ಸಾರಾಂಶ
ನಗರದ ಭುವನೇಶ್ವರಿ ವೃತ್ತದಲ್ಲಿ ಕರ್ನಾಟಕ ಸೇನಾ ಪಡೆಯ ಅಧ್ಯಕ್ಷ ಚಾ.ರಂ.ಶ್ರೀನಿವಾಸಗೌಡ ಅವರ ನೇತೃತ್ವದಲ್ಲಿ ಜಮಾಯಿಸಿದ ಕಾರ್ಯಕರ್ತರು ಎಂಇಎಸ್ ಕಾರ್ಯಕರ್ತರ ವಿರುದ್ಧ ಘೋಷಣೆ ಕೂಗಿ ಎಂಇಎಸ್ ಭಿತ್ತಿಪತ್ರ ಹರಿದು ಅಕ್ರೋಶ ವ್ಯಕ್ತಪಡಿಸಿದರು.
ಕನ್ನಡಪ್ರಭ ವಾರ್ತೆ ಚಾಮರಾಜನಗರ
ಬೆಳಗಾವಿಯಲ್ಲಿ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದ ವೇಳೆಯಲ್ಲಿ ಎಂಇಎಸ್ ಪುಂಡರು ಏಕಾಏಕಿ ನುಗ್ಗಿ ಕನ್ನಡಿಗರ ಮೇಲೆ ಪುಂಡಾಟಿಕೆ ಮಾಡಿರುವುದನ್ನು ಖಂಡಿಸಿ ಕರ್ನಾಟಕ ಸೇನಾ ಪಡೆ ಕಾರ್ಯಕರ್ತರು ನಗರದಲ್ಲಿ ಪ್ರತಿಭಟನೆ ನಡೆಸಿದರು.ನಗರದ ಭುವನೇಶ್ವರಿ ವೃತ್ತದಲ್ಲಿ ಕರ್ನಾಟಕ ಸೇನಾ ಪಡೆಯ ಅಧ್ಯಕ್ಷ ಚಾ.ರಂ.ಶ್ರೀನಿವಾಸಗೌಡ ಅವರ ನೇತೃತ್ವದಲ್ಲಿ ಜಮಾಯಿಸಿದ ಕಾರ್ಯಕರ್ತರು ಎಂಇಎಸ್ ಕಾರ್ಯಕರ್ತರ ವಿರುದ್ಧ ಘೋಷಣೆ ಕೂಗಿ ಎಂಇಎಸ್ ಭಿತ್ತಿಪತ್ರ ಹರಿದು ಅಕ್ರೋಶ ವ್ಯಕ್ತಪಡಿಸಿದರು.
ಈ ಸಂದರ್ಭದಲ್ಲಿ ಪ್ರತಿಭಟನೆ ನೇತೃತ್ವ ವಹಿಸಿದ್ದ ಚಾ.ರಂ.ಶ್ರೀನಿವಾಸಗೌಡ ಮಾತನಾಡಿ, ಬೆಳಗಾವಿಯಲ್ಲಿ ಕನ್ನಡಿಗರ ಮೇಲೆ ಎಂಇಎಸ್ ಪುಂಡರು ನಿರಂತರ ದೌರ್ಜನ್ಯ ಮಾಡುತ್ತಿದ್ದು, ಇದು ಅತ್ಯಂತ ಖಂಡನೀಯ, ಕನ್ನಡ ರಾಜ್ಯೋತ್ಸವ ಮೆರವಣಿಗೆ ವೇಳೆಯಲ್ಲಿ ಏಕಾಏಕಿ ನುಗ್ಗಿ ಕನ್ನಡಿಗರ ಮೇಲೆ ಹಲ್ಲೆ ಮಾಡಿರುವುದು ಅತ್ಯಂತ ಖಂಡನೀಯ ಕೃತ್ಯವಾಗಿದೆ. ಕೂಡಲೇ ಆರೋಪಿಗಳನ್ನು ಬಂಧಿಸಿ ಗಡಿಪಾರು ಮಾಡುವಂತೆ ಒತ್ತಾಯಿಸಿದರು.ಪ್ರತಿಭಟನೆಯಲ್ಲಿ ಚಾ.ವೆಂ.ರಾಜ್‌ಗೋಪಾಲ್, ಪಣ್ಯದಹುಂಡಿರಾಜು, ನಿಜ ಧ್ವನಿಗೋವಿಂದರಾಜು, ಶಿವು, ಮುತ್ತುರಾಜು, ರಾ.ಜಗದೀಶ್, ಆಟೋ ಲಿಂಗರಾಜು, ಮಾದೇಶ್, ರಾಚಪ್ಪ, ಅಮಚವಾಡಿ ರಾಜು, ಚಂದ್ರು ಇತರರು ಭಾಗವಹಿಸಿದ್ದರು.
;Resize=(128,128))
;Resize=(128,128))