ಸಾರಾಂಶ
ಗ್ರಾಮ ಸುಭೀಕ್ಷಾ ಕಾರ್ಯಕ್ರಮವನ್ನು ಕರ್ಣಂಗೇರಿ ಶ್ರೀ ರಾಜರಾಜೇಶ್ವರಿ ದೇವಸ್ಥಾನ ಸಭಾಂಗಣದಲ್ಲಿ ಆಯೋಜಿಸಲಾಯಿತು. ಈ ಸಂದರ್ಭ ರಾಜರಾಜೇಶ್ವರಿ ದೇವಿಗೆ ಪುಷ್ಪಾರ್ಚನೆ ನೆರವೇರಿತು.
ಕನ್ನಡಪ್ರಭ ವಾರ್ತೆ ನಾಪೋಕ್ಲು
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ ಸಿ ಟ್ರಸ್ಟ್ , ಮಡಿಕೇರಿ ತಾಲೂಕು ಹಾಗೂ ಮಡಿಕೇರಿ ವಲಯ ಮತ್ತು ಶ್ರೀ ರಾಜರಾಜೇಶ್ವರಿ ದೇವಸ್ಥಾನ ಪ್ರಗತಿ ಬಂಧು ಸ್ವಸಹಾಯ ಸಂಘಗಳ ಒಕ್ಕೂಟದ ಸಹಯೋಗದೊಂದಿಗೆ ಗ್ರಾಮ ಸುಭೀಕ್ಷಾ ಕಾರ್ಯಕ್ರಮವನ್ನು ಕರ್ಣಂಗೇರಿ ಶ್ರೀ ರಾಜರಾಜೇಶ್ವರಿ ದೇವಸ್ಥಾನ ಸಭಾಂಗಣದಲ್ಲಿ ಆಯೋಜಿಸಲಾಯಿತು.ದೇವಸ್ಥಾನದ ಧರ್ಮದರ್ಶಿಗಳಾದ ಗೋವಿಂದ ಸ್ವಾಮಿ ಅವರು ಕಾರ್ಯಕ್ರಮವನ್ನು ದೀಪ ಬೆಳಗಿಸುವ ಮುಖಾಂತರ ಚಾಲನೆ ನೀಡಿದರು. ಈ ಸಂದರ್ಭ ಶ್ರೀ ರಾಜ ರಾಜೇಶ್ವರಿ ದೇವಿಗೆ ಪುಷ್ಪಾರ್ಚನೆ ಮಾಡಲಾಯಿತು.
ಕಾರ್ಯಕ್ರಮದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಜಿಲ್ಲಾ ನಿರ್ದೇಶಕರಾದ ಲೀಲಾವತಿ, ಗ್ರಾಮಾಭಿವೃದ್ಧಿ ಯೋಜನೆಯ ಧ್ಯೇಯ ಮತ್ತು ಉದ್ದೇಶಗಳನ್ನ ಧಾರ್ಮಿಕ, ಸಾಮಾಜಿಕ ಕಾರ್ಯಕ್ರಮದ ಬಗ್ಗೆ ವಿವರವಾಗಿ ಮಾಹಿತಿ ನೀಡಿದ್ದಲ್ಲದೆ ಈಗಾಗಲೇ ವಿತರಣೆ ಆಗಿರುವ ಅನುದಾನಗಳ ವಿವರವನ್ನು ಸವಿಸ್ತಾರವಾಗಿ ತಿಳಿಸಿದರು.ಕೊಡಗು ಜಿಲ್ಲಾ ಜನಜಾಗೃತಿ ಸದಸ್ಯರು ಟಿ.ಎಮ್.ಅಯ್ಯಪ್ಪ . ಪದ್ಮಶ್ರೀ ಪುರಸ್ಕೃತರಾದ ರಾಣಿ ಮಾಚಯ್ಯ ಇವರು ಮಹಿಳೆಯರು ಒಂದು ಕುಟುಂಬಕ್ಕೆ ಹಾಗೂ ದೇಶಕ್ಕೆ ಎಷ್ಟು ಮುಖ್ಯ ಎಂಬುದರ ಬಗ್ಗೆ ಅರ್ಥ ಪೂರ್ಣವಾದ ಮಾಹಿತಿ ನೀಡಿದರು.
ವೇದಿಕೆಯಲ್ಲಿ ಶ್ರೀ ಮುತ್ತಪ್ಪ ಸ್ವಾಮಿ ದೇವಸ್ಥಾನ ಅಧ್ಯಕ್ಷ ಸುಧೀರ್, ಚಟ್ಟಳ್ಳಿ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷರು ಮಣಿ ಉತ್ತಪ್ಪ, ಕರ್ಣಂಗೇರಿ ಗ್ರಾಮ ಪಂಚಾಯಿತಿ ಸದಸ್ಯರು ಜಾನ್ಸನ್ ಪಿಂಟು, ಗರಗಂದೂರು ಗ್ರಾಮ ಪಂಚಾಯಿತಿ ಅಧ್ಯಕ್ಷರು ಬೋಜಮ್ಮ ಅವರು ಗ್ರಾಮ ಸುಭೀಕ್ಷ ಕಾರ್ಯಕ್ರಮವನ್ನ ಕುರಿತು ಅರ್ಥಪೂರ್ಣ ಮಾತುಗಳನ್ನು ಹಾಡಿದರು.ಈ ಕಾರ್ಯಕ್ರಮದಲ್ಲಿ ಗ್ರಾಮಾಭಿವೃದ್ಧಿ ಯೋಜನಾಧಿಕಾರಿಗಳಾದ ಪುರುಷೋತ್ತಮ್, ಯೋಜನೆಯ ಮೇಲ್ವಿಚಾರಕ ಶ್ರೇಣಿಯ ಸಿಬ್ಬಂದಿ, ಕಚೇರಿ ಸಹಾಯಕರು ಹಾಗೂ ವಲಯದ ಸೇವಾ ಪ್ರತಿನಿಧಿಗಳು ಮತ್ತು 11 ಒಕ್ಕೂಟದ ಅಧ್ಯಕ್ಷರು ಪದಾಧಿಕಾರಿಗಳು ಹಾಗೂ ಪ್ರಗತಿ ಬಂಧು ಮತ್ತು ಸ್ವ ಸಹಾಯ ಸಂಘದ ಸದಸ್ಯರು ಹಾಜರಿದ್ದರು.