ಕಾರ್ಕಳ ತಾಲೂಕು ಸಾಹಿತ್ಯ ಸಮ್ಮೇಳನದ ಯಶಸ್ಸಿಗೆ ಸಹಕರಿಸಿದವರಿಗೆ ಕಾರ್ಕಳ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ಘಟಕ ವತಿಯಿಂದ ಕೃತಜ್ಞತೆ ಸಲ್ಲಿಸಲಾಯಿತು.
ಕಾರ್ಕಳ : ಕಾರ್ಕಳ ತಾಲೂಕು ಸಾಹಿತ್ಯ ಸಮ್ಮೇಳನದ ಯಶಸ್ಸಿಗೆ ಸಹಕರಿಸಿದವರಿಗೆ ಕಾರ್ಕಳ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ಘಟಕ ವತಿಯಿಂದ ಕೃತಜ್ಞತೆ ಸಲ್ಲಿಸಲಾಯಿತು. ಕಸಾಪ ಅಧ್ಯಕ್ಷ ಪ್ರಭಾಕರ ಶೆಟ್ಟಿ ಕೊಂಡಳ್ಳಿ ಅಧ್ಯಕ್ಷತೆಯಲ್ಲಿ ಕಾರ್ಕಳದ ಪ್ರಕಾಶ್ ಹೋಟೆಲ್ ನ ಸಂಭ್ರಮ ಸಭಾಂಗಣದಲ್ಲಿ ನಡೆಯಿತು. ಕಾರ್ಕಳ ತಾಲೂಕು 21ನೇ ಕನ್ನಡ ಸಾಹಿತ್ಯ ಸಮ್ಮೇಳನವು ಕಾರ್ಕಳದ ಕ್ರಿಯೇಟಿವ್ ಪದವಿ ಪೂರ್ವ ಕಾಲೇಜಿನಲ್ಲಿ ಯಶಸ್ವಿಯಾಗಿ ನಡೆಯಿತು. ಸಾಹಿತಿ, ಹಿರಿಯ ಪತ್ರಕರ್ತ ಸಿದ್ಧಾಪುರ ವಾಸುದೇವ ಭಟ್ಟ ಸಮ್ಮೇಳನದ ಸರ್ವಾಧ್ಯಕ್ಷರಾಗಿದ್ದರು.
ಸಮ್ಮೇಳನದಲ್ಲಿ ಪುರ ಮೆರವಣಿಗೆ, ಉದ್ಘಾಟನಾ ಸಮಾರಂಭ, ಪುಸ್ತಕ ಬಿಡುಗಡೆ, ಸಾಂಸ್ಕೃತಿಕ ಕಾರ್ಯಕ್ರಮ ಮತ್ತು ಪುಸ್ತಕ ಮಳಿಗೆ ಉದ್ಘಾಟನೆ ವಿಚಾರ ಗೋಷ್ಠಿ, ಸಂವಾದ ನಡೆಯಿತು. ಸಮಾರೋಪ ಸಮಾರಂಭದಲ್ಲಿ ಸಾಧಕರಿಗೆ ಸನ್ಮಾನ ಹಾಗೂ ವಿಶೇಷ ಸಾಧಕ ಪ್ರಶಸ್ತಿಗಳನ್ನು ನೀಡಿ ಗೌರವಿಸಲಾಯಿತು.ಸಮ್ಮೇಳನದ ಯಶಸ್ಸಿಗೆ ಕ್ರಿಯೇಟಿವ್ ಪುಸ್ತಕ ಮನೆ, ಕ್ರಿಯೇಟಿವ್ ಪದವಿಪೂರ್ವ ಕಾಲೇಜಿನ ಸಂಸ್ಥಾಪಕರು, ಪ್ರಾಂಶುಪಾಲರು, ಉಪನ್ಯಾಸಕ ವೃಂದ, ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು, ತಾಲೂಕಿನ ಸ್ಕೌಟ್ಸ್ ಗೈಡ್ಸ್ ಎನ್ ಎಸ್ ಎಸ್, ಎನ್ ಸಿ ಸಿ, ಚೆಂಡೆ ತಂಡಗಳು, ಗೊಂಬೆಯಾಟ ತಂಡಗಳು ವಿದ್ಯಾರ್ಥಿಗಳು ಸಹಕರಿಸಿದರು. ಸಹಕಾರಕ್ಕೆ ಕಸಾಪ ಘಟಕ ಅಧ್ಯಕ್ಷ ಪ್ರಭಾಕರ ಶೆಟ್ಟಿ ಕೊಂಡಳ್ಳಿ ಕೃತಜ್ಞತೆ ಸಲ್ಲಿಸಿದರು. ಕೃತಜ್ಞತಾ ಸಭೆಯಲ್ಲಿ ಅಧ್ಯಕ್ಷ ಪ್ರಭಾಕರ ಶೆಟ್ಟಿ ಕೊಂಡಳ್ಳಿ, ಜಿಲ್ಲಾ ಗೌರವ ಪ್ರತಿನಿಧಿ ನಿತ್ಯಾನಂದ ಪೈ ಕಾರ್ಯದರ್ಶಿ ದೇವದಾಸ ಕೆರೆಮನೆ ಸಂಘಟನಾ ಕಾರ್ಯದರ್ಶಿ ಗಣೇಶ್ ಜಾಲ್ಸೂರು, ಶಿವಸುಬ್ರಹ್ಮಣ್ಯ ಭಟ್ , ದೇವದಾಸ್ ನಾಯಕ್, ನಾಗೇಶ್ ನಲ್ಲೂರು, ಸುಲೋಚನಾ, ಡಾ. ಸುಮತಿ ತಿಪ್ಪೇಸ್ವಾಮಿ. ರಮೇಶ್ ಪ್ರಭು ಉಪಸ್ಥಿತರಿದ್ದರು.