ಕಾಂಗ್ರೆಸ್ಸಿನಿಂದ ಒಕ್ಕಲಿಗರನ್ನು ಮುಗಿಸಲು ಯೋಜನೆ: ಅಶೋಕ್

| Published : May 20 2024, 01:34 AM IST / Updated: May 20 2024, 12:59 PM IST

R Ashok
ಕಾಂಗ್ರೆಸ್ಸಿನಿಂದ ಒಕ್ಕಲಿಗರನ್ನು ಮುಗಿಸಲು ಯೋಜನೆ: ಅಶೋಕ್
Share this Article
  • FB
  • TW
  • Linkdin
  • Email

ಸಾರಾಂಶ

ಕಾಂಗ್ರೆಸ್ ಉಸ್ತುವಾರಿ ರಣದೀಪ್‌ ಸುರ್ಜೇವಾಲ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌, ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿ ಈಗಾಗಲೇ ದಲಿತ ನಾಯಕರನ್ನು ಮುಗಿಸಿದ್ದಾರೆ. ಅದೇ ರೀತಿ ಒಕ್ಕಲಿಗರನ್ನು ಮುಗಿಸಲು ಯೋಜನೆ ರೂಪಿಸಿದ್ದಾರೆ’ ಎಂದು ಪ್ರತಿಪಕ್ಷದ ನಾಯಕ ಆರ್‌.ಅಶೋಕ್ ಗಂಭೀರ ಆಪಾದನೆ ಮಾಡಿದ್ದಾರೆ.

 ಬೆಂಗಳೂರು :  ‘ಕಾಂಗ್ರೆಸ್ ಉಸ್ತುವಾರಿ ರಣದೀಪ್‌ ಸುರ್ಜೇವಾಲ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌, ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿ ಈಗಾಗಲೇ ದಲಿತ ನಾಯಕರನ್ನು ಮುಗಿಸಿದ್ದಾರೆ. ಅದೇ ರೀತಿ ಒಕ್ಕಲಿಗರನ್ನು ಮುಗಿಸಲು ಯೋಜನೆ ರೂಪಿಸಿದ್ದಾರೆ’ ಎಂದು ಪ್ರತಿಪಕ್ಷದ ನಾಯಕ ಆರ್‌.ಅಶೋಕ್ ಗಂಭೀರ ಆಪಾದನೆ ಮಾಡಿದ್ದಾರೆ.

ಭಾನುವಾರ ಜೆಡಿಎಸ್ ವರಿಷ್ಠ ಎಚ್‌.ಡಿ.ದೇವೇಗೌಡ ಅವರ ಭೇಟಿ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಂಸದ ಪ್ರಜ್ವಲ್ ರೇವಣ್ಣ ಪ್ರಕರಣಕ್ಕೆ ಸಂಬಂಧಿಸಿದಂತೆ ದೇವರಾಜೇಗೌಡ ಸ್ವತಃ ಹೇಳಿಕೆ ನೀಡಿ ಡಿ.ಕೆ.ಶಿವಕುಮಾರ್‌ ಅವರ ಧ್ವನಿಮುದ್ರಣ ಬಿಡುಗಡೆ ಮಾಡಿದ್ದಾರೆ. 

ನಿಜ ಇರುವುದಕ್ಕೆ ದಾಖಲೆ ಬಿಡುಗಡೆ ಮಾಡಿದ್ದು, ಅದಕ್ಕಾಗಿಯೇ ಅವರ ಬಂಧನವಾಗಿದೆ. ಲೋಕಸಭೆ ಚುನಾವಣೆಯ ಸಮಯದಲ್ಲಿ ಎಚ್ಚರವಾಗಿರಬೇಕೆಂದು ಹೀಗೆ ಮಾಡಿದ್ದಾರೆ. ಮಾಧ್ಯಮಗಳಲ್ಲಿ ಪ್ರಸಾರವಾಗುವುದನ್ನೂ ತಡೆಯುವ ಉದ್ದೇಶ ಶಿವಕುಮಾರ್‌ ಅವರಿಗಿದೆ ಎಂದರು.

ಪ್ರಜ್ವಲ್‌ ಪ್ರಕರಣವನ್ನು ಸಿಬಿಐಗೆ ವಹಿಸಬೇಕಿದೆ. ಆದರೆ ಸಿಬಿಐ ಬಳಿ ಹೋದರೆ ಸರ್ಕಾರದಲ್ಲಿ ಇರುವವರೇ ಕಂಬಿ ಎಣಿಸಬೇಕಾಗುತ್ತದೆ. ಇಡೀ ಗೃಹ ಇಲಾಖೆಯನ್ನು ಬೇರೆ ಯಾರೋ ಹೈಜಾಕ್‌ ಮಾಡಿ ನಡೆಸುತ್ತಿದ್ದಾರೆ. ಮಾಜಿ ಸಚಿವ ಎಚ್‌.ಡಿ.ರೇವಣ್ಣ ಅವರನ್ನು ಬಂಧಿಸಿದಂತೆ ಚಾಲಕನನ್ನು ಬಂಧಿಸಿಲ್ಲ. ಪೊಲೀಸರು ಕಾಂಗ್ರೆಸ್‌ ನಾಯಕರು ಹೇಳಿದಂತೆ ಕೇಳುತ್ತಾರೆ ಎಂದರು.

ಪ್ರಜ್ವಲ್‌ ವಿರುದ್ಧ ಸರ್ಕಾರ ಕ್ರಮ ಕೈಗೊಳ್ಳಲಿ. ಆದರೆ ವೀಡಿಯೋ ಹಂಚಿದವರ ವಿರುದ್ಧ ಕ್ರಮ ವಹಿಸಿಲ್ಲ. ಹೀಗೆ ಕಾಂಗ್ರೆಸ್‌ ಕಣ್ಣಾಮುಚ್ಚಾಲೆ ಆಟವಾಡುತ್ತಿದೆ. ಪ್ರಕರಣವನ್ನು ಮುಚ್ಚಿಹಾಕಲು ಎಸ್‌ಐಟಿ ಸಿದ್ಧತೆ ಮಾಡುತ್ತಿದೆ ಎಂದರು.