ಚಾಮರಾಜನಗರದಲ್ಲಿ ಬಿಪಿಎಲ್ ಕಾರ್ಡ್ ರದ್ದು ಖಂಡಿಸಿ ಕರ್ನಾಟಕ ಸೇನಾಪಡೆ ತಮಟೆ ಚಳವಳಿ

| Published : Nov 22 2024, 01:19 AM IST

ಚಾಮರಾಜನಗರದಲ್ಲಿ ಬಿಪಿಎಲ್ ಕಾರ್ಡ್ ರದ್ದು ಖಂಡಿಸಿ ಕರ್ನಾಟಕ ಸೇನಾಪಡೆ ತಮಟೆ ಚಳವಳಿ
Share this Article
  • FB
  • TW
  • Linkdin
  • Email

ಸಾರಾಂಶ

ಬಡವರ ಬಿಪಿಎಲ್ ಕಾರ್ಡ್ ರದ್ದು ಖಂಡಿಸಿ ರಾಜ್ಯ ಸರ್ಕಾರ ವಿರುದ್ಧ ಕರ್ನಾಟಕ ಸೇನಾಪಡೆ ವತಿಯಿಂದ ನಗರದಲ್ಲಿ ತಮಟೆ ಚಳವಳಿ ನಡೆಸಲಾಯಿತು. ಚಾಮರಾಜನಗರದ ಜಿಲ್ಲಾಡಳಿತ ಭವನದ ಮುಖ್ಯಗೇಟ್ ಮುಂಭಾಗದಲ್ಲಿ ಕರ್ನಾಟಕ ಸೇನಾಪಡೆಯ ಅಧ್ಯಕ್ಷ ಚಾ.ರಂ.ಶ್ರೀನಿವಾಸಗೌಡ ಅವರ ನೇತೃತ್ವದಲ್ಲಿ ಪ್ರತಿಭಟನಾಕಾರರು ಜಮಾಯಿಸಿದರು.

ರಾಜ್ಯ ಸರ್ಕಾರ ವಿರುದ್ಧ ಆಕ್ರೋಶ

ಚಾಮರಾಜನಗರ: ಬಡವರ ಬಿಪಿಎಲ್ ಕಾರ್ಡ್ ರದ್ದು ಖಂಡಿಸಿ ರಾಜ್ಯ ಸರ್ಕಾರ ವಿರುದ್ಧ ಕರ್ನಾಟಕ ಸೇನಾಪಡೆ ವತಿಯಿಂದ ನಗರದಲ್ಲಿ ತಮಟೆ ಚಳವಳಿ ನಡೆಸಲಾಯಿತು.

ನಗರದ ಜಿಲ್ಲಾಡಳಿತ ಭವನದ ಮುಖ್ಯಗೇಟ್ ಮುಂಭಾಗದಲ್ಲಿ ಕರ್ನಾಟಕ ಸೇನಾಪಡೆಯ ಅಧ್ಯಕ್ಷ ಚಾ.ರಂ.ಶ್ರೀನಿವಾಸಗೌಡ ಅವರ ನೇತೃತ್ವದಲ್ಲಿ ಜಮಾಯಿಸಿದ ಪ್ರತಿಭಟನಾನಿತರರು ರಾಜ್ಯ ಸರ್ಕಾರ, ಆಹಾರ ಇಲಾಖೆ ಸಚಿವ ವಿರುದ್ಧ ಧಿಕ್ಕಾರದ ಘೋಷಣೆ ಕೂಗಿ ಅಕ್ರೋಶ ವ್ಯಕ್ತಪಡಿಸಿದರು.

