ಕಾವೇರಿಗಾಗಿ ಕರ್ನಾಟಕ ಸೇನಾಪಡೆ ಪ್ರತಿಭಟನೆ

| Published : Dec 14 2023, 01:30 AM IST

ಸಾರಾಂಶ

ತಮಿಳುನಾಡಿಗೆ ಕಾವೇರಿ ನೀರು ಹರಿಸುತ್ತಿರುವ ಕ್ರಮವನ್ನು ಖಂಡಿಸಿ ಕರ್ನಾಟಕ ಸೇನಾ ಪಡೆ ವತಿಯಿಂದ ನಗರದಲ್ಲಿ ಕಳೆದ 99 ದಿನಗಳಿಂದ ನಿರಂತರವಾಗಿ ಪ್ರತಿಭಟನೆ ನಡೆಸುತ್ತಿದ್ದು ಬುಧವಾರ ರಾಷ್ಟ್ರೀಯ ಹೆದ್ದಾರಿಯಲ್ಲಿ ಪ್ರತಿಭಟನೆ ನಡೆಸಲಾಯಿತು.ನಗರದ ಚಾಮರಾಜೇಶ್ಚರ ಉದ್ಯಾನವನದ ಮುಂಭಾಗದಿಂದ ಪ್ರತಿಭಟನಾನಿರತರು ಭುವನೇಶ್ವರಿ ವೃತ್ತಕ್ಕೆ ತೆರಳಿ, ಅಲ್ಲಿ ಹಾದು ಹೋಗಿರುವ ರಾಷ್ಟ್ರೀಯ ಹೆದ್ದಾರಿಯಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರ, ತಮಿಳುನಾಡು ಸರ್ಕಾರ, ಕಾವೇರಿ ನೀರು‌ ನಿರ್ವಹಣಾ ಮಂಡಳಿ ವಿರುದ್ಧ ಧಿಕ್ಕಾರದ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ಇಂದು ಕಾವೇರಿ ಚಳುವಳಿ 100 ನೇ ದಿನ ಹೋರಾಟ

ಕನ್ನಡಪ್ರಭ ವಾರ್ತೆ ಚಾಮರಾಜನಗರ ತಮಿಳುನಾಡಿಗೆ ಕಾವೇರಿ ನೀರು ಹರಿಸುತ್ತಿರುವ ಕ್ರಮವನ್ನು ಖಂಡಿಸಿ ಕರ್ನಾಟಕ ಸೇನಾ ಪಡೆ ವತಿಯಿಂದ ನಗರದಲ್ಲಿ ಕಳೆದ 99 ದಿನಗಳಿಂದ ನಿರಂತರವಾಗಿ ಪ್ರತಿಭಟನೆ ನಡೆಸುತ್ತಿದ್ದು ಬುಧವಾರ ರಾಷ್ಟ್ರೀಯ ಹೆದ್ದಾರಿಯಲ್ಲಿ ಪ್ರತಿಭಟನೆ ನಡೆಸಲಾಯಿತು.

ನಗರದ ಚಾಮರಾಜೇಶ್ಚರ ಉದ್ಯಾನವನದ ಮುಂಭಾಗದಿಂದ ಪ್ರತಿಭಟನಾನಿರತರು ಭುವನೇಶ್ವರಿ ವೃತ್ತಕ್ಕೆ ತೆರಳಿ, ಅಲ್ಲಿ ಹಾದು ಹೋಗಿರುವ ರಾಷ್ಟ್ರೀಯ ಹೆದ್ದಾರಿಯಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರ, ತಮಿಳುನಾಡು ಸರ್ಕಾರ, ಕಾವೇರಿ ನೀರು‌ ನಿರ್ವಹಣಾ ಮಂಡಳಿ ವಿರುದ್ಧ ಧಿಕ್ಕಾರದ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ಕಾವೇರಿ ಚಳವಳಿ ಶುರುವಾಗಿ ಇಂದಿಗೆ 100ನೇ ದಿನದ ಹೋರಾಟಕ್ಕೆ ಕಾಲಿಟ್ಟಿದೆ. ಚಾಮರಾಜನಗರದ ಇತಿಹಾಸದಲ್ಲಿಯೇ ಸತತವಾಗಿ ಯಾವುದೆ ಹೋರಾಟ ನಡೆದಿಲ್ಲ. ಇಂದು ಚಾಮರಾಜೇಶ್ವರ ದೇವಸ್ಥಾನದ ಮುಂಭಾಗದಲ್ಲಿ ಬೆಳಗ್ಗೆಯಿಂದ ಸಂಜೆ ತನಕ ಹೋರಾಟ ನಡೆಸಲಾಗುವುದು. ಈ ಹೋರಾಟದಲ್ಲಿ ಕನ್ನಡಪರ ಸಂಘಟನೆಗಳ ಮುಖಂಡರು ಭಾಗವಹಿಸಲಿದ್ದು, ವಿನೂತನ ಹೋರಾಟ ಮಾಡಲಾಗುವುದು ಎಂದು ಕರ್ನಾಟಕ ಸೇನಾಪಡೆ ಅಧ್ಯಕ್ಷ ಚಾ.ರಂ. ಶ್ರೀನಿವಾಸಗೌಡ ತಿಳಿಸಿದ್ದಾರೆ.

ಪ್ರತಿಭಟನೆಯಲ್ಲಿ ಶಾ. ಮುರಳಿ, ಪಣ್ಯದಹುಂಡಿ ರಾಜು, ಚಾ.ವೆಂ.ರಾಜ್ ಗೋಪಾಲ್,ಮಹೇಶ್ ಗೌಡ, ಗು.ಪುರುಷೋತ್ತಮ್, ತಾಂಡವಮೂರ್ತಿ, ಹೊಮ್ಮ ಲೋಕೇಶ್, ವೀರಭದ್ರ ಮಂಜು, ಪ್ರಕಾಶ್ ಇತರರು ಭಾಗವಹಿಸಿದ್ದರು.

-----

13ಸಿಎಚ್‌ಎನ್‌15

ತಮಿಳುನಾಡಿಗೆ ಕಾವೇರಿ ನೀರು ಹರಿಸುತ್ತಿರುವ ಕ್ರಮವನ್ನು ಖಂಡಿಸಿ ಕರ್ನಾಟಕ ಸೇನಾ ಪಡೆ ವತಿಯಿಂದ ಚಾಮರಾಜನಗರದಲ್ಲಿ ಬುಧವಾರ ರಾಷ್ಟ್ರೀಯ ಹೆದ್ದಾರಿಯಲ್ಲಿ ಪ್ರತಿಭಟನೆ ನಡೆಸಲಾಯಿತು.