ಸಾರಾಂಶ
ಕನ್ನಡಪ್ರಭ ವಾರ್ತೆ ನಂಜನಗೂಡು
ಕರ್ನಾಟಕ ರಾಜ್ಯ ಹಲವಾರು ಅನ್ಯ ಭಾಷಿಕರಿಗೆ ನೆಲೆ ಒದಗಿಸಿದ್ದು, ಕನ್ನಡ ಭಾಷೆಯನ್ನು ಉಳಿಸಿ ಬೆಳೆಸುವ ಮಹತ್ತರವಾದ ದೊಡ್ಡ ಜವಾಬ್ದಾರಿ ನಮ್ಮ ಮೇಲಿದೆ ಎಂದು ಶಾಸಕ ದರ್ಶನ್ ಧ್ರುವನಾರಾಯಣ ಹೇಳಿದರು.ತಾಲೂಕು ಕಚೇರಿಯ ಆವರಣದಲ್ಲಿ ರಾಷ್ಟ್ರೀಯ ಹಬ್ಬಗಳ ಆಚರಣೆ ಸಮಿತಿಯ ವತಿಯಿಂದ ಏರ್ಪಡಿಸಿದ್ದ 70ನೇ ವರ್ಷದ ಕನ್ನಡ ರಾಜ್ಯೋತ್ಸವದಲ್ಲಿ ಅವರು ಮಾತನಾಡಿದರು.
ಕಳೆದ 10 ವರ್ಷಗಳ ಹಿಂದೆ ಕರ್ನಾಟಕ ರಾಜ್ಯದಲ್ಲಿ ಬರೀ ಕನ್ನಡ ಭಾಷೆ ಮಾತ್ರ ಕೇಳಿ ಬರುತ್ತಿತ್ತು, ಆದರೆ ಇತ್ತೀಚಿನ ದಿನಗಳಲ್ಲಿ ಮೈಸೂರಿನಲ್ಲೂ ಸಹ ಅನ್ಯ ಭಾಷೆಗಳನ್ನು ಹಾಡುವ ಜನರು ಸಾಕಷ್ಟಿದ್ದಾರೆ. ನಮ್ಮ ರಾಜ್ಯ ಹಲವಾರು ಭಾಷೆಗಳಿಗೆ ನೆಲೆ ಒದಗಿಸಿದೆ, ಆದರೂ ಸಹ ನಾವು ಸಂವಿಧಾನದ ಮೂಲಕ ಏಕತೆಯನ್ನು ಕಾಪಾಡಿಕೊಂಡು ಹೋಗುತ್ತಿದ್ದೇವೆ. ರಾಜ್ಯದಲ್ಲಿ ಬೆಳಗಾವಿ, ಕನ್ನಡ, ಮಂಗಳೂರು ಕನ್ನಡ, ಮಲೆನಾಡು ಕನ್ನಡದಂತಹ ಪ್ರಾಂತ್ಯ ಭಾಷೆಗಳ ನಡುವೆಯೂ ಕೂಡ ಕನ್ನಡ ಭಾಷೆ ನಮ್ಮೆಲ್ಲರನ್ನು ಒಗ್ಗೂಡಿಸಿದೆ ಎಂದರು.ಮುಖ್ಯ ಭಾಷಣಕಾರರಾಗಿ ಡಾ.ಸಿ. ನಾಗಣ್ಣ ಮಾತನಾಡಿ, ಕರ್ನಾಟಕದ ಸಂಸ್ಕೃತಿ, ಕಲೆ, ಸಾಹಿತ್ಯ ಸಂಗೀತಗಳು, ಭಾರತೀಯ ಸಾಂಸ್ಕೃತಿಕ ಶ್ರೀಮಂತಿಕೆಗೆ ನನ್ನದೇ ಆದ ಕೊಡುಗೆಯನ್ನು ನೀಡಿವೆ ಎಂದರು.
