ಕರ್ನಾಟಕದ ಗ್ಯಾರಂಟಿ ಯೋಜನೆ ಬೇರೆ ರಾಜ್ಯಗಳಿಂದ ಅನುಕರಣೆ : ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌

| Published : Dec 01 2024, 01:35 AM IST / Updated: Dec 01 2024, 12:43 PM IST

ಸಾರಾಂಶ

ಉಡುಪಿ ತಾಲೂಕು ಪಂಚಾಯಿತಿಯಲ್ಲಿ ತಾಲೂಕು ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಕಚೇರಿಯನ್ನು ಉದ್ಘಾಟಿಸಿ ಮಾತನಾಡಿದರು. ಭಾರತ ದೇಶದ ಇತಿಹಾಸದಲ್ಲಿ ಇಂಥ ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದ ಹೆಮ್ಮೆ ನಮ್ಮ ಸರ್ಕಾರದ್ದು ಎಂದರು.

  ಉಡುಪಿ : ಕರ್ನಾಟಕದಲ್ಲಿ ಜಾರಿಗೆ ತರಲಾಗಿರುವ ಪಂಚ ಗ್ಯಾರಂಟಿ ಯೋಜನೆಗಳನ್ನು ಬೇರೆ ರಾಜ್ಯಗಳು ಕೂಡ ಅನುಸರಿಸುತ್ತಿವೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ಹೇಳಿದ್ದಾರೆ. 

ಅವರು ಶನಿವಾರ ಉಡುಪಿ ತಾಲೂಕು ಪಂಚಾಯಿತಿಯಲ್ಲಿ ತಾಲೂಕು ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಕಚೇರಿಯನ್ನು ಉದ್ಘಾಟಿಸಿ ಮಾತನಾಡಿದರು. ಭಾರತ ದೇಶದ ಇತಿಹಾಸದಲ್ಲಿ ಇಂಥ ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದ ಹೆಮ್ಮೆ ನಮ್ಮ ಸರ್ಕಾರದ್ದು ಎಂದರು.

ಈ ವೇಳೆ ಮಾಜಿ ಸಂಸದ ಜಯಪ್ರಕಾಶ್ ಹೆಗ್ಡೆ, ಉಡುಪಿ ತಾಲೂಕು ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಅಧ್ಯಕ್ಷ ರಮೇಶ್ ಕಾಂಚನ್, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಶೋಕ್ ಕೊಡವೂರು, ಉಡಾ ಅಧ್ಯಕ್ಷ ದಿನಕರ್ ಹೇರೂರು, ಜಿಲ್ಲಾಧಿಕಾರಿ ಡಾ.ಕೆ.ವಿದ್ಯಾಕುಮಾರಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ‌ಡಾ.ಕೆ.ಅರುಣ್, ಜಿ.ಪಂ. ಸಿಇಒ ಪ್ರತೀಕ್ ಬಾಯಲ್, ಕಾಂಗ್ರೆಸ್ ಮುಖಂಡರಾದ ಉದಯ್ ಕುಮಾರ್ ಶೆಟ್ಟಿ, ಪ್ರಸಾದ್ ಕಾಂಚನ್, ಎಂ.ಎ. ಗಫೂರ್, ದಿನೇಶ್ ಹೆಗ್ಡೆ, ಲಾವಣ್ಯ ಬಲ್ಲಾಳ್ ಸೇರಿದಂತೆ ಹಲವು ಮಂದಿ ಉಪಸ್ಥಿತರಿದ್ದರು.