ಸಾರಾಂಶ
ಸಿದ್ದರಾಮಯ್ಯ 2024-25ನೇ ಸಾಲಿನ ಆಯವ್ಯಯ ಮಂಡಿಸಿದ್ದು, ಅದರಲ್ಲಿರುವ ಪ್ರಮುಖ ಘೋಷಣೆಗಳು ಈ ಕೆಳಕಂಡಂತಿವೆ.1. ವಿವಿಧ ರೈತಪರ ಯೋಜನೆಗಳನ್ನು ಒಗ್ಗೂಡಿಸಿ ಸಮಗ್ರ ಕೃಷಿ ಉತ್ತೇಜಿಸುವ ಕರ್ನಾಟಕ ರೈತ ಸಮೃದ್ಧಿ ಯೋಜನೆ ಜಾರಿ.2. ಕೃಷಿ ಮತ್ತು ಪೂರಕ ಚಟುವಟಿಕೆಗಳ ನೀತಿ ಮತ್ತು ಸಂಯೋಜನೆ ಹಾಗೂ ಪರಿಣಾಮಕಾರಿ ಅನುಷ್ಠಾನಕ್ಕಾಗಿ ಸಿಎಂ ಅಧ್ಯಕ್ಷತೆಯಲ್ಲಿ ಕೃಷಿ ಅಭಿವೃದ್ಧಿ ಪ್ರಾಧಿಕಾರ ರಚನೆ.3. ಕೈಗೆಟಕುವ ದರದಲ್ಲಿ ಸಂಸ್ಕರಿಸಿದ ಸಿರಿಧಾನ್ಯಗಳು ಮತ್ತು ಮೌಲ್ಯವರ್ಧಿತ ಸಿರಿಧಾನ್ಯ ಉತ್ಪನ್ನಗಳನ್ನು ಒದಗಿಸಲು ‘ನಮ್ಮ ಮಿಲ್ಲೆಟ್’ ಹೊಸ ಕಾರ್ಯಕ್ರಮ ಪ್ರಾರಂಭ.4. ಆಹಾರ ಸಂಸ್ಕರಣಾ ಕ್ಷೇತ್ರದಲ್ಲಿ ಪರಿಣಾಮಕಾರಿ ಕಾರ್ಯ ನಿರ್ವಹಣೆಗೆ ಕೃಷಿ ಇಲಾಖೆ ಅಧೀನದಲ್ಲಿ ಪ್ರತ್ಯೇಕ ಕೃಷಿ ಆಯುಕ್ತಾಲಯ ಸ್ಥಾಪನೆ.
5. ಸಾರ್ವಜನಿಕ, ಖಾಸಗಿ ಸಹಭಾಗಿತ್ವದಲ್ಲಿ ಬೆಂಗಳೂರಿನಲ್ಲಿ ಸುಸಜ್ಜಿತವಾದ ಅಂತಾರಾಷ್ಟ್ರೀಯ ಮಟ್ಟದ ವಾಣಿಜ್ಯ ಪುಷ್ಟ ಮಾರುಕಟ್ಟೆ ಸ್ಥಾಪನೆ. 6. ತೋಟಗಾರಿಕೆ ಬೆಳೆಗಳ ಸಂಸ್ಕರಣೆ ಮತ್ತು ರಫ್ತಿನ ಪ್ರಮಾಣ ಹೆಚ್ಚಿಸಲು ಪಾರ್ಕ್ ಹೌಸ್ ಮತ್ತು ಮೌಲ್ಯವರ್ಧನ ಸಂಸ್ಕರಣಾ ಘಟಕಗಳ ಸ್ಥಾಪನೆ. 7. ವಲಸೆ ಕುರಿಗಾರರ ಮೇಲಿನ ಶೋಷಣೆ ಮತ್ತು ದೌರ್ಜನ್ಯ ತಡೆಯಲು ‘ಕುರಿಗಾಹಿಗಳ ಮತ್ತು ಸ್ವತ್ತುಗಳ ಮೇಲೆ ದೌರ್ಜನ್ಯ ತಡೆ ಕಾಯ್ದೆ’ ಜಾರಿ. 8. ಎಪಿಎಂಸಿ ತಿದ್ದುಪಡಿ ಕಾಯ್ದೆ ವಾಪಸ್. 