ಕಾರ್ಯಕ್ರಮದಲ್ಲಿ ವಿವಿಧ ಕ್ಷೇತ್ರದಲ್ಲಿ ಸಾಧನೆಗೈದ ಸಾಧಕರನ್ನು, ಪ್ರತಿಭಾನ್ವಿತ ವಿದ್ಯಾರ್ಥಿಗಳನ್ನು, ಸನ್ಮಾನಿಸಲಾಯಿತು, ವೈದ್ಯ ಸುಂದರೇಶ್ ಅವರಿಗೆ ತಾಲೂಕು ಕನ್ನಡ ರಾಜ್ಯೋತ್ಸವ ಪ್ರಶಸ್ತಿ ವಿತರಿಸಲಾಯಿತು.ಸುಮಾರು ನೂರು ಜನ ಶಾಲಾ ಮಕ್ಕಳು ನಾಡಗೀತೆಯನ್ನು ಹಾಡಿದ್ದು ಪ್ರೇಕ್ಷಕರ ಮನಸೂರೆಗೊಂಡಿತು,
ಮಾಜಿ ಶಾಸಕ ಕಳಲೆ ಕೇಶವಮೂರ್ತಿ, ನಗರಸಭಾ ಅಧ್ಯಕ್ಷ ಶ್ರೀಕಂಠಸ್ವಾಮಿ, ಉಪಾಧ್ಯಕ್ಷ ರಿಯಾನ ಬಾನು, ತಹಸೀಲ್ದಾರ್ ಶಿವಕುಮಾರ್ ಕಾಸ್ನೂರು, ನಗರಸಭಾ ಸದಸ್ಯರಾದ ಗಾಯತ್ರಿ, ಶ್ವೇತಲಕ್ಷ್ಮಿ, ಎಸ್.ಪಿ.ಮಹೇಶ್, ಗಂಗಾಧರ್, ಮಹದೇವಪ್ರಸಾದ್, ಸಿದ್ದಿಕ್, ಕೆ.ಎಂ.ಬಸವರಾಜು, ರವಿ, ರಮೇಶ್, ಎನ್.ಎಸ್.ಯೋಗಿಶ್, ತಾಪಂ ಮಾಜಿ ಅಧ್ಯಕ್ಷ ನಾಗೇಶ್ ರಾಜ್, ನಗರಸಭಾ ಮಾಜಿ ಉಪಾಧ್ಯಕ್ಷ ದೊರೆಸ್ವಾಮಿ, ಅಕ್ರಮ ಸಕ್ರಮ ಸಮಿತಿ ಸದಸ್ಯ ಜಯರಾಮ, ಮುಖಂಡರಾದ ಅಬ್ದುಲ್ ಖಾದರ್, ರಾಜೇಶ್, ಎನ್.ಎಸ್.ಮಾದಪ್ಪ, ಶ್ರೀಧರ್, ರಂಗಸ್ವಾಮಿ, ಗ್ರಾಪಂ ಸದಸ್ಯ ಮುದ್ದುಮಾದಶೆಟ್ಟಿ, ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಲತಾ ಮುದ್ದುಮೋಹನ್, ಡಿಎಸ್ಎಸ್ ಸಂಚಾಲಕರಾದ ಸುರೇಶ್, ಯುವ ಕಾಂಗ್ರೆಸ್ ಅಧ್ಯಕ್ಷ ವಿಜಯ್ ಕುಮಾರ್, ತಾಪಂ ಇಓ ಜೆರಾಲ್ಡ್ ರಾಜೇಶ್, ಡಿವೈಎಸ್ಪಿ ರಘು, ಆರ್.ಐ. ಹರೀಶ್, ಅಧಿಕಾರಿಗಳು ಭಾಗವಹಿಸಿದ್ದರು.ಎಚ್.ಡಿ. ಕೋಟೆಯಲ್ಲಿ ಕನ್ನಡ ರಾಜ್ಯೋತ್ಸವ ಸಂಭ್ರಮ
ಕನ್ನಡಪ್ರಭ ವಾರ್ತೆ ಎಚ್.ಡಿ. ಕೋಟೆರಾಷ್ಟ್ರೀಯ ಹಬ್ಬಗಳ ಆಚರಣೆ ಸಮಿತಿಯಿಂದ ಪಟ್ಟಣದಲ್ಲಿ ಶನಿವಾರ 70ನೇ ಕನ್ನಡ ರಾಜ್ಯೋತ್ಸವ ದಿನವನ್ನು ಅತ್ಯಂತ ಸಡಗರ ಸಂಭ್ರಮದಿಂದ ಆಚರಿಸಲಾಯಿತು.
ಪಟ್ಟಣದ ಒಂದನೇ ಮುಖ್ಯರಸ್ತೆಯಲ್ಲಿ ಇರುವ ಶ್ರೀ ಲಕ್ಷ್ಮಿ ವರದರಾಜ ಸ್ವಾಮಿ ದೇವಾಲಯದ ಮುಂಭಾಗದಲ್ಲಿ ಬೆಳ್ಳಿರಥದಲ್ಲಿ ತಾಯಿ ಭುವನೇಶ್ವರಿ ಭಾವಚಿತ್ರಕ್ಕೆ ರಾಷ್ಟ್ರೀಯ ಹಬ್ಬಗಳ ಆಚರಣ ಸಮಿತಿಯ ಅಧ್ಯಕ್ಷ ಶ್ರೀನಿವಾಸ್ ಹಾಗೂ ಅಧಿಕಾರಿ ವರ್ಗದವರು ಪುಷ್ಪಾರ್ಚನೆ ಮಾಡುವುದರ ಮೂಲಕ ಮೆರವಣಿಗೆಗೆ ಚಾಲನೆ ನೀಡಿದರು.ಮೆರವಣಿಗೆಯ ಪಟ್ಟಣದ ಒಂದನೇ ಮುಖ್ಯರಸ್ತೆಯಲ್ಲಿ ಸಾಗಿ ಬಾಪೂಜಿ ರಕ್ತದಲ್ಲಿ ಇರುವ ಹಳೆಯ ಆಸ್ಪತ್ರೆ ಕಾಲೋನಿವೇಶನದಲ್ಲಿ ಸಮಾಪ್ತಿಗೊಂಡಿತು. ಮೆರವಣಿಗೆಯಲ್ಲಿ ವೀರಗಾಸೆ ಡೊಳ್ಳು ಕುಣಿತ ಶಾಲಾ ಮಕ್ಕಳ ಚಿತ್ರಗಳು ಪಾಲ್ಗೊಂಡಿದ್ದರು.
