ಲೋಕಸಭಾ ಚುನಾವಣೆ- ಡಿಜಿಪಿಯಿಂದ ಪರಾಮರ್ಶನ ಸಭೆ

| Published : Mar 31 2024, 02:02 AM IST

ಸಾರಾಂಶ

ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ನಗರ ಸೇರಿದಂತೆ ದಕ್ಷಿಣ ವಲಯ ವ್ಯಾಪ್ತಿಯ ಜಿಲ್ಲೆಗಳಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಕ್ರಮ ವಹಿಸುವಂತೆ ಅವರು ನಿರ್ದೇಶಿಸಿದರು.

ಕನ್ನಡಪ್ರಭ ವಾರ್ತೆ ಮೈಸೂರು

ಲೋಕಸಭಾ ಚುನಾವಣೆ ಹಿನ್ನಲೆಯಲ್ಲಿ ಕರ್ನಾಟಕ ಪೊಲೀಸ್ ಇಲಾಖೆಯ ಡಿಜಿಪಿ ಡಾ. ಅಲೋಕ್ ಮೋಹನ್ ಅವರು ಮೈಸೂರು ನಗರದ ಪೊಲೀಸ್ ಆಯುಕ್ತರ ಕಚೇರಿಯಲ್ಲಿ ಶನಿವಾರ ದಕ್ಷಿಣ ವಲಯ ಮತ್ತು ಮೈಸೂರು ನಗರ ಪೊಲೀಸ್ ಘಟಕಗಳ ಪರಾಮರ್ಶನ ಸಭೆಯನ್ನು ನಡೆಸಿದರು.

ಈ ಸಭೆಯಲ್ಲಿ ಮೈಸೂರು ನಗರ ಸೇರಿದಂತೆ ದಕ್ಷಿಣ ವಲಯ ವಾಪ್ತಿಯ ಜಿಲ್ಲೆಗಳಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಸಂಬಂಧ ಕೈಗೊಂಡಿರುವ ಮುಂಜಾಗ್ರತಾ ಕ್ರಮಗಳ ಬಗ್ಗೆ ಪೊಲೀಸ್ ಅಧಿಕಾರಿಗಳಿಂದ ಮಾಹಿತಿ ಪಡೆದ ಡಿಜಿಪಿ ಅವರು, ಅಗತ್ಯ ಮುಂಜಾಗ್ರತಾ ಕ್ರಮ ಕೈಗೊಳ್ಳಬೇಕು ಎಂದು ಸೂಚಿಸಿದರು.

ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ನಗರ ಸೇರಿದಂತೆ ದಕ್ಷಿಣ ವಲಯ ವ್ಯಾಪ್ತಿಯ ಜಿಲ್ಲೆಗಳಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಕ್ರಮ ವಹಿಸುವಂತೆ ಅವರು ನಿರ್ದೇಶಿಸಿದರು.

ದಕ್ಷಿಣ ವಲಯದ ಡಿಐಜಿ ಅಮಿತ್ ಸಿಂಗ್, ನಗರ ಪೊಲೀಸ್ ಆಯುಕ್ತ ರಮೇಶ್ ಬಾನೋತ್, ಡಿಸಿಪಿಗಳಾದ ಎಂ. ಮುತ್ತುರಾಜು, ಎಸ್. ಜಾಹ್ನವಿ, ಮೈಸೂರು ಎಸ್ಪಿ ಸೀಮಾ ಲಾಟ್ಕರ್, ಹೆಚ್ಚುವರಿ ಎಸ್ಪಿ ಡಾ.ಬಿ.ಎನ್. ನಂದಿನಿ ಹಾಗೂ ವಿವಿಧ ಜಿಲ್ಲೆಯ ಎಸ್ಪಿಗಳು ಮತ್ತು ಎಎಸ್ಪಿಗಳು ಇದ್ದರು.