9. ರಾಜ್ಯದ ಎಲ್ಲಾ ಸಕ್ಕರೆ ಕಾರ್ಖಾನೆಗಳ ಬಳಿ ಎಪಿಎಂಸಿಗಳ ಮೂಲಕ ವೇ ಬ್ರಿಡ್ಜ್ ಗಳ ಸ್ಥಾಪನೆ.10. ಮೇಕೆದಾಟು ಯೋಜನೆಯ ಅನುಷ್ಠಾನಕ್ಕಾಗಿ ಪ್ರತ್ಯೇಕ ಯೋಜನಾ ವಿಭಾಗ ಹಾಗೂ 2 ಉಪ ವಿಭಾಗಗಗಳ ಸ್ಥಾಪನೆ. 11. ಎತ್ತಿನಹೊಳೆ ಸಮಗ್ರ ಕುಡಿಯುವ ನೀರು ಯೋಜನೆಯಡಿ ದೊಡ್ಡನಗರದ ಬಳಿ ಗುರುತ್ವ ಕಾಲುವೆಗೆ ನೀರು ಹರಿಸಲು ಕ್ರಮ. 12. ಕೃಷ್ಣಾ ಮೇಲ್ದಂಡೆ ಯೋಜನೆ ಹಂತ-3ರಡಿ ಉಪಯೋಜನೆಗಳನ್ನು ಪೂರ್ಣಗೊಳಿಸಲು ಕ್ರಮ. 13. ಭದ್ರಾ ಮೇಲ್ದಂಡೆ ಯೋಜನೆಯಡಿ ಚಿತ್ರದುರ್ಗ ಜಿಲ್ಲೆಯ ಸುಮಾರು 75 ಸಾವಿರ ಎಕರೆಗೆ ನೀರಾವರಿ ಕಲ್ಪಿಸಲು ಕ್ರಮ. 14. ಕಳಸಾ-ಬಂಡೂರಿ ನಾಲಾ ತಿರುವು ಯೋಜನೆಗೆ ಟೆಂಡರ್ ಪ್ರಕ್ರಿಯೆ ಆರಂಭ.15. ವಿಶ್ವದರ್ಜೆಯ ಪ್ರವಾಸೋದ್ಯಮ ಕೇಂದ್ರವಾಗಿ ಕೆಆರ್‌ಎಸ್ ಬೃಂದಾವನ ಉನ್ನತೀಕರಣ. 16. ಸೆಂಟರ್ ಆಫ್ ಎಕ್ಸಲೆನ್ಸ್ ಇನ್ ವಾಟರ್ ಮ್ಯಾನೇಜ್‌ಮೆಂಟ್ ಆಗಿ ಧಾರವಾಡದ ವಾಲ್ಮಿ ಸಂಸ್ಥೆ ಉನ್ನತೀಕರಣ.
17. ಐಐಟಿ ಮಾದರಿಯಲ್ಲಿ ವಿಶ್ವೇಶ್ವರಯ್ಯ ಇಂಜಿನಿಯರಿಂಗ್ ಕಾಲೇಜು ವಿಶ್ವವಿದ್ಯಾಲಯ ಅಭಿವೃದ್ಧಿ. 18. ಪ್ರತಿ ಜಿಲ್ಲೆಯಲ್ಲಿ ಒಂದು ಡೇ-ಕೇರ್ ಕಿಮೋಥೆರಪಿ ಕೇಂದ್ರ ಸ್ಥಾಪನೆ. 19. ಬೆಂಗಳೂರಿನಲ್ಲಿ ಹಬ್ ಆ್ಯಂಡ್ ಸ್ಪೋಕ್ ಮಾದರಿಯಲ್ಲಿ 430 ಪ್ರಯೋಗಾಲಯಗಳ ಸ್ಥಾಪನೆ. 20. ವೈದ್ಯಕೀಯ ಶಿಕ್ಷಣ ನಿರ್ದೇಶನಾಲಯ ಆಯುಕ್ತಾಲಯವಾಗಿ ಉನ್ನತೀಕರಣ. 21. ರಾಜ್ಯದಲ್ಲಿ ಒಂದು ಸಾವಿರ ಅಂಗನವಾಡಿಗಳ ನಿರ್ಮಾಣ.22. ಅಂಗನವಾಡಿ ಕಾರ್ಯಕರ್ತೆಯರು ಮತ್ತು ಮೇಲ್ವಿಚಾರಕಿಯರಿಗೆ ಸ್ಮಾರ್ಟ್ ಫೋನ್ ಒದಗಿಸಲು ಕ್ರಮ.23. ಪದ್ಮಶ್ರೀ ಡಾ. ಸಿದ್ದಲಿಂಗಯ್ಯ ಸ್ಮರಣಾರ್ಥ ಬೆಂಗಳೂರು ವಿಶ್ವವಿದ್ಯಾಲಯದಲ್ಲಿ ಗ್ರಂಥಾಲಯ ಸ್ಥಾಪನೆ. 24. ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆಯ ಆಶ್ರಮ ಶಾಲೆಗಳಿಗೆ ಮಹರ್ಷಿ ವಾಲ್ಮೀಕಿ ಆದಿವಾಸಿ ಬುಡಕಟ್ಟು ವಸತಿ ಶಾಲೆ ಎಂದು ಮರುನಾಮಕರಣ. 25. ಐದು ಸಾವಿರ ಯುವಕ/ಯುವತಿಯರಿಗೆ ಡ್ರೋನ್ ಆಧಾರಿತ ಫೋಟೋಗ್ರಫಿ ಮತ್ತು ವಿಡಿಯೋಗ್ರಫಿ ತರಬೇತಿ.26. 2024-25ರಲ್ಲಿ 3 ಲಕ್ಷ ಮನೆಗಳ ನಿರ್ಮಾಣ. 27. ನಗರ ಪ್ರದೇಶದ ಬಡವರಿಗೆ ವಸತಿ ಸೌಲಭ್ಯಕ್ಕಾಗಿ ಸಂಪನ್ಮೂಲ ಕ್ರೋಢೀಕರಣಕ್ಕೆ ಅಸ್ಸೆಟ್ ಮೊನೆಟೈಸೇಷನ್, ಕರ್ನಾಟಕ ಅಫಾರ್ಡೆಬಲ್ ಹೌಸಿಂಗ್ ಫಂಡ್ ಸ್ಥಾಪನೆ.28. 80 ವರ್ಷ ದಾಟಿದ ಹಿರಿಯ ನಾಗರಿಕರು ಮಾತ್ರ ಇರುವ ಮನೆಯ ಬಾಗಿಲಿಗೆ ಆಹಾರ ಧಾನ್ಯ ತಲುಪಿಸಲು ‘ಅನ್ನ-ಸುವಿಧಾ’ ಯೋಜನೆ ಜಾರಿ.
29. ಗಿಗ್ ಕಾರ್ಮಿಕರ ಕಲ್ಯಾಣ ಕಾರ್ಯಕ್ರಮಗಳ ಜಾರಿಗೆ ಹೊಸ ವಿಧೇಯಕ ಜಾರಿ.30. ಯುವಜನರಿಗೆ ಉತ್ತಮ ಉದ್ಯೋಗ ಮತ್ತು ಉದ್ಯಮ ಅವಕಾಶ ಒದಗಿಸಲು ರಾಜ್ಯ ಕೌಶಲ್ಯ ನೀತಿ ಜಾರಿ.31. ಬಳ್ಳಾರಿ ಜಿಲ್ಲೆಯ ಸಂಡೂರಿನಲ್ಲಿ ಸ್ಕಿಲ್ ಅಕಾಡೆಮಿ ಸ್ಥಾಪನೆ. 32. ಕಲಬುರಗಿಯ ಕೆಜಿಟಿಟಿಐನಲ್ಲಿ ಕಂಪ್ಯೂಟರ್ ನ್ಯೂಮೆರಿಕಲ್ ಕಂಟ್ರೋಲ್ ಯಂತ್ರ ಕೇಂದ್ರೀಕರಿಸುವ ಮೊದಲ ಶ್ರೇಷ್ಠತಾ ಕೇಂದ್ರ ಸ್ಥಾಪನೆ. 33. ಗ್ರಾಮೀಣ ಪ್ರದೇಶದಲ್ಲಿ ಮಹಿಳೆಯರೇ ನಡೆಸುವ ಕ್ಯಾಂಟಿನ್ ಕೆಫೆ ಸಂಜೀವಿನಿ ಸ್ಥಾಪನೆ. 34. ನರೇಗಾ ಯೋಜನೆಯಡಿ 24-25ರಲ್ಲಿ 16 ಕೋಟಿ ಮಾನವ ದಿನಗಳ ಸೃಷ್ಟಿ ಗುರಿ.35. ಎಲ್ಲಾ ಗ್ರಾಮ ಪಂಚಾಯಿತಿಗಳಲ್ಲಿ ಇ-ಆಫೀಸ್ ಆರಂಭ.36. ಬೆಂಗಳೂರು ನಗರವನ್ನು ವಿಶ್ವದರ್ಜೆಯ ನಗರವಾಗಿ ಅಭಿವೃದ್ಧಿಪಡಿಸಲು ಬ್ರ್ಯಾಂಡ್ ಬೆಂಗಳೂರು ಪರಿಕಲ್ಪನೆ ಜಾರಿ. 