ಶಾಸಕ ಅನಿಲ್ ಚಿಕ್ಕಮಾದು ರಾಷ್ಟ್ರಧ್ವಜ ಹಾಗೂ ಕನ್ನಡ ಧ್ವಜಾರೋಹಣ ನೆರವೇರಿಸಿದ ನಂತರ ಮಾತನಾಡಿ, ಈ ಬಾರಿ ಕನ್ನಡ ರಾಜ್ಯೋತ್ಸವವನ್ನು ಪಟ್ಟಣದ ಹೃದಯ ಭಾಗದಲ್ಲಿರುವ ಹಳೆಯ ಸಾರ್ವಜನಿಕ ಆಸ್ಪತ್ರೆ ಆವರಣದಲ್ಲಿ ಆಚರಿಸಲಾಗುತ್ತಿದ್ದು, ಸಾರ್ವಜನಿಕರು ಭಾಗವಹಿಸಿರುವುದು ಸಂತೋಷವಾಗಿದೆ ಎಂದರು.ಕಳೆದ 15 ದಿನಗಳ ಅವಧಿಯಲ್ಲಿ ತಾಲೂಕಿನಲ್ಲಿ ಹುಲಿ ದಾಳಿ ನಡೆಸಿದ್ದು, ಇಬ್ಬರು ಸ್ಥಳದಲ್ಲಿ ಮೃತಪಟ್ಟಿದ್ದರೆ, ಮತ್ತೊಬ್ಬರು ಮೈಸೂರಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇಲಾಖೆಯ ಹಿರಿಯ ಅಧಿಕಾರಿಗಳು ಸ್ಥಳದಲ್ಲಿ ಬೀಡುಬಿಟ್ಟಿದ್ದಾರೆ ಎಂದರು.
ತಾಲೂಕು ರಾಜ್ಯದ ಗಡಿ ತಾಲೂಕು ಆಗಿದ್ದು, ಗಡಿ ಭಾಗದಲ್ಲಿ ಎಲ್ಲ ಕಡೆಗಳಲ್ಲಿ ಕನ್ನಡದ ನಾಮಫಲಕಗಳು ಅಳವಡಿಸುವಂತೆ, ಇದರ ಬಗ್ಗೆ ಕ್ರಮ ವಹಿಸುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ. ತಾಲೂಕಿನಲ್ಲಿ ಅಧಿಕ ಪ್ರಮಾಣದಲ್ಲಿ ಮಳೆಯಾಗಿದ್ದು, ರಸ್ತೆಯ ಎರಡು ಕಡೆಗಳಲ್ಲಿ ಗಿಡಗಳು ಬೆಳೆದಿದ್ದು, ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳು ಗಿಡಗಳನ್ನು ತೆರವು ಕಾರ್ಯ ಕೈಗೊಳ್ಳಬೇಕೆಂದು ಅವರ ಸೂಚಿಸಿದರು.ಪುರಸಭೆಯ ಅಧ್ಯಕೆ ಎಂ. ಶಿವಮ್ಮ, ಕೃಷ್ಣ, ಉಪಾಧ್ಯಕ್ಷ ಎಚ್.ಎ. ಆಸಿಫ್ ಇಕ್ಬಾಲ್, ಸ್ಥಾಯಿ ಸಮಿತಿ ಅಧ್ಯಕ್ಷ ಮಧು, ಸರೋಜಮ್ಮ, ಸಾಹೇಬಾನು ಆನ್ಸರ್, ಎಚ್.ಸಿ. ನರಸಿಂಹಮೂರ್ತಿ, ನಾಗಮ್ಮ, ಅನಿತಾ, ನಿಂಗನಾಯಕ, ಗೀತಾ ಗಿರಿಗೌಡ, ದಿನೇಶ್, ದರ್ಶಿನಿ, ಶಾಂತಮ್ಮ, ಗೋವಿಂದರಾಜ್, ಪ್ರೇಮ್ ಸಾಗರ್, ಕಾರ್ಯನಿರ್ವಾಹಕ ಅಧಿಕಾರಿ ಧರಣೇಶ್, ಕ್ಷೇತ್ರ ಶಿಕ್ಷಣಾಧಿಕಾರಿ ರಾಜು ಇದ್ದರು.
;Resize=(128,128))
;Resize=(128,128))