ಸಾರಾಂಶ
ಸಾಹಿತ್ಯ ಕ್ಷೇತ್ರದ ಸಾಧನೆಗೆ ಬಾರಿಯಂಡ ಜೋಯಪ್ಪ ಅವರನ್ನು ಕರುನಾಡಪ್ರಭು ಕೆಂಪೇಗೌಡ ಪ್ರಶಸ್ತಿ ನೀಡಿ ರಾಜ್ಯಪಾಲ ಥಾವರ್ ಚಂದ್ ಗೆಹಲೋಟ್ ಸನ್ಮಾನಿಸಿದರು.
ಕನ್ನಡಪ್ರಭ ವಾರ್ತೆ ಮಡಿಕೇರಿ
ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆದ ನಾಡಪ್ರಭು ಕೆಂಪೇಗೌಡ ಅವರ 516 ನೇ ಜನ್ಮದಿನೋತ್ಸವದಲ್ಲಿ ಸಾಹಿತ್ಯ ಕ್ಷೇತ್ರದ ಸಾಧನೆಗೆ ಬಾರಿಯಂಡ ಜೋಯಪ್ಪ ಅವರನ್ನು ನಾಡಪ್ರಭು ಕೆಂಪೇಗೌಡ ಪ್ರತಿಷ್ಠಾನ ರಾಜ್ಯಮಟ್ಟದ ‘ಕರುನಾಡ ಪ್ರಭು ಕೆಂಪೇಗೌಡ’ ಪ್ರಶಸ್ತಿ ನೀಡಿ ರಾಜ್ಯಪಾಲ ಥಾವರ್ ಚಂದ್ ಗೆಹಲೋಟ್ ಅವರು ಸನ್ಮಾನಿಸಿದರು.ಪ್ರಶಸ್ತಿಯು ಸ್ಮರಣಿಕೆಯೊಂದಿಗೆ ಬೆಳ್ಳಿ ಪದಕ ಮತ್ತು 25ಸಾವಿರ ನಗದು ಹೊಂದಿದೆ. ಸನ್ಮಾನದ ನಂತರ ಮಾಧ್ಯಮದೊಂದಿಗೆ ಮಾತನಾಡಿದ ಬಾರಿಯಂಡ ಜೋಯಪ್ಪ ಅವರು, ಗ್ರಾಮೀಣ ಪ್ರದೇಶದಲ್ಲಿ ಶಿಕ್ಷಣ ಮತ್ತು ಸಾಹಿತ್ಯ ಸೇವೆಯನ್ನು ಪರಿಗಣಿಸಿ ನನ್ನನ್ನು ನಾಡ ಪ್ರಭು ಕೆಂಪೇಗೌಡ ಪ್ರಶಸ್ತಿಗೆ ಆಯ್ಕೆ ಮಾಡಿ ಸನ್ಮಾನಿಸಿ ಗೌರವಿಸಿದ್ದು ನನಗೆ ಅತೀವ ಖುಷಿ ಕೊಟ್ಟಿದೆ ಎಂದರು.ಕಾರ್ಯಕ್ರಮದಲ್ಲಿ ಮಾಜಿ ಮುಖ್ಯಮಂತ್ರಿ ಡಾ.ಸಿ ಎನ್. ಅಶ್ವಥ್ ನಾರಾಯಣ್, ಪ್ರತಿಷ್ಠಾನ ಅಧ್ಯಕ್ಷರಾದ ಪ್ರೊ. ಎಂ. ಕೃಷ್ಣ ಗೌಡ, ಆದಿಚುಂಚನಗಿರಿ ಮಹಾಸಂಸ್ಥಾನದ ಪೀಠಾಧ್ಯಕ್ಷರಾದ ಶ್ರೀ ಡಾ. ನಿರ್ಮಲಾನಂದನಾಥ ಮಹಾಸ್ವಾಮೀಜಿ, ವಿರೋಧ ಪಕ್ಷದ ನಾಯಕ ಆರ್. ಅಶೋಕ್, ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಮಾಜಿ ಸ್ಪೀಕರ್ ಕೆ.ಜಿ. ಬೋಪಯ್ಯ, ಮಾಜಿ ಮುಖ್ಯಮಂತ್ರಿ ಡಿ. ವಿ. ಸದಾನಂದ ಗೌಡ ಹಾಗು ಇನ್ನಿತರ ಪ್ರಮುಖರು ಉಪಸ್ಥಿತರಿದ್ದರು.ಬಾರಿಯಂಡ ಜೋಯಪ್ಪನವರ ಕಿರು ಪರಿಚಯ: ಇವರು ಮಡಿಕೇರಿ ಸಮೀಪ ಮದೆನಾಡಿನ ಮದೆ ಮಹೇಶ್ವರ ಪ್ರೌಢ ಶಾಲೆ ಯಲ್ಲಿ ಶಿಕ್ಷರಾಗಿ, ಮುಖ್ಯ ಅಧ್ಯಾಪಕರಾಗಿ, ಅದೇ ಕಾಲೇಜಿನಲ್ಲಿ ಪ್ರಾಚಾರ್ಯ ರಾಗಿ 35 ವರ್ಷ ಸೇವೆ ಸಲ್ಲಿಸಿದ್ದಾರೆ.