ಕುಗ್ರಾಮವಾಗಿದ್ದ ಕರ್ಪೆಗೆ ಸುಗ್ರಾಮ ಯೋಗ: ರಮಾನಾಥ ರೈ

| Published : Feb 28 2025, 12:46 AM IST

ಕುಗ್ರಾಮವಾಗಿದ್ದ ಕರ್ಪೆಗೆ ಸುಗ್ರಾಮ ಯೋಗ: ರಮಾನಾಥ ರೈ
Share this Article
  • FB
  • TW
  • Linkdin
  • Email

ಸಾರಾಂಶ

ಸಿದ್ದಕಟ್ಟೆ ಸಮೀಪದ ಕರ್ಪೆ ಗ್ರಾಮದ ಕುಪ್ಪೆಟ್ಟು ಬರ್ಕೆ ಪಂಜುರ್ಲಿ ಮೂಲಸ್ಥಾನದಲ್ಲಿ ಪ್ರತಿಷ್ಠಾ ಮಹೋತ್ಸವ ಮತ್ತು ನೇಮೋತ್ಸವ ಪ್ರಯುಕ್ತ ನಡೆದ ಧಾರ್ಮಿಕ ಸಭೆ ಕಾರ್ಯಕ್ರಮದಲ್ಲಿ ಮಾಜಿ ಸಚಿವ ರಮಾನಾಥ ರೈ ಮಾತನಾಡಿದರು.

ಕನ್ನಡಪ್ರಭ ವಾರ್ತೆ ಬಂಟ್ವಾಳ

ಕಳೆದ 25 ವರ್ಷಗಳ ಹಿಂದೆ ರಸ್ತೆ ಸಂಪರ್ಕ ಇಲ್ಲದೆ ಫಲ್ಗುಣಿ ನದಿ ತೀರದ ದ್ವೀಪದಂತಿದ್ದ ಕರ್ಪೆ ಗ್ರಾಮದಲ್ಲಿ ಕೆಲವೊಂದು ರಸ್ತೆ ಮತ್ತು ಸೇತುವೆ ನಿರ್ಮಿಸಿದ ಪರಿಣಾಮ ಪ್ರಸ್ತುತ ಸುಗ್ರಾಮವಾಗಿ ಪರಿವರ್ತನೆಗೊಂಡಿದೆ. ಈ ಹಿಂದೆ ಮುಖ್ಯಮಂತ್ರಿ ಸಿದ್ಧರಾಮಯ್ಯ ನೇತೃತ್ವದ ಆಡಳಿತಾವಧಿಯಲ್ಲಿ ಪಶ್ಚಿಮವಾಹಿನಿ ಯೋಜನೆಯಡಿ ಜಿಲ್ಲೆಯ ನೇತ್ರಾವತಿ ಮತ್ತು ಫಲ್ಗುಣಿ ನದಿಗಳಿಗೆ ರು. 300 ಕೋಟಿ ವೆಚ್ಚದಲ್ಲಿ ಕಿಂಡಿ ಅಣೆಕಟ್ಟೆ ಮತ್ತು ಸೇತುವೆ ನಿರ್ಮಾಣಗೊಂಡ ಇತಿಹಾಸ ಯುವಜನತೆಗೆ ತಿಳಿದಿಲ್ಲ ಎಂದು ಮಾಜಿ ಸಚಿವ ಬಿ.ರಮಾನಾಥ ರೈ ಹೇಳಿದ್ದಾರೆ.

ಇಲ್ಲಿನ ಸಿದ್ದಕಟ್ಟೆ ಸಮೀಪದ ಕರ್ಪೆ ಗ್ರಾಮದ ಕುಪ್ಪೆಟ್ಟು ಬರ್ಕೆ ಪಂಜುರ್ಲಿ ಮೂಲಸ್ಥಾನದಲ್ಲಿ ಪ್ರತಿಷ್ಠಾ ಮಹೋತ್ಸವ ಮತ್ತು ನೇಮೋತ್ಸವ ಪ್ರಯುಕ್ತ ನಡೆದ ಧಾರ್ಮಿಕ ಸಭೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಸಂಸದ ಕ್ಯಾ.ಬ್ರಿಜೇಶ್ ಚೌಟ ಮಾತನಾಡಿ, ಸಮಸ್ತ ಹಿಂದೂ ಸಮಾಜ ವಿವಿಧ ಜಾತಿ, ಪಂಗಡಗಳ ಭೇದವಿಲ್ಲದೆ ಸಂಘಟಿತರಾದಾಗ ದೇಶ ಬಲಿಷ್ಠವಾಗುತ್ತದೆ ಎಂದರು.ಪ್ರತಿಷ್ಠಾ ಮಹೋತ್ಸವ ಅಧ್ಯಕ್ಷ ಭುವನೇಶ್ ಪಚ್ಚಿನಡ್ಕ ಅಧ್ಯಕ್ಷತೆ ವಹಿಸಿದ್ದರು.

ಮೂಡುಬಿದಿರೆ ಆಳ್ವಾಸ್ ಕಾಲೇಜಿನ ಉಪನ್ಯಾಸಕ ಡಾ. ಯೋಗೀಶ್ ಕೈರೋಡಿ ಧಾರ್ಮಿಕ ಉಪನ್ಯಾಸ ನೀಡಿದರು.

ಮಾಜಿ ಸಚಿವ ಬಿ.ನಾಗರಾಜ ಶೆಟ್ಟಿ, ಕುದ್ರೋಳಿ ಕ್ಷೇತ್ರದ ಕೋಶಾಧಿಕಾರಿ ಪದ್ಮರಾಜ್ ಆರ್.ಪೂಜಾರಿ ಶುಭ ಹಾರೈಸಿದರು.

ರಾಜ್ಯ ಧಾರ್ಮಿಕ ಪರಿಷತ್ ಸದಸ್ಯ ಬಡಾಜೆ ರವಿಶಂಕರ ಶೆಟ್ಟಿ, ಕಿಯೋನಿಕ್ಸ್ ಮಾಜಿ ಅಧ್ಯಕ್ಷ ಕೆ.ಹರಿಕೃಷ್ಣ ಬಂಟ್ವಾಳ್, ಮೂರ್ತೆದಾರರ ಮಹಾ ಮಂಡಲ ಅಧ್ಯಕ್ಷ ಕೆ.ಸಂಜೀವ ಪೂಜಾರಿ, ಬೂಡ ಅಧ್ಯಕ್ಷ ಬೇಬಿ ಕುಂದರ್, ಜಾರಂದಾಯ ದೈವಸ್ಥಾನ ಉಪಾಧ್ಯಕ್ಷ ಚಂದ್ರಕಾಂತ್, ಮುಂಬೈ ಸಮಿತಿ ಸಹ ಸಂಚಾಲಕ ಲಕ್ಷ್ಮೀಶ್ ಸುಜಿತ್ ಪೂಜಾರಿ, ಕುಪ್ಪೆಟ್ಟು ಸೇವಾ ಟ್ರಸ್ಟ್ ಹರೀಶ ಸನಿಲ್, ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಪ್ರಭಾಕರ ಪ್ರಭು, ಹೊರೆಕಾಣಿಕೆ ಸಮಿತಿ ಸಂಚಾಲಕ ದೇವಪ್ಪ ಕರ್ಕೇರ ನೆಕ್ಕರೆಗುಳಿ, ಪ್ರಮುಖರಾದ ಜಗದೀಶ್ ಕೊಯಿಲ, ರವೀಂದ್ರ ಪೂಜಾರಿ, ರಂಜನಿ ದಿವಾಕರ್ ಮತ್ತಿತರರು ಇದ್ದರು.

ಪ್ರಚಾರ ಸಮಿತಿ ಸಂಚಾಲಕ ದಿನೇಶ ಸುವರ್ಣ ಸ್ವಾಗತಿಸಿದರು. ಪ್ರಧಾನ ಕಾರ್ಯದರ್ಶಿ ರತ್ನಾಕರ ಪೂಜಾರಿ ವಂದಿಸಿದರು. ಪ್ರಜ್ವಲ್ ಸಿದ್ದಕಟ್ಟೆ ನಿರೂಪಿಸಿದರು.