ಸಾರಾಂಶ
ಕರ್ನಾಟಕ ರಕ್ಷಣಾ ವೇದಿಕೆ ಜಿಲ್ಲಾ ಸಮಿತಿ ಸಭೆ ಜಿಲ್ಲಾಧ್ಯಕ್ಷ ಕೆ.ಎನ್. ದೀಪಕ್ ಹಾಗೂ ಗೌರವಾಧ್ಯಕ್ಷ ಬಿ.ಎ. ನಾಗೇಗೌಡ ನೇತೃತ್ವದಲ್ಲಿ ಸೋಮವಾರಪೇಟೆ ಪತ್ರಿಕಾಭವನದಲ್ಲಿ ಸರ್ವ ಸದಸ್ಯರ ಸಭೆ ಇತ್ತೀಚೆಗೆ ನಡೆಯಿತು.
ಕನ್ನಡಪ್ರಭ ವಾರ್ತೆ ಸೋಮವಾರಪೇಟೆ
ಕರ್ನಾಟಕ ರಕ್ಷಣಾ ವೇದಿಕೆ ಜಿಲ್ಲಾ ಸಮಿತಿ ಸಭೆ ಜಿಲ್ಲಾಧ್ಯಕ್ಷ ಕೆ.ಎನ್. ದೀಪಕ್ ಹಾಗೂ ಗೌರವಾಧ್ಯಕ್ಷ ಬಿ.ಎ. ನಾಗೇಗೌಡ ನೇತೃತ್ವದಲ್ಲಿ ಇಲ್ಲಿನ ಪತ್ರಿಕಾಭವನದಲ್ಲಿ ಸರ್ವ ಸದಸ್ಯರ ಸಭೆ ಇತ್ತೀಚೆಗೆ ನಡೆಯಿತು.ಜಿಲ್ಲಾ ಗೌರವಾಧ್ಯಕ್ಷ ನಾಗೇಗೌಡ ಮಾತನಾಡಿ, ರಾಜ್ಯದ ಟಿ.ಎ. ನಾರಾಯಣ ಗೌಡರ ನೇತೃತ್ವದ ಕರವೇ ರಾಜ್ಯದಲ್ಲಿ ಸಾವಿರಾರು ಹೋರಾಟಗಳನ್ನು ಮಾಡಿಕೊಂಡು ಬಂದಿದ್ದು ಭಾಷೆ ಮತ್ತು ನೆಲದ ಉಳಿವಿಗಾಗಿ ನಾವು ಎಂತಹ ತ್ಯಾಗಕ್ಕೂ ಸಿದ್ದರಿರುವಂತೆ ಕಿವಿ ಮಾತು ಹೇಳಿದರು.
ಜಿಲ್ಲಾ ಅಧ್ಯಕ್ಷ ಕೆ.ಎನ್. ದೀಪಕ್ ಮಾತನಾಡಿ, ಪದಾಧಿಕಾರಿಗಳು ತಮ್ಮ ಜವಾಬ್ದಾರಿ ಅರಿತು ಕನ್ನಡದ ಉಳಿವು ಭ್ರಷ್ಟಾಚಾರದ ವಿರುದ್ಧ ಹೋರಾಡುವಂತೆ ಕರೆ ನೀಡಿದರು.ಸಭೆಯಲ್ಲಿ ಸಮಿತಿಗೆ ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು. ಮಹಿಳಾ ಘಟಕದ ಜಿಲ್ಲಾ ಉಪಾಧ್ಯಕ್ಷರಾಗಿ ಇಂಚರಾ ಗೌಡ, ಕಾರ್ಯದರ್ಶಿಯಾಗಿ ಶೃತಿ ಗಿರೀಶ್, ಜಿಲ್ಲಾ ಸಂಘಟನಾ ಕಾರ್ಯದರ್ಶಿಯಾಗಿ ಶಶಿಕಲಾ, ಜಿಲ್ಲಾ ಸಂಚಾಲಕಿಯಾಗಿ ರೇಣುಕಾ ಕೃಷ್ಣ ಜಿಲ್ಲಾ ಸಹಕಾರ್ಯದರ್ಶಿಯಾಗಿ ಭಾಗ್ಯ ಅವರನ್ನು ಆಯ್ಕೆ ಮಾಡಲಾಯಿತು.
ಯುವ ಘಟಕದ ತಾಲ್ಲೂಕು ಅಧ್ಯಕ್ಷರಾಗಿ ವಸಂತ್, ಸಂಘಟನಾ ಕಾರ್ಯದರ್ಶಿಯಾಗಿ ವೆಂಕಿ ಹಾನಗಲ್ ಆಯ್ಕೆಯಾದರು.ಮಹಿಳಾ ಜಿಲ್ಲಾ ಅಧ್ಯಕ್ಷೆ ಸಂಧ್ಯಾ ಗಣೇಶ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮಂಜುನಾಥ ಯಡೂರು, ಜಿಲ್ಲಾ ಉಪಾಧ್ಯಕ್ಷ ಚಂದ್ರು, ಕುಶಾಲನಗರ ತಾಲೂಕು ಅಧ್ಯಕ್ಷ ಅಣ್ಣಯ್ಯ, ನಗರಾಧ್ಯಕ್ಷ ಮಂಜುನಾಥ್ ಇದ್ದರು.
ಹತ್ತಾರು ವರ್ಷಗಳಿಂದ ಕನ್ನಡ ಸೇವೆ ಸಲ್ಲಿಸುತ್ತಿರುವ ಬಿ.ಎ. ನಾಗೇಗೌಡ, ರವೀಶ್ ಕಲ್ಕಚಿದೂರು, ಅಬ್ಬಾಸ್ ಬಜೆಗುಂಡಿ, ವೇದಕುಮಾರ್ ಕೊಡ್ಲಿಪೇಟೆ ಅವರನ್ನು ಗೌರವಿಸಲಾಯಿತು.