ಕಾರ್ಕಳ ಗ್ಯಾಂಗ್ ರೇಪ್ ಕಾಮಾಂಧರಿಗೆ ಕಠಿಣ ಶಿಕ್ಷೆಯಾಗಲಿ: ನಯನಾ ಗಣೇಶ್

| Published : Aug 25 2024, 01:51 AM IST

ಕಾರ್ಕಳ ಗ್ಯಾಂಗ್ ರೇಪ್ ಕಾಮಾಂಧರಿಗೆ ಕಠಿಣ ಶಿಕ್ಷೆಯಾಗಲಿ: ನಯನಾ ಗಣೇಶ್
Share this Article
  • FB
  • TW
  • Linkdin
  • Email

ಸಾರಾಂಶ

ಪೊಲೀಸ್ ಇಲಾಖೆ ಈ ಘಟನೆಯನ್ನು ಗಂಭೀರವಾಗಿ ಪರಿಗಣಿಸಿ, ಘಟನೆಯ ಹಿಂದಿನ ಎಲ್ಲಾ ಮತಾಂಧ ಆರೋಪಿಗಳನ್ನು ಬಂಧಿಸಿ, ಅಪರಾಧಿಗಳಿಗೆ ಕಾನೂನು ರೀತಿಯ ಕಠಿಣ ಶಿಕ್ಷೆ ವಿಧಿಸಬೇಕು ಎಂದು ನಯನಾ ಗಣೇಶ್ ಪತ್ರಿಕಾ ಪ್ರಕಟಣೆಯಲ್ಲಿ ಆಗ್ರಹಿಸಿದ್ದಾರೆ.

ಕನ್ನಡಪ್ರಭ ವಾರ್ತೆ ಉಡುಪಿ

ಕಾರ್ಕಳ ನಗರ ಪೋಲಿಸ್ ಠಾಣಾ ವ್ಯಾಪ್ತಿಯಲ್ಲಿ ಸಮಾಜಘಾತುಕರು ಹಿಂದೂ ಯುವತಿಯೋರ್ವಳನ್ನು ಅಪಹರಿಸಿ, ಬಲವಂತಾಗಿ ಅಮಲು ಪದಾರ್ಥವನ್ನು ಕುಡಿಸಿ ಗ್ಯಾಂಗ್ ರೇಪ್ ನಡೆಸಿರುವ ಅಮಾನುಷ ಕೃತ್ಯ ಅತ್ಯಂತ ಖಂಡನೀಯ ಎಂದು ಬಿಜೆಪಿ ನಿಕಟಪೂರ್ವ ರಾಜ್ಯ ಉಪಾಧ್ಯಕ್ಷೆ ನಯನಾ ಗಣೇಶ್ ತಿಳಿಸಿದ್ದಾರೆ.ಸುಶಿಕ್ಷಿತ ಕರಾವಳಿ ಜಿಲ್ಲೆಯಲ್ಲಿ ಇಂತಹ ಹೇಯ ಘಟನೆ ನಡೆದಿರುವುದು ನಾಗರಿಕ ಸಮಾಜವನ್ನು ತಲೆ ತಗ್ಗಿಸುವಂತೆ ಮಾಡಿದೆ. ಶಿಕ್ಷಣ ಮತ್ತು ಉದ್ಯೋಗಕ್ಕಾಗಿ ಬೇರೆ ಜಿಲ್ಲೆಯ ಯುವತಿಯರು ಉಡುಪಿ ಜಿಲ್ಲೆಗೆ ಆಗಮಿಸುತ್ತಿರುವುದು ಸ್ವಾಭಾವಿಕ. ಆದರೆ ಕೆಲವು ಮತಾಂಧ ದುಷ್ಟ ಶಕ್ತಿಗಳು ಯುವತಿಯರನ್ನು ಟಾರ್ಗೆಟ್ ಮಾಡುತ್ತಿದ್ದು, ರಾಜ್ಯದಲ್ಲಿ ಮಹಿಳೆಯರಿಗೆ ರಕ್ಷಣೆಯೇ ಇಲ್ಲ ಎಂಬಂತಾಗಿದೆ ಎಂದವರು ಆತಂಕ ವ್ಯಕ್ತಪಡಿಸಿದ್ದಾರೆ.ಪೊಲೀಸ್ ಇಲಾಖೆ ಈ ಘಟನೆಯನ್ನು ಗಂಭೀರವಾಗಿ ಪರಿಗಣಿಸಿ, ಘಟನೆಯ ಹಿಂದಿನ ಎಲ್ಲಾ ಮತಾಂಧ ಆರೋಪಿಗಳನ್ನು ಬಂಧಿಸಿ, ಅಪರಾಧಿಗಳಿಗೆ ಕಾನೂನು ರೀತಿಯ ಕಠಿಣ ಶಿಕ್ಷೆ ವಿಧಿಸಬೇಕು ಎಂದು ನಯನಾ ಗಣೇಶ್ ಪತ್ರಿಕಾ ಪ್ರಕಟಣೆಯಲ್ಲಿ ಆಗ್ರಹಿಸಿದ್ದಾರೆ.