ಕಾರ್ಕಳ: ‘ಸ್ಟಾಪ್ ವೋಟ್ ಚೋರಿ’ ಸಹಿ ಸಂಗ್ರಹ ಅಭಿಯಾನ

| Published : Oct 27 2025, 12:30 AM IST

ಸಾರಾಂಶ

ಲೋಕಸಭಾ ಚುನಾವಣೆಯಲ್ಲಿ ನಡೆದ ಮತಗಳ್ಳತನದ ವಿರುದ್ಧವಾಗಿ ಲೋಕಸಭಾ ವಿಪಕ್ಷ ನಾಯಕ ರಾಹುಲ್ ಗಾಂಧಿ ದೇಶವ್ಯಾಪಿಯಾಗಿ ಪ್ರಾರಂಭಿಸಿರುವ ‘ಸ್ಟಾಪ್ ವೋಟ್ ಚೋರಿ’ ಅಭಿಯಾನಕ್ಕೆ ಬೆಂಬಲವಾಗಿ ಕಾರ್ಕಳ ಕಾಂಗ್ರೆಸ್ ವತಿಯಿಂದ ಸಹಿ ಸಂಗ್ರಹ ಅಭಿಯಾನ ನಡೆಯಿತು.

ಕನ್ನಡಪ್ರಭ ವಾರ್ತೆ ಕಾರ್ಕಳ

ಲೋಕಸಭಾ ಚುನಾವಣೆಯಲ್ಲಿ ನಡೆದ ಮತಗಳ್ಳತನದ ವಿರುದ್ಧವಾಗಿ ಲೋಕಸಭಾ ವಿಪಕ್ಷ ನಾಯಕ ರಾಹುಲ್ ಗಾಂಧಿ ದೇಶವ್ಯಾಪಿಯಾಗಿ ಪ್ರಾರಂಭಿಸಿರುವ ‘ಸ್ಟಾಪ್ ವೋಟ್ ಚೋರಿ’ ಅಭಿಯಾನಕ್ಕೆ ಬೆಂಬಲವಾಗಿ ಕಾರ್ಕಳ ಕಾಂಗ್ರೆಸ್ ವತಿಯಿಂದ ಸಹಿ ಸಂಗ್ರಹ ಅಭಿಯಾನ ನಡೆಯಿತು.ಕಾರ್ಯಕ್ರಮದಲ್ಲಿ ಕಾರ್ಕಳ ಕಾಂಗ್ರೆಸ್ ನಾಯಕ ಉದಯ ಶೆಟ್ಟಿ ಮುನಿಯಾಲು, ಸಹಿ ಹಾಕುವ ಮೂಲಕ ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿದರು.

ಬಳಿಕ ಮಾತನಾಡಿದ ಅವರು, ಮತದಾನವು ಪ್ರಜೆಗಳ ಮೂಲ ಹಕ್ಕು. ಆದರೆ ಮತಗಳ್ಳತನದ ಮೂಲಕ ಬಿಜೆಪಿ ಈ ದೇಶದ ಜನತೆಗೆ ದೊಡ್ಡ ದ್ರೋಹ ಎಸಗಿದೆ. ಇಂತಹ ಕೃತ್ಯಗಳ ವಿರುದ್ಧ ನಾವು ಎಲ್ಲರೂ ಒಂದಾಗಿ ಜನರಲ್ಲಿ ಜಾಗೃತಿ ಮೂಡಿಸಬೇಕು ಎಂದು ಕರೆ ನೀಡಿದರು.

ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷೆ ಶುಭದಾ ರಾವ್ ಮಾತನಾಡಿ, ಬಿಜೆಪಿ ಅಧಿಕಾರಕ್ಕಾಗಿ ಜನರ ಹಕ್ಕು ಕಸಿಯುವ ದೇಶದ್ರೋಹದ ಕೆಲಸ ಮಾಡಿದೆ. ಇದರ ವಿರುದ್ಧ ಪ್ರತಿಯೊಬ್ಬ ಪ್ರಜೆ ಕೂಡ ಧ್ವನಿ ಎತ್ತಬೇಕು. ಬೂತ್ ಮಟ್ಟದಲ್ಲಿ ಸಹಿ ಸಂಗ್ರಹ ಅಭಿಯಾನಕ್ಕೆ ಎಲ್ಲರ ಸಹಕಾರ ಅಗತ್ಯ. ಅತೀ ಹೆಚ್ಚು ಸಹಿ ಸಂಗ್ರಹಿಸಿದ ವಾರ್ಡ್ ಸಮಿತಿಗೆ ಪ್ರೋತ್ಸಾಹಕ ಬಹುಮಾನ ನೀಡಿ ಗೌರವಿಸಲಾಗುವುದು ಎಂದು ಹೇಳಿದರು.

ಈ ಸಂದರ್ಭ ತಾಲೂಕು ಗ್ಯಾರಂಟಿ ಸಮಿತಿ ಅಧ್ಯಕ್ಷ ಅಜಿತ್ ಹೆಗ್ಡೆ ಮಾಳ, ಕೆಎಂಪಿಎಫ್ ನಿರ್ದೇಶಕ ಸುಧಾಕರ ಶೆಟ್ಟಿ ಮುಡಾರು, ಬ್ಲಾಕ್ ಕಾಂಗ್ರೆಸ್ ಉಪಾಧ್ಯಕ್ಷ ಜಾರ್ಜ್ ಕ್ಯಾಸ್ಟಲಿನ್, ಕೆಡಿಪಿ ಸದಸ್ಯರು, ಕುಕ್ಕುಂದೂರು ಗ್ರಾಮೀಣ ಕಾಂಗ್ರೆಸ್ ಅಧ್ಯಕ್ಷ ರುಕ್ಮಯ್ಯ ಶೆಟ್ಟಿಗಾರ್, ಮನೋಜ್, ಚರಿತ್ರಾ ಭಂಡಾರಿ, ಪ್ರತಿಮಾ ರಾಣೆ, ಶೋಭಾ ರಾಣೆ, ರಜನಿ, ಪರಿಶಿಷ್ಟ ಘಟಕದ ಅಧ್ಯಕ್ಷ ರಾಘವ ಕುಕ್ಕುಜೆ, ರಮೇಶ್ ಕಾರ್ಕಳ ಸೇರಿದಂತೆ ಅನೇಕ ನಾಯಕರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.