ಸಾರಾಂಶ
ರಾಷ್ಟ್ರೀಕೃತ ಬ್ಯಾಂಕ್ ಹಾಗೂ ಅಂಚೆ ಕಚೇರಿಗಳಲ್ಲಿ ಕನ್ನಡ ಮಾತನಾಡಲು ಬಾರದ ಸಿಬ್ಬಂದಿಯಿಂದ ಗ್ರಾಹಕರು ವ್ಯವಹರಿಸಲು ತೊಂದರೆಯಾಗುತ್ತಿರುವುದನ್ನು ವಿರೋಧಿಸಿ ಕರುನಾಡ ವಿಜಯಸೇನೆಯಿಂದ ಜಿಲ್ಲಾಧಿಕಾರಿ ಕಚೇರಿ ಎದುರು ಗುರುವಾರ ಪ್ರತಿಭಟನೆ ನಡೆಸಿ ಮನವಿ ಸಲ್ಲಿಸಲಾಯಿತು.
ಡಿಸಿ ಕಚೇರಿ ಬಳಿ ಧರಣಿ
ಚಿತ್ರದುರ್ಗ: ರಾಷ್ಟ್ರೀಕೃತ ಬ್ಯಾಂಕ್ ಹಾಗೂ ಅಂಚೆ ಕಚೇರಿಗಳಲ್ಲಿ ಕನ್ನಡ ಮಾತನಾಡಲು ಬಾರದ ಸಿಬ್ಬಂದಿಯಿಂದ ಗ್ರಾಹಕರು ವ್ಯವಹರಿಸಲು ತೊಂದರೆಯಾಗುತ್ತಿರುವುದನ್ನು ವಿರೋಧಿಸಿ ಕರುನಾಡ ವಿಜಯಸೇನೆಯಿಂದ ಜಿಲ್ಲಾಧಿಕಾರಿ ಕಚೇರಿ ಎದುರು ಗುರುವಾರ ಪ್ರತಿಭಟನೆ ನಡೆಸಿ ಮನವಿ ಸಲ್ಲಿಸಲಾಯಿತು.ನಗರದ ಪ್ರವಾಸಿ ಮಂದಿರದಿಂದ ಮೆರವಣಿಗೆ ಮೂಲಕ ಜಿಲ್ಲಾಧಿಕಾರಿ ಕಚೇರಿಗೆ ಆಗಮಿಸಿದ ಪ್ರತಿಭಟನಾಕಾರರು ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ವಿರುದ್ದ ಧಿಕ್ಕಾರಗಳನ್ನು ಕೂಗಿದರು.
ಬ್ಯಾಂಕ್ ಮತ್ತು ಅಂಚೆ ಕಚೇರಿಗಳಲ್ಲಿ ಹಿಂದಿ ಮತ್ತು ಇಂಗ್ಲಿಷ್‍ನಲ್ಲಿ ಮಾತನಾಡುವ ಸಿಬ್ಬಂದಿಯೇ ಜಾಸ್ತಿಯಿರುವುದರಿಂದ ಕನ್ನಡಿಗರು ವ್ಯವಹರಿಸಲು ಆಗದೆ ಪರದಾಡುವಂತಾಗಿದೆ. ಈ ಹಿಂದೆ ಸಾಕಷ್ಟು ಬಾರಿ ಪ್ರತಿಭಟನೆ ನಡೆಸಿ ಕನ್ನಡಿಗರನ್ನು ನೇಮಕ ಮಾಡಿಕೊಳ್ಳುವಂತೆ ಒತ್ತಾಯಿಸಿದ್ದರೂ ರಾಜ್ಯ ಮತ್ತು ಕೇಂದ್ರ ಸರ್ಕಾರಗಳು ಕನ್ನಡಿಗರಿಗೆ ಅವಮಾನಿಸುತ್ತ ಬರುತ್ತಿರುವುದು ನೋವಿನ ಸಂಗತಿ ಎಂದು ಪ್ರತಿಭಟನಾಕಾರರು ನೋವು ವ್ಯಕ್ತಪಡಿಸಿದರು.