ವಿದ್ಯಾರ್ಥಿಗಳ ಕನಸುಗಳಿಗೆ ದಿಕ್ಕು ತೋರಿಸಿ, ಭವಿಷ್ಯದ ಸಾಧನೆಗೆ ಭದ್ರ ಬುನಾದಿ ಹಾಕುವ ಉದ್ದೇಶದಿಂದ ಕಾರ್ಕಳದ ಕ್ರಿಯೇಟಿವ್ ಪಪೂ ಕಾಲೇಜಿನಲ್ಲಿ ಪ್ರಥಮ ಪಿಯುಸಿ ವಿದ್ಯಾರ್ಥಿಗಳ ಶಿಕ್ಷಕ- ಪೋಷಕರ ಸಭೆ ಕಾಲೇಜಿನಲ್ಲಿ ಶುಕ್ರವಾರ ನಡೆಯಿತು.
ಕಾರ್ಕಳ: ವಿದ್ಯಾರ್ಥಿಗಳ ಕನಸುಗಳಿಗೆ ದಿಕ್ಕು ತೋರಿಸಿ, ಭವಿಷ್ಯದ ಸಾಧನೆಗೆ ಭದ್ರ ಬುನಾದಿ ಹಾಕುವ ಉದ್ದೇಶದಿಂದ ಕಾರ್ಕಳದ ಕ್ರಿಯೇಟಿವ್ ಪಪೂ ಕಾಲೇಜಿನಲ್ಲಿ ಪ್ರಥಮ ಪಿಯುಸಿ ವಿದ್ಯಾರ್ಥಿಗಳ ಶಿಕ್ಷಕ- ಪೋಷಕರ ಸಭೆ ಕಾಲೇಜಿನಲ್ಲಿ ಶುಕ್ರವಾರ ನಡೆಯಿತು. ಅಂಕಗಳಾಚೆಗೆ ಜ್ಞಾನ, ಪಠ್ಯಕ್ರಮದಾಚೆಗೆ ಗುರಿ, ಶಿಕ್ಷಣದಾಚೆಗೆ ಬದುಕಿನ ಸಾಧನೆ ಎಂಬ ಆಶಯಕ್ಕೆ ಪೂರಕವಾಗಿ ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿ, ಕಲಿಕಾ ಸಾಮರ್ಥ್ಯ, ಶಿಸ್ತು, ಭವಿಷ್ಯದ ಗುರಿಗಳು ಹಾಗೂ ಸ್ಪರ್ಧಾತ್ಮಕ ಪರೀಕ್ಷೆಗಳ ಸಿದ್ಧತೆಯ ಕುರಿತು ಸಭೆಯಲ್ಲಿ ಸಮಗ್ರವಾಗಿ ಚರ್ಚಿಸಲಾಯಿತು.
ಸಭೆಯ ಅಧ್ಯಕ್ಷತೆಯನ್ನು ವಹಿಸಿದ ಸಂಸ್ಥೆಯ ಸಹಸಂಸ್ಥಾಪಕ ಗಣಪತಿ ಭಟ್ ಕೆ.ಎಸ್., ಶಿಕ್ಷಣದ ಈ ಹಂತದಲ್ಲಿ ತೆಗೆದುಕೊಳ್ಳುವ ನಿರ್ಧಾರಗಳು ಅವರ ಉನ್ನತ ಶಿಕ್ಷಣ ಮತ್ತು ವೃತ್ತಿಜೀವನಕ್ಕೆ ದಾರಿದೀಪವಾಗುತ್ತವೆ. ಈ ನಿಟ್ಟಿನಲ್ಲಿ ಕ್ರಿಯೇಟಿವ್ ಕಾಲೇಜು ವಿದ್ಯಾರ್ಥಿಗಳನ್ನು ಪಠ್ಯಪುಸ್ತಕದ ಜ್ಞಾನಕ್ಕೆ ಸೀಮಿತ ಮಾಡದೆ, ಉನ್ನತ ಶಿಕ್ಷಣದ ಪ್ರವೇಶ ಪರೀಕ್ಷೆಗಳಲ್ಲಿಯೂ ಯಶಸ್ಸಿಗೆ ಅಗತ್ಯ ಮಾರ್ಗದರ್ಶನವನ್ನು ನೀಡುತ್ತಿದೆ. ಅಲ್ಲದೇ ಪಿಯುಸಿ ಪಠ್ಯಕ್ರಮದೊಂದಿಗೆ ಜೆಇಇ, ಕೆಸಿಇಟಿ, ಎನ್ಡಿಎ ಹಾಗೂ ನೀಟ್ ಸೇರಿದಂತೆ ಪ್ರಮುಖ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ವಿಶೇಷ ತರಬೇತಿ ನೀಡಿ, ಮುಂದಿನ ಶೈಕ್ಷಣಿಕ ಸವಾಲುಗಳಿಗೆ ಸಜ್ಜುಗೊಳಿಸಲಾಗುತ್ತಿದೆ ಎಂದು ಹೇಳಿದರು.ವೇದಿಕೆಯಲ್ಲಿ ಆಂಗ್ಲ ಭಾಷೆ ಉಪನ್ಯಾಸಕ ರಾಜೇಶ್ ಶೆಟ್ಟಿ ಉಪಸ್ಥಿತರಿದ್ದರು. ಡಾ. ಪ್ರಜ್ವಲ್ ಕಾರ್ಯಕ್ರಮ ನಡೆಸಿಕೊಟ್ಟರು, ಭೋದಕ-ಬೋಧಕೇತರ ಸಿಬ್ಬಂದಿಗಳು ಹಾಗೂ ಪೋಷಕರು ಉಪಸ್ಥಿತರಿದ್ದರು.