ಬೆಂಗಳೂರಿನ ಜಿ.ಎಂ.ಕೆ. ಎಜು ಟೆಕ್ ಸಹಯೋಗದಲ್ಲಿ ರಾಜ್ಯದ ಅತಿ ದೊಡ್ಡ ಶೈಕ್ಷಣಿಕ ಜಾಗೃತಿ ಮತ್ತು ಮಾರ್ಗದರ್ಶನ ಕಾರ್ಯಕ್ರಮ- ಕರ್ನಾಟಕ ಎಜುಕೇಶನ್ ಎಕ್ಸ್ ಪೋ-2026 ಮೇ 22ರಂದು ಬೆಳಗ್ಗೆ 10 ಗಂಟೆಯಿಂದ ಸಂಜೆ 5 ಗಂಟೆವರೆಗೆ ನಗರದ ಶಾಮನೂರು ಶಿವಶಂಕರಪ್ಪ ಪಾರ್ವತಮ್ಮ ಸಮುದಾಯ ಭವನದಲ್ಲಿ ನಡೆಯಲಿದೆ.

- ಜಿಎಂಕೆ ಎಜು ಟೆಕ್ ಸಹಯೋಗ । ಶೈಕ್ಷಣಿಕ ಜಾಗೃತಿ- ಮಾರ್ಗದರ್ಶನ ಕಾರ್ಯಕ್ರಮ

- - -

ಕನ್ನಡಪ್ರಭ ವಾರ್ತೆ ದಾವಣಗೆರೆ

ಬೆಂಗಳೂರಿನ ಜಿ.ಎಂ.ಕೆ. ಎಜು ಟೆಕ್ ಸಹಯೋಗದಲ್ಲಿ ರಾಜ್ಯದ ಅತಿ ದೊಡ್ಡ ಶೈಕ್ಷಣಿಕ ಜಾಗೃತಿ ಮತ್ತು ಮಾರ್ಗದರ್ಶನ ಕಾರ್ಯಕ್ರಮ- ಕರ್ನಾಟಕ ಎಜುಕೇಶನ್ ಎಕ್ಸ್ ಪೋ-2026 ಮೇ 22ರಂದು ಬೆಳಗ್ಗೆ 10 ಗಂಟೆಯಿಂದ ಸಂಜೆ 5 ಗಂಟೆವರೆಗೆ ನಗರದ ಶಾಮನೂರು ಶಿವಶಂಕರಪ್ಪ ಪಾರ್ವತಮ್ಮ ಸಮುದಾಯ ಭವನದಲ್ಲಿ ನಡೆಯಲಿದೆ.

ಬುಧವಾರ ಸುದ್ದಿಗೋಷ್ಠಿಯಲ್ಲಿ ಖಾಸಗಿ ಅನುದಾನರಹಿತ ಶಿಕ್ಷಣ ಸಂಸ್ಥೆಗಳ ಸಂಘದ ರಾಜ್ಯ ಕಾರ್ಯಾಧ್ಯಕ್ಷ ಕೊಟ್ರೇಶ ಮಾತನಾಡಿ, ರಾಜ್ಯದಲ್ಲಿ ಖಾಸಗಿ ಅನುದಾನರಹಿತ ಶಾಲೆಗಳು ಎದುರಿಸುತ್ತಿರುವ ಅನೇಕ ಜ್ವಲಂತ ಸಮಸ್ಯೆ ಹಾಗೂ ಆಡಳಿತಾತ್ಮಕ ಸವಾಲುಗಳಿಗೆ ಪರಿಹಾರ, ಕಾನೂನುಬದ್ಧ ಮಾರ್ಗದರ್ಶನ ಒದಗಿಸುವ ಉದ್ದೇಶದಿಂದ ಈ ಕಾರ್ಯಕ್ರಮ ರೂಪಿಸಲಾಗಿದೆ ಎಂದರು.

ಕಾರ್ಯಕ್ರಮದಲ್ಲಿ ಪ್ರಮುಖವಾಗಿ ಶೈಕ್ಷಣಿಕ ಉದ್ದೇಶಕ್ಕಾಗಿ ಕಡ್ಡಾಯ ಭೂ-ಪರಿವರ್ತನೆ, ಕಟ್ಟಡ ಮತ್ತು ಅಗ್ನಿ ಸುರಕ್ಷತಾ ನಿಯಮಗಳು, ಆರ್‌ಟಿಇ ಸಂಬಂಧಿತ ವಿಷಯಗಳು, ಶಾಲಾ ಕಟ್ಟಡಗಳಿಗೆ ಆಸ್ತಿ ತೆರಿಗೆ, ಇ.ಎಸ್.ಐ, ಪಿಎಫ್, ಗ್ರಾಚ್ಯುಟಿ, ಕಾರ್ಮಿಕ ಕಾನೂನುಗಳು ಇತ್ಯಾದಿ ವಿಷಯಗಳ ಕುರಿತು ತಜ್ಞ ಸಂಪನ್ಮೂಲ ವ್ಯಕ್ತಿಗಳು ಮಾಹಿತಿ ನೀಡಲಿದ್ದಾರೆ ಎಂದರು.

ರಾಜ್ಯದಲ್ಲಿ ಯಶಸ್ವಿಯಾಗಿ 10 ವರ್ಷ ಹಾಗೂ 25 ವರ್ಷ ಪೂರೈಸಿರುವ ಖಾಸಗಿ ಶಾಲೆಗಳಿಗೆ ಅಭಿನಂದನಾ ಪ್ರಮಾಣಪತ್ರ ನೀಡಿ ಗೌರವಿಸಲಾಗುತ್ತದೆ. ಶಿಕ್ಷಣ ಕ್ಷೇತ್ರದ ಹೊಸ ತಂತ್ರಜ್ಞಾನ, ಆಡಳಿತಾತ್ಮಕ ಪರಿಹಾರ, ಕಾನೂನು ಸಲಹೆ ಹಾಗೂ ಶಿಕ್ಷಣ ಕ್ಷೇತ್ರದ ಇತ್ತೀಚಿನ ಬೆಳವಣಿಗೆಗಳ ಕುರಿತು ತಿಳಿದುಕೊಳ್ಳಲು ಇದು ಅತ್ಯುತ್ತಮ ವೇದಿಕೆಯಾಗಿದೆ. ರಾಜ್ಯದ ಎಲ್ಲಾ ಶಾಲಾ ಮುಖ್ಯಸ್ಥರು ಮತ್ತು ಶಿಕ್ಷಣಾಸಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಕಾರ್ಯಕ್ರಮದಲ್ಲಿ ಭಾಗವಹಿಸಬೇಕೆಂದು ಅವರು ಮನವಿ ಮಾಡಿದರು.

ಸುದ್ದಿಗೋಷ್ಠಿಯಲ್ಲಿ ಕಾರ್ಯಕ್ರಮ ಸಂಯೋಜಕ ಪ್ರಭಾಕರ್ ಅರಸ್ ಇದ್ದರು.

- - -

-20ಕೆಡಿವಿಜಿ38: ದಾವಣಗೆರೆಯಲ್ಲಿ ಕರ್ನಾಟಕ ಎಜುಕೇಶನ್ ಎಕ್ಸ್ ಪೋ ಆಯೋಜಿಸಿರುವ ಕುರಿತು ಕೊಟ್ರೇಶ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದರು.