ಸಾರಾಂಶ
ಸಿಂಧನೂರಿನ ಪಿಡಬ್ಲ್ಯೂಡಿ ಕ್ಯಾಂಪಿನ ಜ್ಯೂನಿಯರ್ ಕಾಲೇಜು ಮೈದಾನದಲ್ಲಿ ಕರ್ನಾಟಕ ದರ್ಶನ ವಿದ್ಯಾರ್ಥಿಗಳ ಪ್ರವಾಸಕ್ಕೆ ಶಾಸಕ ಹಂಪನಗೌಡ ಬಾದರ್ಲಿ ಚಾಲನೆ ನೀಡಿದರು
ಕನ್ನಡಪ್ರಭ ವಾರ್ತೆ ಸಿಂಧನೂರು
ಜಿಲ್ಲಾಡಳಿತ, ಜಿಪಂ, ಪ್ರವಾಸೋದ್ಯಮ ಇಲಾಖೆ, ಶಿಕ್ಷಣ ಇಲಾಖೆ ರಾಯಚೂರು ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿ ಕಾರ್ಯಾಲಯದ ಸಂಯುಕ್ತಾಶ್ರಯದಲ್ಲಿ ಪ್ರಸಕ್ತ ಸಾಲಿನ ಕರ್ನಾಟಕ ದರ್ಶನ ವಿದ್ಯಾರ್ಥಿಗಳ ಪ್ರವಾಸಕ್ಕೆ ಶಾಸಕ ಹಂಪನಗೌಡ ಬಾದರ್ಲಿ ನಗರದ ಪಿಡಬ್ಲ್ಯೂಡಿ ಕ್ಯಾಂಪಿನ ಜ್ಯೂನಿಯರ್ ಕಾಲೇಜು ಮೈದಾನದಲ್ಲಿ ಚಾಲನೆ ನೀಡಿದರು.ನಂತರ ಮಾತನಾಡಿದ ಅವರು, ಇತಿಹಾಸವನ್ನು ಎಂದಿಗೂ ಯಾರು ಮರೆಯಬಾರದು. ಇತಿಹಾಸ ಪ್ರಸಿದ್ಧ ವಿವಿಧ ಪ್ರೇಕ್ಷಣೀಯ ಸ್ಥಳಗಳನ್ನು ಈಗಿನ ವಿದ್ಯಾರ್ಥಿಗಳಿಗೆ ದರ್ಶನ ಮಾಡಿಸುವ ಮೂಲಕ ಇತಿಹಾಸದ ಬಗ್ಗೆ ಅರಿವು ಮೂಡಿಸುವ ಕೆಲಸ ಶಿಕ್ಷಕರು ಮಾಡಬೇಕು. ವಿದ್ಯಾರ್ಥಿಗಳು ಪ್ರವಾಸಕ್ಕೆ ಹೋಗುವ ಸ್ಥಳಗಳ ಕುರಿತು ಸಮಗ್ರ ಮಾಹಿತಿ ಪಡೆದುಕೊಂಡು ಇತರರಿಗೆ ತಿಳಿಸುವಂತಾಗಬೇಕು ಎಂದರು.
ಪ್ರಭಾರಿ ಕ್ಷೇತ್ರ ಶಿಕ್ಷಣಾಧಿಕಾರಿ ಬಸವಲಿಂಗಪ್ಪ ಮಾತನಾಡಿದರು.ಪ್ರೌಢ ಶಾಲಾ ಸಹಶಿಕ್ಷಕರ ಸಂಘದ ಅಧ್ಯಕ್ಷ ಮಲ್ಲಪ್ಪ, ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಚಂದ್ರಶೇಖರ ಹಿರೇಮಠ, ಬ್ಲಾಕ್ ಕಾಂಗ್ರೆಸ್ ನಗರ ಘಟಕದ ಅಧ್ಯಕ್ಷ ಖಾಜಿಮಲಿಕ್ ವಕೀಲ ಸೇರಿದಂತೆ ವಿವಿಧ ಪ್ರೌಢ ಶಾಲೆಗಳ ಮುಖ್ಯಶಿಕ್ಷಕರು ಇದ್ದರು.
;Resize=(128,128))
;Resize=(128,128))
;Resize=(128,128))
;Resize=(128,128))