ಸಾರಾಂಶ
ಶಿಬಿರಾರ್ಥಿಗಳು ಉತ್ತಮ ಕ್ರೀಡಾಪಟುಗಳಾಗಿ: ಸಿ.ನಾಣಯ್ಯ ಆಶಯ
ಕನ್ನಡಪ್ರಭ ವಾರ್ತೆ ನಾಪೋಕ್ಲುಶಿಬಿರಾರ್ಥಿಗಳು ಹಾಕಿ ಕ್ರೀಡೆಯಲ್ಲಿ ಪರಿಣತಿ ಹೊಂದಿ ಉತ್ತಮ ಕ್ರೀಡಾಪಟುಗಳಾಗಬೇಕು ಎಂದು ಕೊಡವ ಸಮಾಜದ ಅಧ್ಯಕ್ಷ ಮುಂಡಂಡ ಸಿ.ನಾಣಯ್ಯ ಹೇಳಿದರು.
ಇಲ್ಲಿನ ಫೀಲ್ಡ್ ಮಾರ್ಷಲ್ ಕೆ.ಎಂ. ಕಾರ್ಯಪ್ಪ ಕ್ರೀಡಾ ಅಕಾಡೆಮಿ ವತಿಯಿಂದ ಕೆಪಿಎಸ್ ಶಾಲೆ ಆಟದ ಮೈದಾನದಲ್ಲಿ ಶುಕ್ರವಾರ ಆಯೋಜಿಸಲಾಗಿದ್ದ ಬೇಸಿಗೆ ಶಿಬಿರದ ಸಮಾರೋಪ ಸಮಾರಂಭದಲ್ಲಿ ಪಾಲ್ಗೊಂಡು, ಶಿಬಿರಾರ್ಥಿಗಳಿಂದ ಧ್ವಜ ವಂದನೆ ಸ್ವೀಕರಿಸಿ ಬಳಿಕ ನಡೆದ ಸಮಾರಂಭದಲ್ಲಿ ಮಾತನಾಡಿದರು.ದೇಶದಲ್ಲಿ ಹಾಕಿ ಕ್ರೀಡೆ ಪ್ರಸಿದ್ಧಿ ಹೊಂದಿದೆ. ಜಿಲ್ಲೆಯಲ್ಲೂ ಇರುವ ಉತ್ತಮ ಹಾಕಿಪಟುಗಳಿಂದಾಗಿ ಕೌಟುಂಬಿಕ ಹಾಕಿ ಉತ್ಸವ ಗಿನ್ನೆಸ್ ಬುಕ್ ಆಫ್ ರೆಕಾರ್ಡ್ಸ್‌ನಲ್ಲಿ ಸ್ಥಾನ ಪಡೆಯುವಂತಾಗಿದೆ. ಹಾಕಿ ಕ್ರೀಡೆಗೆ ಉತ್ತಮ ಅವಕಾಶಗಳು ಇರುವುದರಿಂದ ಶಿಬಿರಾರ್ಥಿಗಳು ಅದರ ಪ್ರಯೋಜನವನ್ನು ಪಡೆದುಕೊಳ್ಳಬೇಕು. ರಜಾ ಅವಧಿಯಲ್ಲಿ ಉತ್ತಮ ತರಬೇತಿ ನೀಡುವಂತಹ ಫೀಲ್ಡ್ ಮಾರ್ಷಲ್ ಕೆ.ಎಂ. ಕಾರ್ಯಪ್ಪ ಕ್ರೀಡಾ ಅಕಾಡೆಮಿ ಜಿಲ್ಲೆಯಲ್ಲಿ ಮಕ್ಕಳಿಗೆ ಉತ್ತಮ ತರಬೇತಿ ನೀಡುವುದರ ಮೂಲಕ ಪ್ರಸಿದ್ಧಿಯನ್ನು ಹೊಂದಲಿ ಎಂದರು.ಉತ್ತಮವಾಗಿ ತರಬೇತಿ ಆಯೋಜಿಸುತ್ತಿರುವ ಅಕಾಡೆಮಿಯ ಮುಂದಿನ ವರ್ಷದ ತರಬೇತಿ ಶಿಬಿರಕ್ಕೆ 50,000 ರು. ಗಳ ಕೊಡುಗೆ ನೀಡುವುದಾಗಿ ಹೇಳಿದರು.