ಕಾರ್ಕಳ: ಇಲ್ಲಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಕೇಂದ್ರದ ಐಕ್ಯುಎಸಿ, ದೈಹಿಕ ಶಿಕ್ಷಣ ವಿಭಾಗ, ಯುವ ರೆಡ್ ಕ್ರಾಸ್ ಹಾಗೂ ಎನ್‌ಎಸ್‌ಎಸ್ ವತಿಯಿಂದ ಸಹಜ ಯೋಗ ಅರಿವು ಕಾರ್ಯಕ್ರಮ ಬುಧವಾರ ನಡೆಯಿತು.

ಮಾನಸಿಕ ಒತ್ತಡವನ್ನು ಸಹಜ ಯೋಗದ ಮೂಲಕ ನಿವಾರಿಸಿಕೊಳ್ಳಬಹುದು ಎಂದು ಸಂಪನ್ಮೂಲ ವ್ಯಕ್ತಿಯಾಗಿದ್ದ ಭರಣಿರಾಮ ಭಾಸ್ಕರ ಭಟ್ಟ ಅಭಿಪ್ರಾಯಪಟ್ಟರು. ವಿದ್ಯಾರ್ಥಿಗಳಿಗೆ ಸಹಜ ಯೋಗದ ಪ್ರಾತ್ಯಕ್ಷಿಕೆ ನೀಡಿ, ದಿನನಿತ್ಯದ ಜೀವನದಲ್ಲಿ ಅದನ್ನು ಅಳವಡಿಸಿಕೊಳ್ಳುವಂತೆ ಕರೆ ನೀಡಿದರು.ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಂಶುಪಾಲ ಡಾ. ವಿದ್ಯಾಧರ ಎಸ್. ಹೆಗ್ಡೆ ಮಾತನಾಡಿ, ಯೋಗ ಮತ್ತು ಧ್ಯಾನದಿಂದ ತಮಗೆ ಆಗಿರುವ ಪ್ರಯೋಜನಗಳನ್ನು ಹಂಚಿಕೊಂಡರು.ಎನ್‌ಎಸ್‌ಎಸ್ ಯೋಜನಾಧಿಕಾರಿ ಪ್ರವೀಣ್ ಶೆಟ್ಟಿ ಸ್ವಾಗತಿಸಿದರು. ದೈಹಿಕ ಶಿಕ್ಷಣ ನಿರ್ದೇಶಕ ಡಾ. ಮನೋಜ್ ಕುಮಾರ್ ವಂದಿಸಿದರು.ಕಾಲೇಜಿನ ವಿದ್ಯಾರ್ಥಿ ಕ್ಷೇಮಪಾಲನಾ ಸಮಿತಿಯ ಸಂಚಾಲಕ ಸುಷ್ಮಾ ರಾವ್, ಐಕ್ಯುಎಸಿ ಸಂಚಾಲಕ ಡಾ. ಗಣೇಶ್ ಎಸ್., ಇತಿಹಾಸ ಪ್ರಾಧ್ಯಾಪಕ ಅರುಣಾಚಲ, ಅರ್ಥಶಾಸ್ತ್ರ ಪ್ರಾಧ್ಯಾಪಕ ಪದ್ಮನಾಭ ಶೆಟ್ಟಿ, ಉಪನ್ಯಾಸಕರು ಹಾಗೂ ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.