: ಅಜೆಕಾರು-ಕಡ್ತಲ-ದೊಂಡೆರಂಗಡಿ ಮಾರ್ಗವಾಗಿ ಹರಿಖಂಡಿಗೆ, ಪೆರ್ಡೂರು ಮೂಲಕ ಉಡುಪಿಗೆ ಸಂಚರಿಸುತ್ತಿದ್ದ ಖಾಸಗಿ ಬಸ್‌ನಲ್ಲಿ ವಿದ್ಯಾರ್ಥಿಗಳು ಬಸ್‌ನ ಹಿಂಭಾಗದ ಏಣಿಯಲ್ಲಿ ನೇತಾಡಿಕೊಂಡು ಪ್ರಯಾಣಿಸುತ್ತಿದ್ದ ದೃಶ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಕಾರ್ಕಳ: ಅಜೆಕಾರು-ಕಡ್ತಲ-ದೊಂಡೆರಂಗಡಿ ಮಾರ್ಗವಾಗಿ ಹರಿಖಂಡಿಗೆ, ಪೆರ್ಡೂರು ಮೂಲಕ ಉಡುಪಿಗೆ ಸಂಚರಿಸುತ್ತಿದ್ದ ಖಾಸಗಿ ಬಸ್‌ನಲ್ಲಿ ವಿದ್ಯಾರ್ಥಿಗಳು ಬಸ್‌ನ ಹಿಂಭಾಗದ ಏಣಿಯಲ್ಲಿ ನೇತಾಡಿಕೊಂಡು ಪ್ರಯಾಣಿಸುತ್ತಿದ್ದ ದೃಶ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಈ ಘಟನೆ ಬುಧವಾರ ಮುಂಜಾನೆ ನಡೆದಿದ್ದು, ಶಾಲಾ ವಿದ್ಯಾರ್ಥಿಗಳಿಗಾಗಿ ಸಂಚರಿಸುವ ಒಂದು ಬಸ್ ಆ ದಿನ ಬಾರದ ಹಿನ್ನೆಲೆಯಲ್ಲಿ ಹೆಚ್ಚಿನ ಸಂಖ್ಯೆಯ ವಿದ್ಯಾರ್ಥಿಗಳು, ಕೂಲಿ ಕಾರ್ಮಿಕರು ಹಾಗೂ ಇತರ ಪ್ರಯಾಣಿಕರು ಇದೇ ಖಾಸಗಿ ಬಸ್ ಅನ್ನು ಆಶ್ರಯಿಸಿದ್ದರು ಎನ್ನಲಾಗಿದೆ.ಬಸ್‌ನಲ್ಲಿ ಜನಸಂದಣಿ ಹೆಚ್ಚಿದ್ದರಿಂದ ಕೆಲ ವಿದ್ಯಾರ್ಥಿಗಳು ಹಿಂಭಾಗದ ಏಣಿಯಲ್ಲಿ ನೇತಾಡಿಕೊಂಡೇ ಪ್ರಯಾಣಿಸುತ್ತಿದ್ದರು. ಇದೇ ವೇಳೆ ಹಿಂದೆ ಕಾರಿನಲ್ಲಿ ಬರುತ್ತಿದ್ದ ಪ್ರಯಾಣಿಕರು ಈ ಅಪಾಯಕಾರಿ ದೃಶ್ಯವನ್ನು ಮೊಬೈಲ್‌ನಲ್ಲಿ ಚಿತ್ರೀಕರಿಸಿ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದು, ವೀಡಿಯೋ ವೈರಲ್ ಆಗಿದೆ. ಘಟನೆಗೆ ಸಂಬಂಧಿಸಿದಂತೆ ವೈರಲ್ ಆದ ವೀಡಿಯೋವನ್ನು ಗಮನಿಸಿದ ಪೊಲೀಸ್ ಇಲಾಖೆ, ಬಸ್ ವಿರುದ್ಧ ಸಂಚಾರ ನಿಯಮ ಉಲ್ಲಂಘನೆ ಪ್ರಕರಣ ದಾಖಲಿಸಿ ದಂಡ ವಿಧಿಸಿದೆ ಎಂದು ತಿಳಿದುಬಂದಿದೆ.