ಸಾರಾಂಶ
ಗಣಪತಿ ಸಚ್ಚಿದಾನಂದ ಆಶ್ರಮದಲ್ಲಿ ಅ. 8 ರಿಂದ 12ರವರೆಗೆ ನಡೆಯುವ ರಾಷ್ಟ್ರಮಟ್ಟದ ಸ್ಪರ್ಧೆಗೆ ಆಯ್ಕೆ
ಕನ್ನಡಪ್ರಭ ವಾರ್ತೆ ಮೈಸೂರುಶಿವಮೊಗ್ಗ ಜಿಲ್ಲೆಯ ಸಾಗರದಲ್ಲಿ ಕರ್ನಾಟಕ ಸ್ಟೇಟ್ ಅಮೆಚೂರ್ ಯೋಗ ಸ್ಪೋರ್ಟ್ಸ್ ಅಸೋಸಿಯೇಷನ್ ವತಿಯಿಂದ ನಡೆದ ರಾಜ್ಯಮಟ್ಟದ ಯೋಗಾಸನ ಸ್ಪರ್ಧೆಯಲ್ಲಿ 30 ರಿಂದ 35 ವಯೋಮಿತಿಯ ಪುರುಷರ ವಿಭಾಗದ ಸ್ಪರ್ಧೆಯಲ್ಲಿ ಭಾಗವಹಿಸಿದ್ದ ಸಂತೋಷ್ ಸೂರ್ಯ ಅವರು ಪ್ರಥಮ ಸ್ಥಾನ ಗಳಿಸಿ ಚಿನ್ನದ ಪದಕ ಪಡೆದು, ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ.ಯೋಗ ಫೆಡರೇಷನ್ ಆಫ್ ಇಂಡಿಯಾ ವತಿಯಿಂದ ನಗರದ ಗಣಪತಿ ಸಚ್ಚಿದಾನಂದ ಆಶ್ರಮದಲ್ಲಿ ಅ. 8 ರಿಂದ 12ರವರೆಗೆ ನಡೆಯುವ ರಾಷ್ಟ್ರಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿ, ಕರ್ನಾಟಕ ರಾಜ್ಯವನ್ನು ಪ್ರತಿನಿಧಿಸಲಿದ್ದಾರೆ. ಇದು ಇವರ ಎರಡನೇ ಬಾರಿಯ ಸಾಧನೆಯಾಗಿದೆ.ಇವರು ಜಿಎಸ್‌ಎಸ್, ವಿವೇಕಾನಂದ ಯೋಗ ಶಿಕ್ಷಣ ಸಂಸ್ಥೆಯ ವಿದ್ಯಾರ್ಥಿಯಾಗಿದ್ದು, ಮೂಲತಃ ಚಾಮರಾಜನಗರ ಜಿಲ್ಲೆ ಕೊಳ್ಳೇಗಾಲ ತಾಲೂಕು ಕುಂತೂರು ನಿವಾಸಿಯಾಗಿದ್ದಾರೆ.