ಸಾರಾಂಶ
ಅಯ್ಯಪ್ಪ ನಗರದ ವಿಜೇತ ವಿಶೇಷ ಮಕ್ಕಳ ಶಾಲೆಯಲ್ಲಿ ೭೬ನೇ ಗಣರಾಜ್ಯೋತ್ಸವವನ್ನು ಸಂಭ್ರಮದಿಂದ ಆಚರಿಸಲಾಯಿತು. ಕಾರ್ಯಕ್ರಮದಂಗವಾಗಿ ಎನ್‌ಸಿಎಸ್ ಗ್ರೂಪ್ ಚಾರ್ಟೆಡ್ ಅಕೌಂಟೆಂಟ್ ನಿತೇಶ್ ಶೆಟ್ಟಿ ಧ್ವಜಾರೋಹಣ ನೆರವೇರಿಸಿ ಶುಭ ಹಾರೈಸಿದರು.
ಕನ್ನಡಪ್ರಭ ವಾರ್ತೆ ಕಾರ್ಕಳ
ಇಲ್ಲಿನ ಅಯ್ಯಪ್ಪ ನಗರದ ವಿಜೇತ ವಿಶೇಷ ಮಕ್ಕಳ ಶಾಲೆಯಲ್ಲಿ ೭೬ನೇ ಗಣರಾಜ್ಯೋತ್ಸವವನ್ನು ಸಂಭ್ರಮದಿಂದ ಆಚರಿಸಲಾಯಿತು. ಕಾರ್ಯಕ್ರಮದಂಗವಾಗಿ ಎನ್‌ಸಿಎಸ್ ಗ್ರೂಪ್ ಚಾರ್ಟೆಡ್ ಅಕೌಂಟೆಂಟ್ ನಿತೇಶ್ ಶೆಟ್ಟಿ ಧ್ವಜಾರೋಹಣ ನೆರವೇರಿಸಿ ಶುಭ ಹಾರೈಸಿದರು.ಈ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಜನಪ್ರಿಯ ರೈಸ್ ಮಿಲ್ ಮಾಲಕರಾದ ಮಂಜುನಾಥ್, ವಿಜೇತ ವಿಶೇಷ ಶಾಲಾ ಅಧ್ಯಕ್ಷ ರತ್ನಾಕರ್ ಅಮೀನ್, ಶ್ರೀ ದುರ್ಗಾ ವಿದ್ಯಾ ಸಂಘ ಅಧ್ಯಕ್ಷ ಕೆ. ರಾಧಾಕೃಷ್ಣ ಶೆಟ್ಟಿ, ಭಗವತಿ ಗ್ರೂಪ್‌ನ ಮುಖ್ಯಸ್ಥ ಯುವರಾಜ್ ಕುಲಾಲ್, ಸಂದೇಶ್ ಶೆಟ್ಟಿ, ಬ್ಯಾಂಕ್ ಸಿಬ್ಬಂದಿ ಶಿವಾನಂದ ನಾಯಕ್ ಆಗಮಿಸಿದ್ದರು. ಶಾಲೆಯ ಸಂಸ್ಥಾಪಕಿ ಡಾ.ಕಾಂತಿ ಹರೀಶ್ ಉಪಸ್ಥಿತರಿದ್ದರು.ಸಿಎ ನಿತೇಶ್ ಶೆಟ್ಟಿ ಅವರನ್ನು ಶಾಲಾ ವತಿಯಿಂದ ಗೌರವಿಸಲಾಯಿತು. ಮಂಜುನಾಥ್, ಶಾಲಾ ಮಕ್ಕಳಿಗೆ ಸಿಹಿತಿಂಡಿ ವಿತರಿಸಿದರು. ಯುವರಾಜ್ ಕುಲಾಲ್, ವಿಶೇಷ ಭೋಜನದ ವ್ಯವಸ್ಥೆಯನ್ನು ಮಾಡಿದರು.ವಿಶೇಷ ಶಿಕ್ಷಕಿ ಶ್ರೀನಿಧಿ ನಿರೂಪಿಸಿದರು. ಡಾ.ಕಾಂತಿ ಹರೀಶ್ ಸ್ವಾಗತಿಸಿ, ಪ್ರಾಸ್ತಾವಿಕ ಮಾತುಗಳನ್ನಾಡಿದರು. ವಿಶೇಷ ಶಿಕ್ಷಕಿ ಯಶೋಧಾ ವಂದಿಸಿದರು. ಪೋಷಕರು ಮಕ್ಕಳು ಹಾಗೂ ಸಿಬ್ಬಂದಿ ವರ್ಗದವರು ಕಾರ್ಯಕ್ರಮದಲ್ಲಿ ಪಾಲ್ಗೊಂಡರು.
