ಕಳೆದ ಕೆಲವು ದಿನಗಳಿಂದ ಸುರಿಯುತ್ತಿರುವ ಭಾರೀ ಮಳೆಯ ಪರಿಣಾಮ ಕಾರ್ಕಳ ತಾಲೂಕಿನ ರೆಂಜಾಳ ಗ್ರಾಮದ ಹೆರ್ಮೆ ಪ್ರದೇಶದಲ್ಲಿ ಸಂಭವಿಸಿದ ಭೂಕುಸಿತ ಸ್ಥಳಕ್ಕೆ ಕಾರ್ಕಳ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಶುಭದರಾವ್ ಅವರ ನೇತೃತ್ವದ ಕಾಂಗ್ರೆಸ್ ನಿಯೋಗ ಭೇಟಿ ನೀಡಿ ಸ್ಥಳ ಪರಿಶೀಲನೆ ನಡೆಸಿತು.

ಕನ್ನಡಪ್ರಭ ವಾರ್ತೆ ಕಾರ್ಕಳಕಳೆದ ಕೆಲವು ದಿನಗಳಿಂದ ಸುರಿಯುತ್ತಿರುವ ಭಾರೀ ಮಳೆಯ ಪರಿಣಾಮ ಕಾರ್ಕಳ ತಾಲೂಕಿನ ರೆಂಜಾಳ ಗ್ರಾಮದ ಹೆರ್ಮೆ ಪ್ರದೇಶದಲ್ಲಿ ಸಂಭವಿಸಿದ ಭೂಕುಸಿತ ಸ್ಥಳಕ್ಕೆ ಕಾರ್ಕಳ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಶುಭದರಾವ್ ಅವರ ನೇತೃತ್ವದ ಕಾಂಗ್ರೆಸ್ ನಿಯೋಗ ಭೇಟಿ ನೀಡಿ ಸ್ಥಳ ಪರಿಶೀಲನೆ ನಡೆಸಿತು.ಭೂಕುಸಿತದ ಅಪಾಯದ ವ್ಯಾಪ್ತಿಗೆ ಒಳಪಡುವ ಪ್ರದೇಶದಲ್ಲಿರುವ ಕೆಲವು ಮನೆಗಳ ನಿವಾಸಿಗಳನ್ನು ಈಗಾಗಲೇ ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಲಾಗಿದೆ. ಇನ್ನೂ ಸ್ಥಳಾಂತರದ ಅಗತ್ಯವಿರುವ ಕುಟುಂಬಗಳಿಗೆ ತಾತ್ಕಾಲಿಕ ವಸತಿ ಸೇರಿದಂತೆ ಅಗತ್ಯ ನೆರವು ಒದಗಿಸಲು ಕಾಂಗ್ರೆಸ್ ಪಕ್ಷದ ವತಿಯಿಂದ ಸಹಕಾರ ನೀಡುವುದಾಗಿ ಶುಭದರಾವ್ ಭರವಸೆ ನೀಡಿದರು.ಈ ಸಂದರ್ಭ ಸ್ಥಳೀಯ ಮುಖಂಡ ಹಾಗೂ ಭೂ ನ್ಯಾಯ ಮಂಡಳಿ ಸದಸ್ಯ ರಮೇಶ್ ಶೆಟ್ಟಿ, ಗ್ಯಾರಂಟಿ ಸಮಿತಿ ಅಧ್ಯಕ್ಷ ಅಜಿತ್ ಹೆಗ್ಡೆ ಮಾಳ, ಕೆ.ಎಂ.ಎಫ್. ನಿರ್ದೇಶಕ ಸುಧಾಕರ್ ಶೆಟ್ಟಿ, ಪುರಸಭೆಯ ಮಾಜಿ ಸದಸ್ಯ ವಿವೇಕ್ ಶೆಣೈ, ಸಂದೇಶ್ ಜೈನ್ ಸೇರಿದಂತೆ ಇತರರು ಉಪಸ್ಥಿತರಿದ್ದರು.