ರಾಷ್ಟ್ರೀಕೃತ ಬ್ಯಾಂಕ್‍ಗಳು ಮತ್ತು ಅಂಚೆ ಕಚೇರಿಗಳಲ್ಲಿ ಕೆಲಸ ಮಾಡುತ್ತಿರುವ ಹೊರ ರಾಜ್ಯಗಳ ಸಿಬ್ಬಂದಿಗಳಿಗೆ ಎರಡು ಮೂರು ಬಾರಿ ಕನ್ನಡ ಪುಸ್ತಕಗಳನ್ನು ನೀಡಿ, ಸಿಹಿ ತಿನ್ನಿಸಿ ಕನ್ನಡದಲ್ಲಿ ಮಾತನಾಡುವಂತೆ ಮನವಿ ಮಾಡಿದ್ದರೂ ಪ್ರಯೋಜನವಾಗಿಲ್ಲ. ಹಿಂದಿ, ಇಂಗ್ಲಿಷ್‍ನಲ್ಲಿರುವ ಚಲನ್‍ಗಳನ್ನು ಕನ್ನಡದಲ್ಲಿ ಮುದ್ರಿಸದಿದ್ದರೆ ಮುಂದಿನ ದಿನಗಳಲ್ಲಿ ತೀವ್ರತರನಾದ ಹೋರಾಟ ಮಾಡಲಾಗುವುದೆಂದು ಪ್ರತಿಭಟನೆ ನೇತೃತ್ವ ವಹಿಸಿದ್ದ ಕರುನಾಡ ವಿಜಯಸೇನೆ ಜಿಲ್ಲಾಧ್ಯಕ್ಷ ಕೆ.ಟಿ.ಶಿವಕುಮಾರ್ ಎಚ್ಚರಿಸಿದರು.
ಕರುನಾಡ ವಿಜಯಸೇನೆ ಮಹಿಳಾ ಘಟಕದ ಅಧ್ಯಕ್ಷೆ ವೀಣಗೌರಣ್ಣ, ಪ್ರಧಾನ ಕಾರ್ಯದರ್ಶಿ ಗೋಪಿನಾಥ್ ಎಸ್.ತಾಲೂಕು ಅಧ್ಯಕ್ಷ ಸಂತೋಷ್ ಎನ್.ನಗರಾಧ್ಯಕ್ಷ ಅವಿನಾಶ್, ಜಿಲ್ಲಾ ಸಂಚಾಲಕ ನಾಗೇಶ್ ವಿ. ಹರೀಶ್‍ಕುಮಾರ್ ಪಿ.ಆರ್. ತಿಪ್ಪೇಸ್ವಾಮಿ ಸಿ. ಅಖಿಲೇಶ್ ನಾಯ್ಕ ಜಿ.ಪಿ.ನಿರಂಜನ್, ಎರ್ರಿಸ್ವಾಮಿ, ನಾಗರಾಜ, ಕಮಲ ನಿಸಾರ್ ಅಹಮದ್, ಕೆ.ರತ್ನಮ್ಮ, ಯುವ ಘಟಕದ ತಾಲೂಕು ಅಧ್ಯಕ್ಷ ಮಧುಸೂದನ್ ಕೆ.ಎನ್. ಪಾಲ್ಗೊಂಡಿದ್ದರು. ಪೋಟೋ ಕ್ಯಾಪ್ಸನ್ಬ್ಯಾಂಕ್, ಅಂಚೆ ಕಚೇರಿಯಲ್ಲಿ ಕನ್ನಡಿಗರೇತರ ಪ್ರಾಬಲ್ಯ ವಿರೋಧಿಸಿ ಕರುನಾಡ ವಿಜಯ ಸೇನೆಯಿಂದ ಚಿತ್ರದುರ್ಗದಲ್ಲಿ ಪ್ರತಿಭಟನೆ ನಡೆಸಲಾಯಿತು.
ಫೋಟೋ ಪೈಲ್ ನೇಮ್- 30 ಸಿಟಿಡಿ6