ಸಾರಾಂಶ
ಹೊಸಕೋಟೆ: ತಾಲೂಕಿನ ಕಸಬಾ ಹೋಬಳಿ ಮಲಿಮಾಕನಪುರದ ಬಸವೇಶ್ವರಸ್ವಾಮಿ, ವೇಣುಗೋಪಾಲಸ್ವಾಮಿ ದೇವಾಲಯದಲ್ಲಿ ಸಹಸ್ರಾರು ಭಕ್ತರ ಸಮ್ಮುಖದಲ್ಲಿ ಕಾರ್ತೀಕ ದೀಪೋತ್ಸವ ಸಂಪನ್ನವಾಯಿತು.
ಹೊಸಕೋಟೆ: ತಾಲೂಕಿನ ಕಸಬಾ ಹೋಬಳಿ ಮಲಿಮಾಕನಪುರದ ಬಸವೇಶ್ವರಸ್ವಾಮಿ, ವೇಣುಗೋಪಾಲಸ್ವಾಮಿ ದೇವಾಲಯದಲ್ಲಿ ಸಹಸ್ರಾರು ಭಕ್ತರ ಸಮ್ಮುಖದಲ್ಲಿ ಕಾರ್ತೀಕ ದೀಪೋತ್ಸವ ಸಂಪನ್ನವಾಯಿತು.
ಗ್ರಾಮ ಪಂಚಾಯತ್ ಸದಸ್ಯ ತಮ್ಮಯ್ಯಗೌಡ ಮಾತನಾಡಿ ಗ್ರಾಮದಲ್ಲಿ ನೆಲೆಸಿರುವ ಶ್ರೀ ಬಸವೇಶ್ವರ ಸ್ವಾಮಿ ಹಾಗೂ ವೇಣುಗೋಪಾಲ ಸ್ವಾಮಿ ಭಕ್ತರ ಕಷ್ಟಗಳನ್ನು ನಿವಾರಣೆ ಮಾಡುವ ಆರಾಧ್ಯ ದೈವವಾಗಿದೆ. ಹಲವಾರು ವರ್ಷಗಳಿಂದ ಗ್ರಾಮದಲ್ಲಿ ಕಾರ್ತಿಕ ದೀಪೋತ್ಸವವನ್ನು ಆಚರಣೆ ಮಾಡಿಕೊಂಡು ಬರುತ್ತಿದ್ದು ಸಹಸ್ರಾರು ಸಂಖ್ಯೆಯಲ್ಲಿ ಭಕ್ತರು ಭಾಗವಹಿಸುತ್ತಾರೆ. ಪ್ರಮುಖವಾಗಿ ಶ್ರೀ ಬಸವೇಶ್ವರ ಸ್ವಾಮಿ ಹಾಗೂ ವೇಣುಗೋಪಾಲ ಸ್ವಾಮಿ ದೇವಾಲಯವನ್ನು ಜೀರ್ಣೋದ್ಧಾರ ಮಾಡಿದ ನಂತರ ಮೂರು ವರ್ಷದಿಂದ ಮತ್ತಷ್ಟು ವಿಜೃಂಭಣೆಯ ಆಚರಣೆಯನ್ನು ಮಾಡುತ್ತಿದ್ದು ಬೆಳಿಗ್ಗೆಯಿಂದ ರಾತ್ರಿವರೆಗೂ ಭಕ್ತರಿಗೆ ಪ್ರಸಾದ ವ್ಯವಸ್ಥೆಯನ್ನು ಮಾಡಿದ್ದು ಸಂಜೆ ವೀರಗಾಸೆ ನೃತ್ಯದೊಂದಿಗೆ ದೀಪೋತ್ಸವವನ್ನು ಮಾಡುತ್ತಿದ್ದೇವೆ. ಈ ಧಾರ್ಮಿಕ ಕಾರ್ಯಕ್ಕೆ ಗ್ರಾಮಸ್ಥರ ಹಾಗೂ ದಾನಿಗಳ ನೆರವು ಸಾಕಷ್ಟಿದೆ ಎಂದರು.ಪ್ರಮುಖವಾಗಿ ಗ್ರಾಮಗಳಲ್ಲಿ ಧಾರ್ಮಿಕ ಕಾರ್ಯಗಳನ್ನು ಮಾಡುವ ಮೂಲಕ ದೇಶದಲ್ಲಿ ಸಕಾಲಕ್ಕೆ ಮಳೆ ಬೆಳೆಯಾಗಿ ರೈತರ ಬದುಕು ಹಸನಾಗಲಿ ಎಂದು ಪ್ರಾರ್ಥಿಸುವುದು ಮುಖ್ಯ ಉದ್ದೇಶವಾಗಿದೆ ಎಂದರು.
ವೀರಗಾಸೆ, ಕಾಳಿ ನೃತ್ಯ, ಡೊಳ್ಳುಕುಣಿತ ಸೇರಿದಂತೆ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ಯಶಸ್ವಿಯಾಗಿ ನೆರವೇರಿತು.ಬೆಂಗಳೂರು ಹಾಲು ಒಕ್ಕೂಟದ ನಿರ್ದೇಶಕ ಎಲ್‌ಎನ್‌ಟಿ ಮಂಜುನಾಥ್ ಸೇರಿದಂತೆ ಗ್ರಾಮ ಪಂಚಾಯತ್ ಸದಸ್ಯರು ಗ್ರಾಮಸ್ಥರು ಹಾಜರಿದ್ದರು.
ಫೋಟೋ: 18 ಹೆಚ್‌ಎಸ್‌ಕೆ 1 ಮತ್ತು 21 ಹೊಸಕೋಟೆ ತಾಲೂಕಿನ ಮಲ್ಲಿ ಮಾಕನಪುರದಲ್ಲಿ ನಡೆದ ಕಾರ್ತಿಕ ದೀಪೋತ್ಸವ ಕಾರ್ಯಕ್ರಮದಲ್ಲಿ ದೇವರಿಗೆ ವಿಶೇಷ ಅಲಂಕಾರ ಮಾಡಲಾಯಿತು. ವೀರಗಾಸೆ ನೃತ್ಯ ಎಲ್ಲರ ಗಮನ ಸೆಳೆಯಿತು.
;Resize=(128,128))
;Resize=(128,128))
;Resize=(128,128))
;Resize=(128,128))