-----------------------------ಭುವನೇಂದ್ರ ಕಾಲೇಜಲ್ಲಿ ಗಣರಾಜ್ಯೋತ್ಸವ ಆಚರಣೆ
ಕನ್ನಡಪ್ರಭ ವಾರ್ತೆ ಕಾರ್ಕಳಕಾರ್ಕಳದ ಭುವನೇಂದ್ರ ಕಾಲೇಜಿನಲ್ಲಿ 76ನೇ ಗಣರಾಜ್ಯೋತ್ಸವ ಆಚರಣೆ ನಡೆಯಿತು.ಪ್ರಾಂಶುಪಾಲ ಡಾ.ಮಂಜುನಾಥ ಎ. ಕೋಟ್ಯಾನ್ ಅವರು ಧ್ವಜಾರೋಹಣ ನೆರವೇರಿಸಿ, ಎಲ್ಲ ಕ್ಷೇತ್ರದಲ್ಲಿಯೂ ಭಾರತವು ಬೆಳವಣಿಗೆಯನ್ನು ಕಂಡಿದೆ. ಭಾರತ ವಿಶ್ವ ಗುರು ಆಗುವ ಎಲ್ಲ ಅರ್ಹತೆಗಳನ್ನು ಹೊಂದಿದೆ. ವಿದ್ಯಾರ್ಥಿಗಳು ದೇಶದ ಭವಿಷ್ಯತ್ತಿಗೆ ಕೊಡುಗೆಗಳನ್ನು ನೀಡುವ ಸಲುವಾಗಿಯೂ ಬೆಳೆಯಬೇಕಾದ ಅಗತ್ಯವಿದೆ. ಎನ್‌ಸಿಸಿ, ಎನ್ನೆಸ್ಸೆಸ್, ರೋವರ್ಸ್, ರೇಂಜರ್ಸ್, ರೆಡ್‌ಕ್ರಾಸ್‌ಗಳು ಅದಕ್ಕೆ ಪೂರಕವಾಗಿ ಕೆಲಸ ಮಾಡುತ್ತಿವೆ ಎಂದು ವಿದ್ಯಾರ್ಥಿಗಳ ಶ್ರಮವನ್ನು ಶ್ಲಾಘಿಸಿ ಮಾತನಾಡಿದರು.
ಕಾಲೇಜಿನ ಎನ್ನೆಸ್ಸೆಸ್, ಎನ್‌ಸಿಸಿ, ರೆಡ್ ಕ್ರಾಸ್, ರೋವರ್ಸ್, ರೇಂಜರ್ಸ್ ತಂಡಗಳಿಂದ ಪಥ ಸಂಚಲನ ನಡೆಯಿತು.ಪದವಿಪೂರ್ವ ಹಾಗೂ ಪದವಿ ಕಾಲೇಜಿನ ಎಲ್ಲ ಪ್ರಾಧ್ಯಾಪಕರು, ಸಿಬಂದಿ ವರ್ಗದವರು ಉಪಸ್ಥಿತರಿದ್ದರು.