ಸಾರಾಂಶ
ಬೆಂಗಳೂರು : ಕನ್ನಡ ರಾಜ್ಯೋತ್ಸವದ ಮಹತ್ವ ಸಾರುವ ದೃಷ್ಟಿಯಿಂದ ಖಾಸಗಿ ಮತ್ತು ಸರ್ಕಾರಿ ಕಟ್ಟಡಗಳಲ್ಲಿ ನವೆಂಬರ್ ತಿಂಗಳಿಡೀ ಕನ್ನಡ ಬಾವುಟ ಹಾರಿಸುವ ಕುರಿತು ಶೀಘ್ರ ಆದೇಶ ಹೊರಡಿಸಲಾಗುವುದು ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದರು.
ಪುಷ್ಪ ನಮನ
ವಿಧಾನಸೌಧದ ಆವರಣದಲ್ಲಿ ತಾಯಿ ಭುವನೇಶ್ವರಿ ಪ್ರತಿಮೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೊಂದಿಗೆ ಪುಷ್ಪ ನಮನ ಸಲ್ಲಿಸಿ ನಂತರ ಅವರು ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದರು.
ಕರ್ನಾಟಕ ಕೇವಲ ನಾಡಲ್ಲ, ಸಂಸ್ಕೃತಿಯ ಬೀಡು
ಕರ್ನಾಟಕ ಕೇವಲ ನಾಡಲ್ಲ, ಸಂಸ್ಕೃತಿಯ ಬೀಡು. ಕನ್ನಡ ಕೇವಲ ನುಡಿಯಲ್ಲ, ನಮ್ಮ ಅಂತರಂಗದ ಮಾತು. ಕನ್ನಡವು ಕಲಿತವರಿಗೆ ಅಮೃತ, ನಡೆದವರಿಗೆ ನೆರಳು, ದಾರಿದೀಪ. ಕನ್ನಡ ಎನ್ನುವುದು ಜೀವನದ ವಿಧಾನ. ಇಂತಹ ಕನ್ನಡವನ್ನು ಇಂಗ್ಲಿಷ್ ಹಾಗೂ ಹಿಂದಿ ಭಾಷೆಯ ದಾಳಿಯಿಂದ ನಾವೆಲ್ಲರೂ ಕಾಪಾಡಿಕೊಳ್ಳಬೇಕು ಎಂದರು.
ಕನ್ನಡ ಮತ್ತು ಕರ್ನಾಟಕ ಬಗ್ಗೆ ಎಲ್ಲರಿಗೂ ತಿಳಿಯುವಂತೆ ಮಾಡಲು ಖಾಸಗಿ ಮತ್ತು ಸರ್ಕಾರಿ ಕಟ್ಟಡಗಳಲ್ಲಿ ನವೆಂಬರ್ ತಿಂಗಳಿಡೀ ಕನ್ನಡ ಬಾವುಟ ಹಾರಿಸುವಂತೆ ಆದೇಶಿಸುವ ಚಿಂತನೆಯಿದೆ. ಈ ಕುರಿತು ಮುಂದಿನ ಸಚಿವ ಸಂಪುಟದಲ್ಲಿ ಚರ್ಚೆ ನಡೆಸಿ, ಅಂತಿಮ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ಹೇಳಿದರು.
;Resize=(128,128))
;Resize=(128,128))