ಸಾರಾಂಶ
ಕುಕ್ಕುಂದೂರು ಅಯ್ಯಪ್ಪನಗರದ ವಿಜೇತ ವಿಶೇಷ ಶಾಲೆಯಲ್ಲಿ ವಿಶ್ವ ವಿಕಲಚೇತನರ ದಿನಾಚರಣೆ ಪ್ರಯುಕ್ತ ಕಾನೂನು ಅರಿವು ಮಾಹಿತಿ ಕಾರ್ಯಕ್ರಮ ಆಯೋಜಿಸಲಾಯಿತು.
ಕನ್ನಡಪ್ರಭ ವಾರ್ತೆ ಕಾರ್ಕಳ
ಕಾರ್ಕಳ ತಾಲೂಕು ಕಾನೂನು ಸೇವೆಗಳ ಸಮಿತಿ ಮತ್ತು ಕಾರ್ಕಳ ನ್ಯಾಯವಾದಿಗಳ ಸಂಘಗಳ ಸಂಯುಕ್ತ ಆಶ್ರಯದಲ್ಲಿ ಇಲ್ಲಿನ ಕುಕ್ಕುಂದೂರು ಅಯ್ಯಪ್ಪನಗರದ ವಿಜೇತ ವಿಶೇಷ ಶಾಲೆಯಲ್ಲಿ ವಿಶ್ವ ವಿಕಲಚೇತನರ ದಿನಾಚರಣೆ ಪ್ರಯುಕ್ತ ಕಾನೂನು ಅರಿವು ಮಾಹಿತಿ ಕಾರ್ಯಕ್ರಮ ಆಯೋಜಿಸಲಾಯಿತು.ಕಾರ್ಯಕ್ರಮವನ್ನು ಕಾರ್ಕಳ ತಾಲೂಕು ನ್ಯಾಯಾಲಯದ ಹಿರಿಯ ಸಿವಿಲ್ ಮತ್ತು ಎಸಿಜೆಎಂ ನ್ಯಾಯಾಧೀಶೆ ಶರ್ಮಿಳಾ ಸಿ. ಎಸ್. ಉದ್ಘಾಟಿಸಿದರು.ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ನ್ಯಾಯವಾದಿಗಳ ಸಂಘದ ಉಪಾಧ್ಯಕ್ಷ ಕೆ.ಹರೀಶ್ ಅಧಿಕಾರಿ ಉಪಸ್ಥಿತರಿದ್ದರು. ಸಂಪನ್ಮೂಲ ವ್ಯಕ್ತಿಗಳಾಗಿ ನ್ಯಾಯವಾದಿಗಳಾದ ಶುಭಾ, ಉದ್ಯಮಿ ಶ್ರೀಧರ್ ಭಂಡಾರಿ ಇನ್ನಾ ಕಾನೂನು ಮಾಹಿತಿ ನೀಡಿದರು. ಇದೇ ಸಂದರ್ಭ ಅವರು ವಿಶೇಷ ಮಕ್ಕಳಿಗಾಗಿ ಮಾಡಿದ ಸೇವೆಯನ್ನು ಗುರುತಿಸಿ ಗೌರವಿಸಲಾಯಿತು.ಅಲ್ಲದೆ ಮಂಗಳೂರು ವಿಶ್ವವಿದ್ಯಾಲಯದ ವತಿಯಿಂದ ಉಡುಪಿ ಜಿಲ್ಲಾ ಮಹಾತ್ಮ ಗಾಂಧಿ ಕ್ರೀಡಾಂಗಣದಲ್ಲಿ ನಡೆದ ಕ್ರೀಡಾಕೂಟದ ಪದಕಗಳನ್ನು ಗೆದ್ದ ವಿಜೇತ ಶಾಲೆಯ ಮಕ್ಕಳಿಗೆ ನ್ಯಾಯಾಧೀಶರು ಪ್ರಶಸ್ತಿ ನೀಡಿ ಗೌರವಿಸಿದರು. ಸಭಾಧ್ಯಕ್ಷತೆಯನ್ನು ಶಾಲಾ ಸ್ಥಾಪಕಿ ಡಾ.ಕಾಂತಿ ಹರೀಶ್ ವಹಿಸಿದ್ದು, ಶಿಕ್ಷಕರು ಮತ್ತು ಶಿಕ್ಷಕೇತರು ಹಾಗೂ ಮುಗ್ಧ ಮಕ್ಕಳು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು. ವಿಶೇಷ ಶಿಕ್ಷಕಿ ಹರ್ಷಿತಾ ಕಿರಣ್ ಕಾರ್ಯಕ್ರಮ ನಿರೂಪಿಸಿದರು. ಡಾ. ಕಾಂತಿ ಹರೀಶ್ ಸ್ವಾಗತಿಸಿದರು. ವಿಶೇಷ ಶಿಕ್ಷಕಿ ಸುಪ್ರೀತಾ ವಂದಿಸಿದರು.