37. ಬೆಂಗಳೂರು ನಗರದಲ್ಲಿ 250 ಮೀಟರ್ ಎತ್ತರದ ಸ್ಕೈ-ಡೆಕ್ ನಿರ್ಮಾಣಕ್ಕೆ ಕ್ರಮ. 38. ಫೆರಿಫೆರಲ್ ರಿಂಗ್ ರೋಡ್ ನ್ನು ಬೆಂಗಳೂರು ಬ್ಯುಸಿನೆಸ್ ಕಾರಿಡಾರ್ ಎಂಬ ಹೊಸ ಪರಿಕಲ್ಪನೆಯಲ್ಲಿ ಅಭಿವೃದ್ಧಿಪಡಿಸಲು ಕ್ರಮ.39. ಮೈಸೂರು, ಮಂಗಳೂರು, ಹುಬ್ಬಳ್ಳಿ, ಬೆಳಗಾವಿ, ಕಲಬುರಗಿ, ಕೆಜಿಎಫ್, ತುಮಕೂರು, ಬಳ್ಳಾರಿ ನಗರಗಳ ಸಮೀಪ ಇಂಟಿಗ್ರೇಟೆಡ್ ಟೌನ್‌ಶಿಫ್ ಅಭಿವೃದ್ಧಿ.40. ಒಂದು ಲಕ್ಷಕ್ಕೂ ಅಧಿಕ ಜನಸಂಖ್ಯೆ ಹೊಂದಿರುವ ಸ್ಥಳೀಯ ಯೋಜನಾ ಪ್ರಾಧಿಕಾರಗಳನ್ನು ನಗರಾಭಿವೃದ್ಧಿ ಪ್ರಾಧಿಕಾರಗಳಾಗಿ ಉನ್ನತೀಕರಣ. 41. ಮಂಗಳೂರು ಬಂದರಿನಿಂದ ಬೆಂಗಳೂರುವರೆಗೆ ಹಾಗೂ ಬೀದರ್‌ನಿಂದ ಬೆಂಗಳೂರು ನಡುವೆ ಆರ್ಥಿಕ ಅಭಿವೃದ್ಧಿ ಕಾರಿಡಾರ್ ನಿರ್ಮಾಣಕ್ಕೆ ಕ್ರಮ.42. ಮಂಗಳೂರಿನ ಗುರುಪುರ ಹಾಗೂ ನೇತ್ರಾವತಿ ನದಿಗಳಲ್ಲಿ ಜಲಮೆಟ್ರೋ ಸೇವೆ ಪರಿಚಯಿಸಲು ಕಾರ್ಯಸಾಧ್ಯತಾ ವರದಿಗೆ ಕ್ರಮ.43. ಬೆಂಗಳೂರು ಸಮೀಪ 2 ಸಾವಿರ ಎಕರೆ ಪ್ರದೇಶದಲ್ಲಿ ನಾಲೇಜ್ ಹೆಲ್ತ್‌ಕೇರ್, ಇನ್ನೋವೇಷನ್ ಆ್ಯಂಡ್ ರೀಸರ್ಚ್ ಸಿಟಿ ಅಭಿವೃದ್ಧಿಗೆ ಕ್ರಮ.44. ಮಂಡ್ಯದ ಮೈಶುಗರ್ ಕಾರ್ಖಾನೆ ಆವರಣದಲ್ಲಿ ಹೊಸ ಸಕ್ಕರೆ ಕಾರ್ಖಾನೆ ನಿರ್ಮಾಣ. 45. ಸ್ಟಾರ್ಟ್‌ಅಫ್ ಉತ್ತೇಜನಕ್ಕೆ ರಾಜೀವ್ ಗಾಂಧಿ ವಾಣಿಜ್ಯೋದ್ಯಮ ಕಾರ್ಯಕ್ರಮ ಜಾರಿ. 46. 