ಕರ್ನಾಟಕದಲ್ಲಿ ನೋಂದಾಯಿತ ತಂಬಾಕು ಬೆಳೆಗಾರರಿಗೆ ವಿಶೇಷ ಆರ್ಥಿಕ ನೆರವು ಪ್ರಾರಂಭಿಸಲು ಭಾರತ ಸರ್ಕಾರದ ತಂಬಾಕು ಮಂಡಳಿಯೊಂದಿಗೆ ಕರ್ಣಾಟಕ ಬ್ಯಾಂಕ್ ಒಪ್ಪಂದ ಮಾಡಿಕೊಂಡಿದೆ. ಕರ್ಣಾಟಕ ಬ್ಯಾಂಕ್ ತಂಬಾಕು ಮಂಡಳಿಯಲ್ಲಿ ನೋಂದಾಯಿಸಲಾದ ತಂಬಾಕು ಬೆಳೆಗಾರರ ಹಣಕಾಸಿನ ಅವಶ್ಯಕತೆಗಳನ್ನು ಪೂರೈಸಲು ಈ ಒಪ್ಪಂದ ಸಹಕಾರಿಯಾಗಲಿದೆ. ಇದು ತಂಬಾಕು ಕೃಷಿ ಸಮುದಾಯದ ಸುಸ್ಥಿರ ಬೆಳವಣಿಗೆಯನ್ನು ಬೆಂಬಲಿಸುವ ಗುರಿಯನ್ನು ಹೊಂದಿದೆ.
ಕನ್ನಡಪ್ರಭ ವಾರ್ತೆ ಮಂಗಳೂರು
ಕರ್ನಾಟಕದಲ್ಲಿ ನೋಂದಾಯಿತ ತಂಬಾಕು ಬೆಳೆಗಾರರಿಗೆ ವಿಶೇಷ ಆರ್ಥಿಕ ನೆರವು ಪ್ರಾರಂಭಿಸಲು ಭಾರತ ಸರ್ಕಾರದ ತಂಬಾಕು ಮಂಡಳಿಯೊಂದಿಗೆ ಕರ್ಣಾಟಕ ಬ್ಯಾಂಕ್ ಒಪ್ಪಂದ ಮಾಡಿಕೊಂಡಿದೆ. ಕರ್ಣಾಟಕ ಬ್ಯಾಂಕ್ ತಂಬಾಕು ಮಂಡಳಿಯಲ್ಲಿ ನೋಂದಾಯಿಸಲಾದ ತಂಬಾಕು ಬೆಳೆಗಾರರ ಹಣಕಾಸಿನ ಅವಶ್ಯಕತೆಗಳನ್ನು ಪೂರೈಸಲು ಈ ಒಪ್ಪಂದ ಸಹಕಾರಿಯಾಗಲಿದೆ. ಇದು ತಂಬಾಕು ಕೃಷಿ ಸಮುದಾಯದ ಸುಸ್ಥಿರ ಬೆಳವಣಿಗೆಯನ್ನು ಬೆಂಬಲಿಸುವ ಗುರಿಯನ್ನು ಹೊಂದಿದೆ.ಭಾರತ ಸರ್ಕಾರದ ತಂಬಾಕು ಮಂಡಳಿಯ ನಿರ್ದೇಶಕ ಶ್ರೀನಿವಾಸ ಬಿ.ಸಿ ಉಪಸ್ಥಿತಿಯಲ್ಲಿ ಕರ್ಣಾಟಕ ಬ್ಯಾಂಕ್‌ನ ವ್ಯವಸ್ಥಾಪಕ ನಿರ್ದೇಶಕ ಮತ್ತು ಸಿಇಒ ರಾಘವೇಂದ್ರ ಎಸ್. ಭಟ್ ಅವರು ಒಪ್ಪಂದಕ್ಕೆ ಸಹಿ ಹಾಕಿದರು. ಅಗತ್ಯ ಆರ್ಥಿಕ ಪರಿಹಾರಗಳ ಮೂಲಕ ರೈತ ಸಮುದಾಯವನ್ನು ಸಬಲೀಕರಣಗೊಳಿಸಲು ನಾವು ಬದ್ಧರಾಗಿದ್ದೇವೆ. ತಂಬಾಕು ಮಂಡಳಿಯೊಂದಿಗಿನ ನಮ್ಮ ಪಾಲುದಾರಿಕೆಯು ನೋಂದಾಯಿತ ತಂಬಾಕು ಬೆಳೆಗಾರರಿಗೆ ಬ್ಯಾಂಕಿಂಗ್ ಸೇವೆಗಳಿಗೆ ಸುಲಭ ಪ್ರವೇಶ ಮತ್ತು ಸಕಾಲಿಕ ಸಾಲದ ಬೆಂಬಲವನ್ನು ಪಡೆಯಲು ಸಹಾಯ ಮಾಡುತ್ತದೆ, ಉತ್ಪಾದಕತೆಯನ್ನು ಸುಧಾರಿಸಲು ಮತ್ತು ಅವರ ಜೀವನೋಪಾಯವನ್ನು ಬಲಪಡಿಸಲು ಅನುವು ಮಾಡಿಕೊಡುತ್ತದೆ ಎಂದು ಬ್ಯಾಂಕಿನ ಎಂಡಿ ರಾಘವೇಂದ್ರ ಭಟ್ ತಿಳಿಸಿದರು.
ಭಾರತ ಸರ್ಕಾರದ ತಂಬಾಕು ಮಂಡಳಿಯ ನಿರ್ದೇಶಕ ಶ್ರೀನಿವಾಸ ಬಿ.ಸಿ. ಮಾತನಾಡಿ, ನೋಂದಾಯಿತ ತಂಬಾಕು ಬೆಳೆಗಾರರಿಗೆ ಹಣಕಾಸಿನ ಪ್ರವೇಶವನ್ನು ಹೆಚ್ಚಿಸುವ ನಿಟ್ಟಿನಲ್ಲಿ ಈ ಸಹಯೋಗ ಒಂದು ಪ್ರಮುಖ ಹೆಜ್ಜೆಯಾಗಿದೆ. ರೈತರು ತಮ್ಮ ಹಣಕಾಸಿನ ಅಗತ್ಯಗಳನ್ನು ಹೆಚ್ಚು ಪರಿಣಾಮಕಾರಿಯಾಗಿ ಪೂರೈಸಲು ನಾವು ಸಹಾಯ ಮಾಡಬಹುದು ಎಂದರು