಳಿದ್ದಾರೆ.ದೇಹವು ಹೊಸ ಮೂಳೆಗಳನ್ನು ಸಮರ್ಪಕವಾಗಿ ರೂಪಿಸಲು ವಿಫಲವಾದಾಗ ಅಥವಾ ಅಸ್ತಿತ್ವದಲ್ಲಿರುವ ಮೂಳೆಗಳ ನಾಶ ಹೆಚ್ಚಾದಾಗ ಆಸ್ಟಿಯೊಪೊರೋಸಿಸ್ ಸಂಭವಿಸುತ್ತದೆ. ಯಾವುದೇ ನೋವು, ಗಾಯ ಇಲ್ಲದೇ ಮಾಡುವ ಬಿಎಂಡಿ ಪರೀಕ್ಷೆಗೆ ಒಳಗಾಗುವ ಮೂಲಕ, ವ್ಯಕ್ತಿಗಳು ತಮ್ಮ ಮೂಳೆಗಳ ಸಾಂದ್ರತೆಯನ್ನು ಕಂಡು ಹಿಡಿಯಬಹುದು ಮತ್ತು ಸ್ಥಿತಿಯನ್ನು ನಿರ್ವಹಿಸುವಲ್ಲಿ ಸೂಕ್ತ ಮಾರ್ಗದರ್ಶನವನ್ನು ಪಡೆಯಬಹುದು.