ಕಾರ್ಕಳ: ಕಾರ್ಕಳ ಜ್ಞಾನಸುಧಾ ಆಂಗ್ಲ ಮಾಧ್ಯಮ ಶಾಲೆ ಮತ್ತು ಪ್ರೌಢಶಾಲೆಯಲ್ಲಿ ಗುರು ಪೂರ್ಣಿಮೆಯನ್ನು ಬುಧವಾರ ಆಚರಿಸಲಾಯಿತು.ಕಾರ್ಯಕ್ರಮ ಉದ್ಘಾಟಿಸಿದ ಕಾರ್ಕಳ ಶ್ರೀಮದ್ ಭುವನೇಂದ್ರ ಪ್ರೌಢಶಾಲೆಯ ಮುಖ್ಯೋಪಾಧ್ಯಾಯ ಆರ್. ನಾರಾಯಣ ಶೆಣೈ ಮಾತನಾಡಿ, ಆತ್ಮವಿಶ್ವಾಸ, ತಾಳ್ಮೆ ಹಾಗೂ ವಿನಯ ಹೊಂದಿರುವ ವ್ಯಕ್ತಿಯೇ ಶ್ರೇಷ್ಠ ಗುರುವಾಗುತ್ತಾನೆ ಎಂದರು.
ಜ್ಞಾನಸುಧಾ ಆಂಗ್ಲ ಮಾಧ್ಯಮ ಶಾಲೆ ಮತ್ತು ಪ್ರೌಢಶಾಲೆಯ ಹಿರಿಯ ಶಿಕ್ಷಕಿಯರಾದ ಪ್ರಿಯಾ ಹಾಗೂ ವೈಶಾಲಿ ಲಕ್ಷ್ಮಣ ಮೊಯ್ಲಿ ಇದ್ದರು. ವಿದ್ಯಾರ್ಥಿನಿ ಅವನಿ ಪೈ ಗುರುವಿನ ಮಹತ್ವದ ಕುರಿತು ಮಾತನಾಡಿದರು.ಜ್ಞಾನಸುಧಾ ಶಿಕ್ಷಣ ಸಂಸ್ಥೆಗಳ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಹಾಗೂ ಜ್ಞಾನಸುಧಾ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ದಿನೇಶ್ ಎಂ. ಕೊಡವೂರು, ಜ್ಞಾನಸುಧಾ ಆಂಗ್ಲ ಮಾಧ್ಯಮ ಶಾಲೆ ಮತ್ತು ಪ್ರೌಢಶಾಲೆಯ ಪ್ರಾಂಶುಪಾಲೆ ವಾಣಿ ಕೆ., ಜ್ಞಾನಸುಧಾ ಪದವಿ ಪೂರ್ವ ಕಾಲೇಜಿನ ಉಪಪ್ರಾಂಶುಪಾಲೆ ಸಾಹಿತ್ಯ, ಸಾರ್ವಜನಿಕ ಸಂಪರ್ಕಾಧಿಕಾರಿ ಜ್ಯೋತಿ ಪದ್ಮನಾಭ ಭಂಡಿ ಮತ್ತಿತರರಿದ್ದರು.
ವಿದ್ಯಾರ್ಥಿನಿ ತನ್ವಿ ಪ್ರಾರ್ಥಿಸಿದರು. ಶಿಕ್ಷಕಿ ವಿದ್ಯಾ ಸ್ವಾಗತಿಸಿದರು. ಶಿಕ್ಷಕಿ ಅನಿಶಾ ನಿರೂಪಿಸಿದರು. ಸುಪ್ರಿಯಾ ವಂದಿಸಿದರು.