ಸಾರಾಂಶ
ಕನ್ನಡಪ್ರಭ ವಾರ್ತೆ ಕಾರ್ಕಳ
ಕನ್ನಡ ಸಾಹಿತ್ಯ ಪರಿಷತ್ತು ಕಾರ್ಕಳ ತಾಲೂಕು ಘಟಕದ 25ನೇ ಕನ್ನಡ ಸಾಹಿತ್ಯ ಸಮ್ಮೇಳನದ ಆಮಂತ್ರಣ ಪತ್ರಿಕೆಯನ್ನು ಕಾರ್ಕಳದ ಹೋಟೆಲ್ ಪ್ರಕಾಶ್ ಸಭಾಭವನದಲ್ಲಿ ಕಾರ್ಕಳ ಯಕ್ಷ ಕಲಾರಂಗ ಅಧ್ಯಕ್ಷ ವಿಜಯ ಶೆಟ್ಟಿ ಬಿಡುಗಡೆಗೊಳಿಸಿದರು.ಸಮ್ಮೇಳನವು ಡಿ.6ರಂದು ನಾಲ್ಕೂರು ನರಸಿಂಗರಾಯ ಸ್ಮಾರಕ ಸರ್ಕಾರಿ ಪ್ರೌಢಶಾಲೆ ಶಿರ್ಲಾಲು ಇದರ ಬೆಳ್ಳಿಹಬ್ಬದ ಸಂಭ್ರಮದಲ್ಲಿ ನಡೆಯಲಿದೆ.
ಸಮ್ಮೇಳನದ ಸರ್ವಾಧ್ಯಕ್ಷತೆಯನ್ನು ಜಾನಪದ ವಿದ್ವಾಂಸ ಕೆ.ಗುಣಪಾಲ ಕಡಂಬ ವಹಿಸಲಿದ್ದಾರೆ.ಕಾರ್ಕಳ ತಾಲೂಕು ಘಟಕ ಅಧ್ಯಕ್ಷ ಪ್ರಭಾಕರ್ ಶೆಟ್ಟಿ ಕೊಂಡಳ್ಳಿ ಎಲ್ಲರನ್ನು ಸ್ವಾಗತಿಸಿದರು. ಕಾರ್ಯಕ್ರಮದಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ಉಡುಪಿ ಜಿಲ್ಲೆಯ ಗೌರವ ಕಾರ್ಯದರ್ಶಿ ಸುಬ್ರಹ್ಮಣ್ಯ ಶೆಟ್ಟಿ, ಉಡುಪಿ ಜಿಲ್ಲಾ ಪ್ರತಿನಿಧಿ ಎಸ್.ನಿತ್ಯಾನಂದ ಪೈ, ಶಿರ್ಲಾಲು ಪ್ರೌಢ ಶಾಲಾ ಹಳೆ ವಿದ್ಯಾರ್ಥಿ ಸಂಘ ಅಧ್ಯಕ್ಷ ಶೀತಲ್ ಕುಮಾರ್ ಜೈನ್, ಇರ್ವತ್ತೂರು ಗ್ರಾಮ ಪಂಚಾಯಿತಿ ಅಧ್ಯಕ್ಷ ಭರತ್ ಜೈನ್, ಶಿರ್ಲಾಲು ಸರ್ಕಾರಿ ಪದವಿ ಪೂರ್ವ ಕಾಲೇಜು ಪ್ರಾಂಶುಪಾಲ ಬೇಬಿ ಕೆ. ಈಶ್ವರ ಮಂಗಲ, ಶಿರ್ಲಾಲು ಸರ್ಕಾರಿ ಪ್ರೌಢಶಾಲಾ ಬೆಳ್ಳಿಹಬ್ಬ ಸಮಿತಿ ಕಾರ್ಯದರ್ಶಿ ಸತೀಶ್ ವಡ್ಡರ್ಸೆ, ಕಾರ್ಕಳ ಕಸಾಪ ಘಟಕದ ಗೌರವ ಕಾರ್ಯದರ್ಶಿ ಗಣೇಶ್ ಜಾಲ್ಸೂರು, ಸದಸ್ಯರಾದ ಶಿವಸುಬ್ರಹ್ಮಣ್ಯ ಭಟ್, ತಿಪ್ಪೇಸ್ವಾಮಿ, ಸುಲೋಚನಾ ಬಿ.ವಿ., ಡಾ.ಸುಮತಿ ಪಿ., ಮಾಲತಿ ಜಿ. ಪೈ, ಶೈಲಜಾ ಹೆಗಡೆ ಆಳ್ವಾಸ್, ಉಪನ್ಯಾಸಕ ಅಂಬರೀಶ್ ಚಿಪ್ಳೂಣ್ಕರ್ ಹಾಗೂ ಜಿಲ್ಲಾ ಮಾಧ್ಯಮ ಪ್ರತಿನಿಧಿ ನರಸಿಂಹ ಮೂರ್ತಿ ಉಪಸ್ಥಿತರಿದ್ದರು.
ಸಂಘಟನಾ ಕಾರ್ಯದರ್ಶಿ ಗಣೇಶ್ ಜಾಲ್ಸೂರು ನಿರೂಪಿಸಿದರು. ಗೌರವ ಕಾರ್ಯದರ್ಶಿ ದೇವದಾಸ ಕೆರೆಮನೆ ವಂದಿಸಿದರು.