ಸಾರಾಂಶ
ಮೆಡಿಕಲ್ ಕಾಲೇಜಿಗೆ ಬಜೆಟ್‌ನಲ್ಲಿ ಅನುದಾನ ಮೀಸಲಿಡದಿರುವುದಕ್ಕೆ ಆಕ್ರೋಶ ಹೊರಹಾಕಿದ್ದು, ಮಾನವ ಸರಪಳಿಸಿ ನಿರ್ಮಿಸಿದರು.
ಕನ್ನಡಪ್ರಭ ವಾರ್ತೆ ಬಾಗಲಕೋಟೆ
ಈ ಹಿಂದೆ ಘೋಷಣೆಯಾಗಿರುವ ಬಾಗಲಕೋಟೆ ಮೆಡಿಕಲ್ ಕಾಲೇಜಿಗೆ ರಾಜ್ಯ ಬಜೆಟ್‌ನಲ್ಲಿ ಅನುದಾನ ಮೀಸಲಿಡದಿರುವುದನ್ನು ಖಂಡಿಸಿ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ನಗರದಲ್ಲಿ ಪ್ರತಿಭಟನೆ ನಡೆಸಿದರು.ನಗರದ ಬಸವೇಶ್ವರ ವೃತ್ತದ ಬಳಿ ಜಮಾವಣೆಗೊಂಡ ಕರವೇ ಕಾರ್ಯಕರ್ತರು ಮೆಡಿಕಲ್ ಕಾಲೇಜಿಗೆ ಅನುದಾನ ನೀಡದ ಮುಖ್ಯಮಂತ್ರಿಗಳ ವಿರುದ್ಧ ಘೋಷಣೆ ಕೂಗಿದರು. ಮಾನವ ಸರಪಳಿ ನಿರ್ಮಿಸಿ ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದ ಕರವೇ ಜಿಲ್ಲಾಧ್ಯಕ್ಷ ಬಸವರಾಜ ಧರ್ಮಂತಿ, ಮುಖ್ಯಮಂತ್ರಿ ಸಿದ್ದರಾ ಮಯ್ಯನವರು ಮಂಡಿಸಿದ 2024-25ನೇ ಸಾಲಿನ ಆಯವ್ಯಯದಲ್ಲಿ ಮೆಡಿಕಲ್ ಕಾಲೇಜು ಆರಂಭಕ್ಕೆ ಯಾವುದೇ ಅನುದಾನ ನೀಡಿಲ್ಲ. 2014-15ರಲ್ಲಿ ತಾವೇ ಘೋಷಣೆ ಮಾಡಿದ್ದ ಸರ್ಕಾರಿ ವೈದ್ಯಕೀಯ ಕಾಲೇಜು ಸ್ಥಾಪನೆಗೆ ಒಂದು ರೂಪಾಯಿ ಅನುದಾನ ಒದಗಿಸಿಲ್ಲ. ತಮಗೆ ರಾಜಕೀಯ ಪುನರ್ಜನ್ಮ ನೀಡಿದ ಜಿಲ್ಲೆಗೆ ಅನ್ಯಾಯ ಎಸಗಿದ್ದಾರೆ. ಚುನಾವಣೆ ಪ್ರಚಾರದ ವೇಳೆ ಮೊದಲ ಬಜೆಟ್ ನಲ್ಲಿ ಕಾಲೇಜು ಸ್ಥಾಪನೆಗೆ ಅನುದಾನ ಒದಗಿಸಿ ಗುದ್ದಲಿ ಪೂಜೆ, ಉದ್ಘಾಟನೆಗೆ ನಾನೇ ಬರ್ತೀನಿ ಎಂದು ಭರವಸೆ ನೀಡಿ ಜಿಲ್ಲೆಯ ಜನತೆಗೆ ನಂಬಿಕೆ ದ್ರೋಹ ಮಾಡಿದ್ದಾರೆ ಎಂದು ಆರೋಪಿಸಿದರು.ಪ್ರತಿಭಟನೆ0ುಲ್ಲಿ ಬಿಜೆಪಿ ಮುಖಂಡ ರಾಜು ನಾಯ್ಕರ್ , ಕರವೇ ಮುಖಂಡರಾದ ಬಸವರಾಜ ಅಂಬಿಗೇರ, ಕಿರಣ್ ಗಾಳಿ, ಮಂಜುನಾಥ ಕಲಾಲ್, ರಾಚಪ್ಪ ಸನದಿ, ರಾಹುಲ್ ಶೆಟ್ಟರ್, ಶಶಿ ದಂಡೀನ, ಮಹಾಂತೇಶ ಮೂಗನೂರ, ರಾಹುಲ್ ರಾಠೋಡ, ಅಭಿಷೇಕ ಗುಗ್ಗರಿ, ಸಾಗರ ದೇಸಾಯಿ, ನಾಗರಾಜ್ ಜಾಲಗಾರ ಇದ್ದರು.