ಪ್ರತಿಭಟನೆ ನೇತೃತ್ವ ವಹಿಸಿದ ಚಾ.ರಂ.ಶ್ರೀನಿವಾಸಗೌಡ ಮಾತನಾಡಿ, ರಾಜ್ಯ ಸರ್ಕಾರ ಬಡವರ ಬಿಪಿಎಲ್ ಕಾರ್ಡ್‌ಗಳನ್ನು ದೊಡ್ಡಮಟ್ಟದಲ್ಲಿ ರದ್ದು ಮಾಡುವ ಮೂಲಕ ಬಡವರ ಹೊಟ್ಟೆಹೊಡೆಯುತ್ತಿದೆ. ರಾಜ್ಯ ಸರ್ಕಾರ ಬಡವರಿಗೆ ಕೊಟ್ಟಿರುವ ಬಿಪಿಎಲ್ ಕಾರ್ಡ್ ಕಿತ್ತುಕೊಂಡು ಅವರ ಜೀವನವನ್ನೇ ನಾಶ ಮಾಡಲು ಹೊರಟಿದೆ. ಇದು ಅತ್ಯಂತ ಖಂಡನೀಯವಾದದ್ದು ಎಂದು ಕಿಡಿಕಾರಿದರು.

ಯಾವುದೇ ಕಾರಣಕ್ಕೂ ರಾಜ್ಯ ಸರ್ಕಾರ ಬಡವರಿಗೆ ನೀಡಿರುವ ಬಿಪಿಎಲ್ ಕಾರ್ಡ್ ರದ್ದುಪಡಿಸಬಾರದು. ಒಂದು ವೇಳೆ ರದ್ದುಪಡಿಸಿ ಇನ್ನೂ 2 ತಿಂಗಳಲ್ಲಿ ನಿಮ್ಮ ಸರ್ಕಾರ ಸಂಪೂರ್ಣ ನಿರ್ಣಾಮ ಆಗುತ್ತದೆ. ಒಂದು ಕಡೆ ಗ್ಯಾರಂಟಿ ಯೋಜನೆಗಳನ್ನು ಕೊಟ್ಟು ಜನರಿಗೆ ಮಂಕುಬೂದಿ ಎರಚುತ್ತಿದ್ದೀರಿ. ಮತ್ತೊಂದು ಕಡೆ ಬಿಪಿಎಲ್ ಕಾರ್ಡ್ ಕಿತ್ತುಕೊಳ್ಳುವ ಕೆಲಸ ಆಗುತ್ತಿದೆ. ಇದರಿಂದ ಬಡವರು ಕಂಗಾಲಾಗಿದ್ದಾರೆ. ಬಿಪಿಎಲ್ ಅಕ್ಕಿಗೆ ಸೀಮಿತವಾಗದೆ ಬಡಜನರ ಜೀವನಾಡಿ, ಸಂಜೀವಿನಿ ಆಗಿದೆ. ಆಸ್ಪತ್ರೆಯಲ್ಲಿ ಉಚಿತ ಆರೋಗ್ಯ. ಸೇವೆ ಪಡೆದುಕೊಳ್ಳಲು ಸಹಕಾರಿಯಾಗಿದೆ. ನಿಜವಾಗಲ್ಲೂ ರಾಜ್ಯ ಸರ್ಕಾರಕ್ಕೆ ನೈತಿಕತೆ ಇದ್ದರೆ ನೀವು. ಅವೈಜ್ಞಾನಿಕವಾಗಿ ರದ್ದುಪಡಿಸುತ್ತಿರುವ 11 ಲಕ್ಷ ಬಿಪಿಎಲ್ ಕಾರ್ಡ್‌ಗಳನ್ನು ವಾಪಸ್ ಪಡೆಯಬೇಕು. ಇಲ್ಲದಿದ್ದರೆ ರಾಜ್ಯಜನತೆ ಜನಾಂದೋಲನ ಮಾಡಲಿದ್ದಾರೆ ಎಂದು ಎಚ್ಚರಿಸಿದರು.

ಶಾ.ಮುರಳಿ, ನಿಜಧ್ವನಿ ಗೋವಿಂದರಾಜು, ನಂಜುಂಡಶೆಟ್ಟಿ, ಮಹೇಶ ಗೌಡ, ಚಾ.ವೆಂ.ರಾಜ್ ಗೋಪಾಲ್, ಡ್ಯಾನ್ಸ್ ಬಸವರಾಜು, ಲಿಂಗರಾಜು, ಚಾ.ಸಿ.ಸಿದ್ದರಾಜು, ಪ್ರಕಾಶ್, ವೀರಭದ್ರ ಇತರರು ಭಾಗವಹಿಸಿದ್ದರು.