ಕಾರ್ಕಳದ ಜನತೆಯ ಬಹುವರ್ಷಗಳ ಬೇಡಿಕೆಯಾಗಿದ್ದ ಯೋಜನಾ ಪ್ರಾಧಿಕಾರವನ್ನು ರಾಜ್ಯ ಸರ್ಕಾರ ಮಂಜೂರು ಮಾಡಿರುವುದು ಸಂತಸದ ವಿಚಾರ. ಜನರ ಸಮಸ್ಯೆಗಳಿಗೆ ಸ್ಪಂದಿಸಿ ನೂತನ ಆದೇಶ ಹೊರಡಿಸಿದೆ ಎಂದು ಕಾಂಗ್ರೆಸ್ ನಾಯಕ ಉದಯ ಶೆಟ್ಟಿ ಮುನಿಯಾಲು ತಿಳಿಸಿದ್ದಾರೆ.
ಕಾರ್ಕಳ: ಕಾರ್ಕಳದ ಜನತೆಯ ಬಹುವರ್ಷಗಳ ಬೇಡಿಕೆಯಾಗಿದ್ದ ಯೋಜನಾ ಪ್ರಾಧಿಕಾರವನ್ನು ರಾಜ್ಯ ಸರ್ಕಾರ ಮಂಜೂರು ಮಾಡಿರುವುದು ಸಂತಸದ ವಿಚಾರ. ಜನರ ಸಮಸ್ಯೆಗಳಿಗೆ ಸ್ಪಂದಿಸಿ ನೂತನ ಆದೇಶ ಹೊರಡಿಸಿದೆ ಎಂದು ಕಾಂಗ್ರೆಸ್ ನಾಯಕ ಉದಯ ಶೆಟ್ಟಿ ಮುನಿಯಾಲು ತಿಳಿಸಿದ್ದಾರೆ. ಇಲ್ಲಿಯವರೆಗೆ ಏಕ ವಿನ್ಯಾಸ ಅನುಮತಿ ಹಾಗೂ ಭೂ ಪರಿವರ್ತನೆ ಸೇರಿದಂತೆ ವಿವಿಧ ಕೆಲಸಗಳಿಗಾಗಿ ಕಾಪು ಯೋಜನಾ ಪ್ರಾಧಿಕಾರ ಮತ್ತು ಉಡುಪಿ ಕಚೇರಿಗಳಿಗೆ ಅಲೆದಾಡಬೇಕಾಗಿತ್ತು. ರಾಜ್ಯ ಸರ್ಕಾರದ ಈ ನಿರ್ಧಾರದಿಂದ ಕಾರ್ಕಳದ ಜನರಿಗೆ ಹೆಚ್ಚಿನ ಅನುಕೂಲವಾಗಲಿದ್ದು, ಅಗತ್ಯ ದಾಖಲೆಗಳಿಗಾಗಿ ದೂರದ ಊರುಗಳಿಗೆ ತೆರಳುವ ಅನಿವಾರ್ಯತೆ ತಪ್ಪಲಿದೆ ಎಂದು ಅವರು ತಿಳಿಸಿದ್ದಾರೆ. ಉದ್ಯೋಗಾವಕಾಶಗಳ ಸೃಷ್ಟಿಗೂ ಸಹಕಾರಿಯಾಗಲಿದೆ ಎಂದು ಉದಯ ಶೆಟ್ಟಿ ಮುನಿಯಾಲು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.