ಬಂಟ್ವಾಳ: ತಾಲೂಕಿನ ಕನ್ಯಾನದ ಕರ್ನಾಟಕ ಪಬ್ಲಿಕ್ ಸ್ಕೂಲ್‌ನ ಪ್ರಾಥಮಿಕ ವಿಭಾಗದಲ್ಲಿ ಶನಿವಾರ 80ನೇ ಸ್ವಾತಂತ್ರ್ಯ ಮಹೋತ್ಸವವನ್ನು ಸಂಭ್ರಮದಿಂದ ಆಚರಿಸಲಾಯಿತು.
ಮುಖ್ಯ ಶಿಕ್ಷಕಿ ಕಲ್ಯಾಣಿ ಜಿ. ಧ್ವಜಾರೋಹಣ ನೆರವೇರಿಸಿದರು. ವಿದ್ಯಾರ್ಥಿಗಳಿಂದ ಆಕರ್ಷಕ ಪುರಮೆರವಣಿಗೆ ನಡೆಯಿತು.ಬಳಿಕ ನಡೆದ ಸಭಾ ಕಾರ್ಯಕ್ರಮದಲ್ಲಿ ಎಸ್‌ಡಿಎಂಸಿ ಕಾರ್ಯಾಧ್ಯಕ್ಷ ನವೀನ್ ಕುಮಾರ್ ಅಧ್ಯಕ್ಷತೆ ವಹಿಸಿದ್ದರು. ಕಾರ್ಯಕ್ರಮದಲ್ಲಿ ಎಸ್‌ಡಿಎಂಸಿ ಸದಸ್ಯರಾದ ಮಿಸ್ರಿಯ, ಮುಖ್ಯ ಶಿಕ್ಷಕಿ ಕಲ್ಯಾಣಿ ಜಿ., ಸಿ.ಆರ್.ಪಿ. ಚಂದ್ರಶೇಖರ್ ಹಾಗೂ ಹಿರಿಯ ಸಹ ಶಿಕ್ಷಕಿ ಶಶಿಕಲಾ ಎನ್. ಉಪಸ್ಥಿತರಿದ್ದರು. ಸಹಲ ಮತ್ತು ಮುರ್ಸಿದ ನಿರೂಪಿಸಿದರು. ವಿದ್ಯಾರ್ಥಿ ಯಮನಪ್ಪ ಸ್ವಾಗತಿಸಿ, ಹಫೀಫ ವಂದಿಸಿದರು.
ಬಳಿಕ ವಿದ್ಯಾರ್ಥಿಗಳಿಂದ ಭಾಷಣ, ನೃತ್ಯ ಹಾಗೂ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಿದವು. ಕಾರ್ಯಕ್ರಮದಲ್ಲಿ ಶಾಲೆಯ ಪೋಷಕರು ಮತ್ತು ವಿದ್ಯಾಭಿಮಾನಿಗಳು ಭಾಗವಹಿಸಿದ್ದರು.