ಸಾರಾಂಶ
ಕರ್ನಾಟಕ ಬಹು ಸಂಸ್ಕೃತಿಯ ನಾಡಾಗಿದೆ ಎಂದು ಹಂಪಿ ಕನ್ನಡ ವಿವಿ ಕುಲಪತಿ ಡಾ. ಡಿ.ವಿ. ಪರಶಿವಮೂರ್ತಿ ಹೇಳಿದರು.
ರಾಣಿಬೆನ್ನೂರು: ಕರ್ನಾಟಕ ಬಹು ಸಂಸ್ಕೃತಿಯ ನಾಡಾಗಿದೆ ಎಂದು ಹಂಪಿ ಕನ್ನಡ ವಿವಿ ಕುಲಪತಿ ಡಾ. ಡಿ.ವಿ. ಪರಮಶಿವಮೂರ್ತಿ ಹೇಳಿದರು.
ನಗರದ ಕೆಎಲ್‌ಇ ಸಂಸ್ಥೆಯ ರಾಜರಾಜೇಶ್ವರಿ ಮಹಾವಿದ್ಯಾಲಯದ ಆವರಣದಲ್ಲಿ ಶುಕ್ರವಾರ ಸ್ಥಳೀಯ ಪರಿವರ್ತನ ಸಂಸ್ಥೆ ವತಿಯಿಂದ ಕರ್ನಾಟಕ ವೈಭವ ಅಂಗವಾಗಿ ಏರ್ಪಡಿಸಿದ್ದ ಪ್ರದರ್ಶನ ಉದ್ಘಾಟಿಸಿ ಮಾತನಾಡಿದರು.ಇಂದಿನ ಯುವ ಜನಾಂಗ ಯಾರಿಗೂ ಮಾದರಿಯಾಗಿಲ್ಲ. ಈ ನಿಟ್ಟಿನಲ್ಲಿ ಅವರಿಗೆ ನಮ್ಮ ನಾಡಿನ ಕಲೆ, ವಿಚಾರಗಳನ್ನು ತಲುಪಿಸಬೇಕಾಗಿದೆ ಎಂದರು.
ಸಾನ್ನಿಧ್ಯ ವಹಿಸಿದ್ದ ಕೊಡಿಯಾಲ ಹೊಸಪೇಟೆ ಪುಣ್ಯಕೋಟಿ ಮಠದ ಜಗದೀಶ್ವರ ಮಹಾಸ್ವಾಮಿಗಳು ಮಾತನಾಡಿ, ಭಾರತ ಒಳ್ಳೆಯ ಚಿಂತನೆಗಳನ್ನು ಹೊಂದಿರುವ ದೇಶವಾಗಿದೆ. ಹಾವೇರಿಯು ಅನೇಕ ಶರಣರು, ಮಹಾಪುರುಷರಿಗೆ ಜನ್ಮ ನೀಡಿದ ಜಿಲ್ಲೆಯಾಗಿದೆ. ನಾಡಿನ ಕಲೆ, ಸಂಸ್ಕೃತಿ ಉಳಿಸಿ ಬೆಳೆಸಲು ಕರ್ನಾಟಕ ವೈಭವ ಸಹಕಾರಿಯಾಗಿದೆ ಎಂದರು.ಚಲನಚಿತ್ರ ನಿರ್ದೇಶಕ ಡಾ. ಹಾಸನ ರಘು, ಜನಪದ ಕಲಾವಿದ ಡಾ. ಕೆ.ಸಿ. ನಾಗರಜ್ಜಿ, ಕಸಾಪ ತಾಲೂಕು ಅಧ್ಯಕ್ಷ ಪ್ರಭಾಕರ ಶಿಗ್ಲಿ, ನಿತ್ಯಾನಂದ ಕುಂದಾಪುರ ಮತ್ತಿತರರಿದ್ದರು.