24-25ರಲ್ಲಿ ಹೊಸ ಜಿಸಿಸಿ ನೀತಿ ಜಾರಿಗೆ ಕ್ರಮ.47. ಆರೋಗ್ಯ, ಕೃಷಿ, ಜೀವ ವಿಜ್ಞಾನ ಕ್ಷೇತ್ರಗಳ ಸಂಶೋಧನೆಗೆ ಉತ್ತೇಜನ ನೀಡಲು ಸುಧಾರಿತ ಜಿನೋಮ್ ಎಡಿಟಿಂಗ್ ಮತ್ತು ಜೀನ್ ಥೆರಪಿ ಕೇಂದ್ರ ಸ್ಥಾಪನೆ.48. 233 ಕೋಟಿ ವೆಚ್ಚದಲ್ಲಿ ಬೆಂಗಳೂರಿನಲ್ಲಿ ವಿಜ್ಞಾನ ನಗರ ಸ್ಥಾಪನೆ. 49. ಬಸವಣ್ಣನವರ ಜನ್ಮಸ್ಥಳ ಅಭಿವೃದ್ಧಿಗೆ ಬಸವನಬಾಗೇವಾಡಿ ಅಭಿವೃದ್ಧಿ ಪ್ರಾಧಿಕಾರ ರಚನೆ. 50. ಹಿರೇಕೆರೂರು ತಾಲೂಕಿನಲ್ಲಿ ವಚನಕಾರ ಸರ್ವಜ್ಞನ ಸ್ಮಾರಕ ನಿರ್ಮಾಣ.51. ಮಾಜಿ ಸಿಎಂ ಎಸ್.ಬಂಗಾರಪ್ಪ ಸ್ಮಾರಕ ನಿರ್ಮಾಣಕ್ಕೆ ಕ್ರಮ.52. ಬೆಂಗಳೂರು ಉತ್ತರ ತಾಲೂಕಿನಲ್ಲಿ 70 ಎಕರೆ ಪ್ರದೇಶದಲ್ಲಿ ಕ್ರಿಡಾನಗರ ಸ್ಥಾಪನೆ. 53. ಕಲಬುರಗಿಯಲ್ಲಿ ವಚನ ಮಂಟಪ ಸ್ಥಾಪನೆ. 54. ಬಂಡೀಪುರ, ದಾಂಡೇಲಿ, ಕಬಿನಿಯಲ್ಲಿ ಇಂಟರ್ ಪ್ರಿಟೇಷನ್ ಸೆಂಟರ್ ನಿರ್ಮಾಣ.55. 10 ಕೋಟಿ ವೆಚ್ಚದಲ್ಲಿ ಶಾಲಾ ಮಕ್ಕಳಿಗೆ ಹವಾಮಾನ ಬದಲಾವಣೆ ಅನುಭವ ಕೇಂದ್ರ ಆರಂಭ. 56. ವಾರಾಣಸಿಯಲ್ಲಿ 5 ಕೋಟಿ ವೆಚ್ಚದಲ್ಲಿ ವಸತಿ ಸಂಕೀರ್ಣ ನಿರ್ಮಾಣ.57. ದೊಡ್ಡಬಳ್ಳಾಪುರದ ಘಾಟಿ ಸುಬ್ರಮಣ್ಯ, ಕೊಪ್ಪಳದ ಹುಲಿಗೆಮ್ಮ ದೇವಾಲಯ ಅಭಿವೃದ್ಧಿಗೆ ಪ್ರತ್ಯೇಕ ಪ್ರಾಧಿಕಾರ ರಚನೆ.58. ಮಂತ್ರಾಲಯಕ್ಕೆ ಸಂಪರ್ಕ ಕಲ್ಪಿಸಲು ಚಿಕ್ಕಮಂಚಾಲಿ ಬಳಿ ಬ್ರಿಡ್ಜ್-ಕಂ-ಬ್ಯಾರೇಜ್ ನಿರ್ಮಾಣ.59. ಕನ್ನಡ ಕಸ್ತೂರಿ ಸಾಫ್ಟ್‌ವೇರ್ ತಂತ್ರಾಂಶದ ಅಭಿವೃದ್ಧಿಗೆ ಕ್ರಮ.60. ಪತ್ರಕರ್ತರಿಗೆ ವಡ್ಡರ್ಸೆ ರಘುರಾಮ ಶೆಟ್ಟಿ ಪ್ರಶಸ್ತಿ ಸ್ಥಾಪನೆ.61. ನ್ಯಾಯವಾದಿಗಳ ಮೇಲಿನ ಹಿಂಸಾಚಾರ ನಿಷೇಧ ವಿಧೇಯಕ-2023ರ ಜಾರಿಗೆ ಕ್ರಮ.