ಸಾರಾಂಶ
ಶಿಕ್ಷಕರ ದಿನಾಚರಣೆಯ ಕಾರ್ಯಕ್ರಮವನ್ನು ಬಡಗುಬೆಟ್ಟು ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಯ ಅಧ್ಯಕ್ಷ ಜಯಕರ್ ಶೆಟ್ಟಿ ಇಂದ್ರಾಳಿ ಉದ್ಘಾಟಿಸಿ, ಶುಭಹಾರೈಸಿದರು.
ಕನ್ನಡಪ್ರಭ ವಾರ್ತೆ ಕಾರ್ಕಳ
ಇಲ್ಲಿನ ಕುಕ್ಕುಂದೂರಿನ ವಿಜೇತ ವಸತಿಯುತ ವಿಶೇಷ ಶಾಲೆ ಮತ್ತು ವೃತ್ತಿ ಶಿಕ್ಷಣ ತರಬೇತಿ ಸಂಸ್ಥೆಯಲ್ಲಿ ಜಿಲ್ಲಾ ವಿಶೇಷ ಶಿಕ್ಷಕ ಹಾಗೂ ಶಿಕ್ಷಕೇತರರ ಸಂಘದ ವತಿಯಿಂದ ಉಡುಪಿಯ ಬಡಗುಬೆಟ್ಟು ಕ್ರೆಡಿಟ್ ಕೋ- ಆಪರೇಟಿವ್ ಸೊಸೈಟಿ, ಛತ್ರಪತಿ ಫೌಂಡೇಶನ್ ಸಹಯೋಗದಲ್ಲಿ ಗುರುವಾರ ಜಿಲ್ಲಾಮಟ್ಟದ ಶಿಕ್ಷಕರ ದಿನಾಚರಣೆ, ತ್ರೋಬಾಲ್ ಪಂದ್ಯಾಟ ಹಾಗೂ ವಿವಿಧ ಆಟೋಟ ಸ್ಮರ್ಧೆ, ಸನ್ಮಾನ ಕಾರ್ಯಕ್ರಮ ವಿಜೃಂಭಣೆಯಿಂದ ನಡೆಯಿತು.ಶಿಕ್ಷಕರ ದಿನಾಚರಣೆಯ ಕಾರ್ಯಕ್ರಮವನ್ನು ಬಡಗುಬೆಟ್ಟು ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಯ ಅಧ್ಯಕ್ಷ ಜಯಕರ್ ಶೆಟ್ಟಿ ಇಂದ್ರಾಳಿ ಉದ್ಘಾಟಿಸಿ, ಶುಭಹಾರೈಸಿದರು.ಇದೇ ಸಂದರ್ಭದಲ್ಲಿ ಉಡುಪಿ ಜಿಲ್ಲೆಯ ವಿಶೇಷ ಶಾಲೆಗಳಲ್ಲಿ 10 ವರ್ಷಕ್ಕಿಂತ ಹೆಚ್ಚು ಸೇವೆ ಸಲ್ಲಿಸಿರುವ 11 ಮಂದಿ ವಿಶೇಷ ಶಿಕ್ಷಕರು ಹಾಗೂ ಶಿಕ್ಷಕೇತರರನ್ನು ಅಭಿನಂದಿಸಲಾಯಿತು.ಈ ಸಂದರ್ಭದಲ್ಲಿ ಮುಖ್ಯ ಅತಿಥಿಗಳಾಗಿ ಛತ್ರಪತಿ ಫೌಂಡೇಶನ್ ಅಧ್ಯಕ್ಷ ಜೇಸಿ ಗಿರೀಶ್ ರಾವ್, ರೋಟರಿ ಕ್ಲಬ್ ಕಾರ್ಕಳ ಅಧ್ಯಕ್ಷ ಇಕ್ಬಾಲ್ ಅಹಮ್ಮದ್, ಕರ್ನಾಟಕ ರಾಜ್ಯ ವಿಶೇಷ ಶಿಕ್ಷಕ ಶಿಕ್ಷಕೇತರರ ಸಂಘ ಗೌರವಾಧ್ಯಕ್ಷೆ ಆಗ್ನೇಸ್ ಕುಂದರ್, ರಾಜ್ಯಾಧ್ಯಕ್ಷೆ ಡಾ.ಕಾಂತಿ ಹರೀಶ್, ಸ್ಕೌಟ್ - ಗೈಡ್ಸ್ ರಾಜ್ಯ ಸಂಘಟಕಿ ಸುಮನ ಶೇಖರ್, ವಿಶೇಷ ಶಿಕ್ಷಕ ಶಿಕ್ಷಕೇತರರ ಸಂಘದ ಜಿಲ್ಲಾಧ್ಯಕ್ಷೆ ರವೀಂದ್ರ ಎಚ್., ಕಾರ್ಯದರ್ಶಿ ಶಶಿಕಲಾ ಕೋಟ್ಯಾನ್, ಶ್ರೀ ದುರ್ಗಾ ವಿದ್ಯಾ ಸಂಘ ಅಧ್ಯಕ್ಷ ಕೆ.ರಾಧಾಕೃಷ್ಣ ಶೆಟ್ಟಿ, ಉಪಸ್ಥಿತರಿದ್ದರು.ಹರ್ಷಿತಾ ಕಿರಣ್ ಕಾರ್ಯಕ್ರಮವನ್ನು ನಿರೂಪಿಸಿದರು. ಡಾ.ಕಾಂತಿ ಹರೀಶ್ ಅತಿಥಿಗಳನ್ನು ಸ್ವಾಗತಿಸಿದರು. ರವೀಂದ್ರ ಎಚ್. ವಂದಿಸಿದರು.