ಸಾರಾಂಶ
ಕನ್ನಡಪ್ರಭ ವಾರ್ತೆ, ತರೀಕೆರೆ
ಕರ್ನಾಟಕ ಏಕೀಕರಣದ ನೆನಪಿಗೆ ಮತ್ತು ಕರ್ನಾಟಕ ಎಂದು ಘೋಷಣೆ ಮಾಡಿದ ಐವತ್ತು ವರ್ಷದ ಸಂಭ್ರಮಾಚರಣೆ ಸಂದರ್ಭದಲ್ಲಿ ಏರ್ಪಡಿಸಿದ್ದ ಕರ್ನಾಟಕ ಭೂಪಟದ ರಂಗೋಲಿ ಬಿಡಿಸುವ ಸ್ಪರ್ಧೆ ಮತ್ತು ಜನಪದ ಗೀತೆ ಗಾಯನ ಸ್ಪರ್ಧೆ ಬಹಳ ಅರ್ಥಪೂರ್ಣವಾಗಿದೆ ಎಂದು ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷ ರವಿ ದಳವಾಯಿ ತಿಳಿಸಿದರು.ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು, ಜಿಲ್ಲಾ ಕನ್ನಡ ಜಾನಪದ ಪರಿಷತ್ತು ಚಿಕ್ಕಮಗಳೂರು ಹಾಗೂ ತರೀಕೆರೆ ತಾಲೂಕು ಅಡಳಿತ ಇವರ ಸಂಯುಕ್ತ ಆಶ್ರಯದಲ್ಲಿ ಕರ್ನಾಟಕ ಭೂಪಟದ ರಂಗೋಲಿ ಬಿಡಿಸುವ ಸ್ಪರ್ಧೆ ಮತ್ತು ಜನಪದ ಗೀತೆ ಗಾಯನ ಸ್ಪರ್ಧೆಯಲ್ಲಿ ಮಾತನಾಡಿ, ಸ್ಪರ್ಧೆಯಲ್ಲಿ ಭಾವಹಿಸಿದ ಎಲ್ಲರಿಗೂ ಕೃತಜ್ಞತೆ ಸಲ್ಲಿಸಿದರು.ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ಮಹಿಳಾ ಘಟಕದ ಅಧ್ಯಕ್ಷೆ ಸುನಿತಾ ಕಿರಣ್ ಕುಮಾರ್ ಮಾತನಾಡಿ ಕರ್ನಾಟಕ ಭೂಪಟದ ರಂಗೋಲಿ ಸ್ಪರ್ಧೆ ಮತ್ತು ಜನಪದ ಗೀತ ಗಾಯನ ಸ್ಪರ್ಧೆಗಳು ಉತ್ತಮ ಕಾರ್ಯಕ್ರಮ ಎಂದು ತಿಳಿಸಿದರು.
ಕನ್ನಡಶ್ರೀ ಬಿ.ಎಸ್.ಭಗವಾನ್ ಮಾತನಾಡಿ ನ.2 ರಂದು ಕನ್ನಡ ತೇರು ಪಟ್ಟಣಕ್ಕೆ ಆಗಮಿಸಲಿದ್ದು ಎಲ್ಲರೂ ಕಾರ್ಯಕ್ರಮದಲ್ಲಿ ಭಾಗವಹಿಸಬೇಕೆಂದು ಮನವಿ ಮಾಡಿದರು.ರಂಗೋಲಿ ಸ್ಪರ್ಧೆಯಲ್ಲಿ ತೀರ್ಪುಗಾರರಾಗಿ ಲತಾ ಗೋಪಾಲಕೃಷ್ಣ, ಉಮಾ ಪ್ರಕಾಶ್, ಜನಪದ ಗೀತ ಗಾಯನ ಸ್ಪರ್ಧೆ ಕಾರ್ಯಕ್ರಮ ದಲ್ಲಿ ತೀರ್ಪುಗಾರರಾಗಿ ಇಮ್ರಾನ್ ಅಹಮದ್ ಬೇಗ್, ವಿಜಯಪ್ರಕಾಶ್, ರೋಹಿಣಿ ನರಸಿಂಹಮೂರ್ತಿ ಭಾಗವಹಿಸಿದ್ದರು.
ಶಿಕ್ಷಕಿ ಮಮತಾ, ಜಿಲ್ಲಾ ಜಾನಪದ ಮಹಿಳಾ ಘಟಕದ ಅಧ್ಯಕ್ಷೆ ಎಂ.ಎಸ್.ವಿಶಾಲಾಕ್ಷಮ್ಮ, ಲೇಖಕ ತ.ಮ.ದೇವಾನಂದ್, ನಗರ ಘಟಕ ಅಧ್ಯಕ್ಷ ಟಿ.ಸಿ.ದರ್ಶನ್, ಸಯದ್ ಮುಹೀಬುಲ್ಲ ಮತ್ತಿತರರು ಭಾಗವಹಿಸಿದ್ದರು.28ಕೆಟಿಆರ್.ಕೆ.02ಃತರೀಕೆರೆಯಲ್ಲಿ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು, ಚಿಕ್ಕಮಗಳೂರು ಜಿಲ್ಲಾ ಕನ್ನಡ ಜಾನಪದ ಪರಿಷತ್ತು ಹಾಗೂ ತರೀಕೆರೆ ತಾಲೂಕು ಅಡಳಿತ ಇವರ ಸಂಯುಕ್ತ ಆಶ್ರಯದಲ್ಲಿ ಕರ್ನಾಟಕ ಭೂಪಟದ ರಂಗೋಲಿ ಬಿಡಿಸುವ ಸ್ಪರ್ಧೆ ಮತ್ತು ಜನಪದ ಗೀತೆ ಗಾಯನ ಸ್ಪರ್ಧೆ ನಡೆಯಿತು.