ಕಾರ್ಯಕ್ರಮ ಉದ್ಘಾಟಿಸಿದ ದಾನಿಗಳಾದ ಪಾಂಡಂಡ ಲೀಲಾ ಕುಟ್ಟಪ್ಪ ಮಾತನಾಡಿ, ವಿದ್ಯಾರ್ಥಿಗಳು ತಂದೆ-ತಾಯಿಯಂದಿರಿಗೆ ಗೌರವವನ್ನು ನೀಡಬೇಕು. ಉತ್ತಮ ಶಿಕ್ಷಣವನ್ನು ಪಡೆಯಬೇಕು. ಕೇವಲ ಕ್ರೀಡೆಗೆ ಮಹತ್ವ ನೀಡದೆ ಶಿಕ್ಷಣಕ್ಕೂ ಮಹತ್ವ ನೀಡಿ ಸಮಾಜದಲ್ಲಿ ಉನ್ನತ ಸ್ಥಾನಕ್ಕೆ ಇರುವಂತಾಗಬೇಕು ಎಂದರು.ಕಾರ್ಯಕ್ರಮದ ಅದ್ಯಕ್ಷತೆ ವಹಿಸಿದ್ದ ಅಕಾಡೆಮಿ ಅಧ್ಯಕ್ಷ ಕಾಂಡಂಡ ಜೋಯಪ್ಪ ಮಾತನಾಡಿ, ಮಾದಕ ದ್ರವ್ಯ ಸೇವನೆಯಿಂದ ದೂರವಿರಬೇಕು. ಮೊಬೈಲ್ ಫೋನ್ ಅಗತ್ಯಕ್ಕೆ ಮಾತ್ರ ಬಳಕೆ ಮಾಡಿ ಎಂದು ಕಿವಿ ಮಾತು ಹೇಳಿದರು.ಉಪಾಧ್ಯಕ್ಷ, ನಿವೃತ್ತ ಸೇನಾನಿ ಕೊಂಡಿರ ನಾಣಯ್ಯ, ಕುಲ್ಲೇಟಿರ ಅರುಣ್ ಬೇಬಾ, ಬಿದ್ದಾಟಂಡ ಸುಮನ್, ನೆರವಂಡ ಅನಿಲ್ ಮತ್ತು ಕೆಲೇಟಿರ ಡಾಕ್ಟರ್ ಬೋಪಣ್ಣ ಮಾತನಾಡಿದರು.
ಸಮಾರಂಭಕ್ಕೂ ಮುನ್ನ ಶಿಬಿರಾರ್ಥಿಗಳು ಪಥಸಂಚಲನ ನಡೆಸಿ ಅತಿಥಿಗಳಿಗೆ ಗೌರವರಕ್ಷೆ ಸಲ್ಲಿಸಿ ಅಕಾಡೆಮಿ ಸ್ಥಾಪಕ ಅಧ್ಯಕ್ಷ ದಿ.ಕಲಿಯಂಡ ಸಾಬು ಅಯ್ಯಣ್ಣ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವುದರ ಮೂಲಕ ಒಂದು ನಿಮಿಷಗಳ ಕಾಲ ಮೌನಚರಣೆ ಮಾಡಿ ಗೌರವ ಸಲ್ಲಿಸಲಾಯಿತು.ಈ ಸಂದರ್ಭ ವೇದಿಕೆಯಲ್ಲಿದ್ದ ಗಣ್ಯರು ಶಿಬಿರಾರ್ಥಿಗಳಿಗೆ ನೆನಪಿನ ಕಾಣಿಕೆ ಹಾಗೂ ಅರ್ಹತಾ ಪತ್ರ ವಿತರಿಸಿ ಶುಭ ಹಾರೈಸಿದರು.ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷ ವನಜಾಕ್ಷಿ ರೇಣುಕೇಶ್, ಲಯನ್ಸ್ ಕ್ಲಬ್ ಅಧ್ಯಕ್ಷ ಬಿದ್ದಾಟಂಡ ಮೇರಿ ಚಿಟ್ಟಿಯಪ್ಪ, ಮಹಿಳಾ ಸಮಾಜ ಅಧ್ಯಕ್ಷ ಕುಂಚೇಟ್ಟಿರ ರೇಷ್ಮಾ ಉತ್ತಪ್ಪ, ಸುಧಿ ಉತ್ತಪ್ಪ, ಕೆಪಿಎಸ್ ಶಾಲೆ ಪ್ರಾಂಶುಪಾಲೆ ಮೇದುರ ವಿಶಾಲ್, ಕನ್ನಂಬೀರ ಸುಧಿ ತಿಮ್ಮಯ್ಯ, ಶಿವಚಳಿಯoಡ ಅಂಬಿ ಕಾರ್ಯಪ್ಪ, ಮುಂಡಂಡ ಕವಿತಾ ಅಯ್ಯಣ್ಣ, ಕಲಿಯಂಡ ಆಶಿಕ್, ಫೀಲ್ಡ್ ಮಾರ್ಷಲ್ ಕೆ.ಎಂ. ಕಾರ್ಯಪ್ಪ ಕ್ರೀಡಾ ಅಕಾಡೆಮಿಯ ಖಜಾಂಚಿ, ತರಬೇತುದಾರ, ಮಾಜಿ ಸೈನಿಕ ಕೇಟೋಳಿರ ಡಾಲಿ ಅಚ್ಚಪ್ಪ, ಕಾರ್ಯದರ್ಶಿ ಮಾಚೆಟ್ಟಿರ ಕುಸು ಕುಶಾಲಪ್ಪ, ನಿರ್ದೇಶಕರಾದ ಮುಕ್ಕಾಟಿರ ವಿನಯ್, ದುಗ್ಗಳ ಸದಾನಂದ, ತರಬೇತುದಾರರಾದ ಅರೆಯಡ ಗಣೇಶ್, ಕುಂಡ್ಯೋಳಂಡ ಕವಿತಾ ಮುತ್ತಣ್ಣ, ಬಿದ್ದಾಟಂಡ ಮಮತಾ ಚಿಣ್ಣಪ್ಪ, ಕುಂಡಿಯೋಳಂಡ ಕವಿತಾ ಮುತ್ತಣ್ಣ ಹಾಗೂ ಪೋಷಕರು ಪಾಲ್ಗೊಂಡಿದ್ದರು.
2-ಎನ್ ಪಿ ಕೆ-5.ನಾಪೋಕ್ಲು ಫೀಲ್ಡ್ ಮಾರ್ಷಲ್ ಕೆ.ಎಂ. ಕಾರ್ಯಪ್ಪ ಕ್ರೀಡಾ ಅಕಾಡೆಮಿ ವತಿಯಿಂದ ಆಯೋಜಿಸಲಾಗಿದ್ದ ಬೇಸಿಗೆ ಶಿಬಿರ ಸಮಾರೋಪ ಸಮಾರಂಭದ ಉದ್ಘಾಟನೆಯನ್ನು ದಾನಿಗಳಾದ ಪಾಂಡಂಡ ಲೀಲಾ ಕುಟ್ಟಪ್ಪ ಕರಡ ನೆರವೇರಿಸಿದರು.2-ಎನ್ ಪಿ ಕೆ-6.ನಾಪೋಕ್ಲು ಫೀಲ್ಡ್ ಮಾರ್ಷಲ್ ಕೆ.ಎಂ. ಕಾರ್ಯಪ್ಪ ಕ್ರೀಡಾ ಅಕಾಡೆಮಿ ವತಿಯಿಂದ ಆಯೋಜಿಸಲಾಗಿದ್ದ ಬೇಸಿಗೆ ಶಿಬಿರ ಸಮಾರೋಪ ಸಮಾರಂಭದ ಮುಖ್ಯ ಅತಿಥಿ ಕೊಡವ ಸಮಾಜದ ಅಧ್ಯಕ್ಷ ಮುಂಡಂಡ ಸಿ.ನಾಣಯ್ಯ ಮಾತನಾಡಿದರು.2-ಎನ್ ಪಿ ಕೆ-7.ಶಿಬಿರಾರ್ಥಿಗಳಿಂದ ಧ್ವಜ ವಂದನೆ