ಸಾರಾಂಶ
ಇಲ್ಲಿನ ಕಟಪಾಡಿಯ ತ್ರಿಶಾ ವಿದ್ಯಾ ಕಾಲೇಜಿನ ಕನ್ನಡ ಪ್ರಾಧ್ಯಾಪಕ ಧೀರಜ್ ಬೆಳ್ಳಾರೆ ಇವರಿಗೆ ಜ. 10ರಂದು ರಾಷ್ಟ್ರೀಯ ದಾಖಲೆ ಪ್ರಮಾಣ ಪತ್ರವನ್ನು ನೀಡಿ ಗೌರವಿಸಲಾಯಿತು.
ಕನ್ನಡಪ್ರಭ ವಾರ್ತೆ ಉಡುಪಿ
ಇಲ್ಲಿನ ಕಟಪಾಡಿಯ ತ್ರಿಶಾ ವಿದ್ಯಾ ಕಾಲೇಜಿನ ಕನ್ನಡ ಪ್ರಾಧ್ಯಾಪಕ ಧೀರಜ್ ಬೆಳ್ಳಾರೆ ಇವರಿಗೆ ಕರ್ನಾಟಕ ಅಚೀವರ್ಸ್ ಬುಕ್ ಆಫ್ ರೆಕಾರ್ಡ್ಸ್ ವತಿಯಿಂದ ಜ.10 ರಂದು ರಾಷ್ಟ್ರೀಯ ದಾಖಲೆ ಪ್ರಮಾಣಪತ್ರವನ್ನು ನೀಡಿ ಗೌರವಿಸಲಾಯಿತು.ಅವರು ದ.ಕ. ಜಿಲ್ಲೆಯ ಸುಳ್ಯ ತಾಲೂಕಿನ ಕಳಂಜದ ಯುವ ಬರಹಗಾರಾಗಿದ್ದು, ‘ಸ್ಟೇಟಸ್ ಕಥೆಗಳು’ ಎಂಬ ಶೀರ್ಷಿಕೆಯ ಸರಣಿಯಡಿಯಲ್ಲಿ ಜುಲೈ 2020ರಿಂದ ಡಿಸೆಂಬರ್ 2024 ವರೆಗೆ 1,635 ಸಣ್ಣ ಕಥೆಗಳನ್ನು ಬರೆಯುವ ಮೂಲಕ ಈ ಗಮನಾರ್ಹ ಸಾಧನೆಯನ್ನು ಮಾಡಿದ್ದಾರೆ. ಈ ಕಥೆಗಳು ಕನ್ನಡ ವೆಬ್ಸೈಟ್ ನಲ್ಲಿ ನಿರಂತರವಾಗಿ ಪ್ರಕಟವಾಗುತ್ತಿದ್ದು, ಅವರ ಮೊದಲ ನೂರು ಕತೆಗಳನ್ನ ಕನ್ನಡ ಪುಸ್ತಕ ಪ್ರಾಧಿಕಾರದಿಂದ ಪ್ರಕಟಿಸಲಾಗಿದೆ.
ಕತೆ ಬರವಣಿಗೆ ಜೊತೆ, ನಾಟಕ, ಅಭಿನಯದಲ್ಲೂ ತಮ್ಮ ಛಾಪು ಮೂಡಿಸುತ್ತಿರುವ ಅವರನ್ನು ಸಂಸ್ಥೆಯ ಸಂಸ್ಥಾಪಕ ಸಿಎ ಗೋಪಾಲಕೃಷ್ಣ ಭಟ್ ಹಾಗೂ ಶಿಕ್ಷಕ ಶಿಕ್ಷಕೇತರ ವೃಂದ ಶುಭ ಹಾರೈಸಿದ್ದಾರೆ. ಮಣಿಮಜಲು ಗುರುವಪ್ಪ ಮತ್ತು ಸುಮತಿ ದಂಪತಿ ಪುತ್ರ. ಬಾಳಿಲ ವಿದ್ಯಾಬೋಧಿನಿ ಮತ್ತು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಬೆಳ್ಳಾರೆಯ ಹಳೆಯ ವಿದ್ಯಾರ್ಥಿ.