ಸಾರಾಂಶ
ಕನ್ನಡಪ್ರಭ ವಾರ್ತೆ ಚಾಮರಾಜನಗರ ಬಹುಭಾಷಾ ನಟ ಕಮಲಹಾಸನ್ ಹೇಳಿಕೆ ಖಂಡಿಸಿ ಕರ್ನಾಟಕ ಸೇನಾಪಡೆ ವತಿಯಿಂದ ನಗರದಲ್ಲಿ ಪ್ರತಿಭಟನೆ ನಡೆಸಲಾಯಿತು.ನಗರದ ಭುವನೇಶ್ವರಿ ವೃತ್ತದಲ್ಲಿ ಜಮಾಯಿಸಿದ ಪ್ರತಿಭಟನಾಕಾರೆರು ರಾಷ್ಟ್ರೀಯ ಹೆದ್ದಾರಿಯಲ್ಲಿ ರಸ್ತೆತಡೆ ನಡೆಸಿ, ಈ ಸಂದರ್ಭದಲ್ಲಿ ಮಾತನಾಡಿದ ಸೇನಾ ಪಡೆ ಅಧ್ಯಕ್ಷ ಚಾ.ರಂ.ಶ್ರೀನಿವಾಸಗೌಡ ಸಾವಿರಾರು ವರ್ಷಗಳ ಭವ್ಯ ಇತಿಹಾಸವಿರುವ, ಸ್ವತಂತ್ರ ಲಿಪಿ ಹೊಂದಿರುವ, ಶಾಸ್ತ್ರೀಯ ಸ್ಥಾನಮಾನ ಹೊಂದಿರುವ ಶ್ರೀಮಂತ ಭಾಷೆ ಕನ್ನಡ ಎಂದರು.ಕೋಟ್ಯಂತರ ಕನ್ನಡಿಗರ ಜೀವನಾಡಿ ಆಗಿರುವ ಹೆಮ್ಮೆಯ ಕನ್ನಡ ಭಾಷೆಗೆ ಕಮಲ್‌ಹಾಸನ್ ತಮಿಳಿನಿಂದ ಕನ್ನಡ ಹುಟ್ಟಿದ್ದು ಎಂದು ಹೇಳಿ ಕನ್ನಡ ಭಾಷೆಗೆ ಅವಮಾನಿಸಿದ್ದಾರೆ ಎಂದು ತೀವ್ರವಾಗಿ ಖಂಡಿಸಿದರು. ನಟ ಕಮಲ್ ಹಾಸನ್ ಕ್ಷಮೆ ಕೇಳಲ್ಲ ಎಂದು ಉದ್ಧಟತನ ಮೆರೆದು ತಮ್ಮ ಹೇಳಿಕೆಯನ್ನು ಸಮರ್ಥನೆ ಮಾಡಿಕೊಂಡಿದ್ದು, ಇದು ಕನ್ನಡಿಗರ ಸ್ವಾಭಿಮಾನ ಕೆರಳಿಸಿದೆ. ರಾಜ್ಯ ಸರ್ಕಾರ, ಕರ್ನಾಟಕ ಚಲನಚಿತ್ರ ಮಂಡಳಿ ಯಾವುದೇ ಕಾರಣಕ್ಕೂ ಕಮಲ್ ಹಾಸನ್ ಚಿತ್ರ ಬಿಡುಗಡೆ ಮಾಡಬಾರದು. ರಾಜ್ಯದಲ್ಲಿ ಕಮಲ್‌ಹಾಸನ್ ಚಿತ್ರಗಳನ್ನು ನಿಷೇಧಿಸಬೇಕು ಎಂದು ಒತ್ತಾಯಿಸಿದರು.ಕೂಡಲೇ ಕಮಲಹಾಸನ್ ಕನ್ನಡಿಗರ ಹಾಗೂ ಕನ್ನಡ ಭಾಷೆಯ ಬಗ್ಗೆ ಕ್ಷಮೆ ಕೋರಬೇಕು ಇಲ್ಲದಿದ್ದಲ್ಲಿ ಮುಂದಿನ ವಾರ ತೆರೆ ಕಾಣಲಿರುವ ಅವರ ಸಿನಿಮಾವನ್ನು ರಾಜ್ಯಾದ್ಯಂತ ಬಹಿಷ್ಕಾರ ಮಾಡುತ್ತೇವೆ. ಒಂದು ವೇಳೆ ಚಿತ್ರ ಬಿಡುಗಡೆ ಮಾಡಿದರೆ ಚಿತ್ರಮಂದಿರಕ್ಕೆ ನುಗ್ಗಿ ಪೋಸ್ಟರ್ ಹರಿದು ತಡೆಯುವುದಾಗಿ ಎಚ್ಚರಿಸಿದರು. ಪ್ರತಿಭಟನೆಯಲ್ಲಿ ನಿಜಧ್ವನಿಗೋವಿಂದ, ಸಿ.ಎಂ.ನರಸಿಂಹ ಮೂರ್ತಿ, ಮಹೇಶ್ ಗೌಡ, ಪಣ್ಯದಹುಂಡಿ ರಾಜು, ತಾಂಡವಮೂರ್ತಿ, ವೀರಭದ್ರ, ರಾಚಪ್ಪ, ಚಾ.ಸಿ.ಸಿದ್ದರಾಜು, ಮುತ್ತಿಗೆ ಗೋವಿಂದರಾಜ, ಸಿದ್ದಶೆಟ್ಟಿ ಇತರರು ಭಾಗವಹಿಸಿದ್ದರು.
;Resize=(128,128))
;Resize=(128,128))
;Resize=(128,128))
;Resize=(128,128))
;Resize=(128,128))