ಸಾರಾಂಶ
ಕನ್ನಡಪ್ರಭ ವಾರ್ತೆ ಮಡಿಕೇರಿ
ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಆಶ್ರಯದಲ್ಲಿ ಕೇರಳ ಗ್ರಾಮ ಗೌಡ ಸಮಿತಿ ಬಂದಡ್ಕ ಸಹಕಾರದಲ್ಲಿ ಅರೆಭಾಷೆ ಗಡಿನಾಡ ಉತ್ಸವ-2024 27ರಂದು ಕೇರಳ ಕಾಸರಗೋಡು ಜಿಲ್ಲೆಯ ಬಂದಡ್ಕ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಮಯೂರ ಮಂಟಪ ಸಭಾಭವನದಲ್ಲಿ ನಡೆಯಲಿದೆ.ಅಂದು ಬೆಳಗ್ಗೆ 9ಕ್ಕೆ ಬಂದಡ್ಕ ಆರ್ಟ್ ಆಫ್ ಲಿವಿಂಗ್ ಜ್ಞಾನ ಮಂದಿರದಿಂದ ಮೆರವಣಿಗೆ ನಡೆಯಲಿದೆ. ಬಂದಡ್ಕದ ಹಿರಿಯ ವರ್ತಕ ಕೃಷ್ಣಪ್ಪ ಗೌಡ ಉದ್ಘಾಟಿಸಲಿದ್ದಾರೆ. ಇಳಂದಿಲ ರವಿಪ್ರಸಾದ್ ಮತ್ತಿತರರು ಪಾಲ್ಗೊಳ್ಳಲಿದ್ದಾರೆ. ಬೆಳಗ್ಗೆ 9.30ಕ್ಕೆ ಮಕ್ಕಳಿಂದ ಅರೆಭಾಷೆ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದೆ. ಪಂಕಜಾಕ್ಷ ಅಡ್ಕ ನಡೆಸಿಕೊಡಲಿದ್ದಾರೆ.
ಬೆಳಗ್ಗೆ 10 ಗಂಟೆಗೆ ಉದ್ಘಾಟನಾ ಕಾರ್ಯಕ್ರಮ ನಡೆಯಲಿದೆ. ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಸದಾನಂದ ಮಾವಜಿ ಅಧ್ಯಕ್ಷತೆ ವಹಿಸಲಿದ್ದಾರೆ. ಸುಳ್ಯ ಗೌಡರ ಯುವ ಸೇವಾ ಸಂಘದ ಅಧ್ಯಕ್ಷ ಪಿ.ಎಸ್.ಗಂಗಾಧರ ಉದ್ಘಾಟಿಸಲಿದ್ದಾರೆ. ಕುತ್ತಿಕೋಲು ಗ್ರಾ.ಪಂ.ಅಧ್ಯಕ್ಷ ಮುರಳಿ ಪಯ್ಯಂಗಾನ, ಕಾರಡ್ಕ ಬ್ಲಾಕ್ ಪಂಚಾಯಿತಿ ಸದಸ್ಯರಾದ ಬಿ.ಕೃಷ್ಣನ್, ಕುತ್ತಿಕೋಲು ಗ್ರಾ.ಪಂ.ಸದಸ್ಯ ಕುಂಞರಾಮನ್ ತವನಂ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಕುಮಾರ್, ಬಂದಡ್ಕ ಶ್ರೀ ಸುಬ್ರಹ್ಮಣ್ಯ ದೇವಸ್ಥಾನ ಆಡಳಿತ ಮಂಡಳಿ ಅಧ್ಯಕ್ಷ ಸುಭಾಷ್‌ಚಂದ್ರ ರೈ ಇತರರು ಪಾಲ್ಗೊಳ್ಳಲಿದ್ದಾರೆ.ಬೆಳಗ್ಗೆ 11 ಗಂಟೆಗೆ ‘ಗಡಿಬಾಗಲಿ ಅರೆಭಾಷೆನ ಉಳ್ಸಿ-ಬೆಳ್ಸುವ ಕಾರ್ಯ’ ಎಂಬ ವಿಷಯದ ಬಗ್ಗೆ ಕವಯಿತ್ರಿ ಸ್ಮಿತಾ ಅಮೃತರಾಜ್ ಉಪನ್ಯಾಸ ನೀಡಲಿದ್ದಾರೆ. ನಂತರ ಅರೆಭಾಷೆ ಸಾಂಸ್ಕೃತಿಕ ಕಾರ್ಯಕ್ರಮ, ಬಹುಭಾಷಾ ಕವಿಗೋಷ್ಠಿ ನಡೆಯಲಿದೆ.
ಮಧ್ಯಾಹ್ನ 2 ಗಂಟೆಯಿಂದ ಸ್ಥಳೀಯ ಕಲಾವಿದರಿಂದ ಸಾಂಸ್ಕೃತಿಕ ಮತ್ತು ಮನರಂಜನಾ ಕಾರ್ಯಕ್ರಮ ನಡೆಯಲಿದೆ. ಪ್ರವೀಣ್ ಇಳಂದಿಲ ನಡೆಸಿಕೊಡಲಿದ್ದಾರೆ.ಸಂಜೆ 3.30ಕ್ಕೆ ಸಮಾರೋಪ ಸಮಾರಂಭ, ಸನ್ಮಾನ, ಬಹುಮಾನ ವಿತರಣೆ ಕಾರ್ಯಕ್ರಮ ನಡೆಯಲಿದೆ.
ಉದುಮ ಶಾಸಕ ಸಿ.ಎಚ್.ಕುಂಞಂಬು, ಮಡಿಕೇರಿ ಆಕಾಶವಾಣಿ ಹಿರಿಯ ಉದ್ಘೋಷಕ ಸುಬ್ರಾಯ ಸಂಪಾಜೆ, ಸುಳ್ಯ ಗೌಡರ ಯುವ ಸೇವಾ ಸಂಘದ ಸ್ಥಾಪಕ ಅಧ್ಯಕ್ಷರಾದ ನಿತ್ಯಾನಂದ ಮುಂಡೋಡಿ, ಕರ್ನಾಟಕ ಮೀನುಗಾರಿಕಾ ನಿಗಮದ ಮಾಜಿ ಅಧ್ಯಕ್ಷ ಎ.ವಿ.ತೀರ್ಥರಾಮ, ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಪೂರ್ವಾಧ್ಯಕ್ಷ ಪಿ.ಸಿ.ಜಯರಾಮ, ಅರಂತೋಡು ತೆಕ್ಕಿಲ ಗ್ರಾಮೀಣಾಭಿವೃದ್ಧಿ ಪ್ರತಿಷ್ಠಾನ ಅಧ್ಯಕ್ಷ ಟಿ.ಎಂ.ಶಹೀದ್ ಮತ್ತಿತರರು ಪಾಲ್ಗೊಳ್ಳಲಿದ್ದಾರೆ.ಶಿಕ್ಷಣ, ಕ್ರೀಡಾ ಕ್ಷೇತ್ರದಲ್ಲಿ ಮುತ್ತಣ್ಣ ಮಾಸ್ತರ್, ಸಹಕಾರ ಸೇವೆಗೆ ಮೋನಪ್ಪ ಗೌಡ ಇಳಂದಿಲ, ಶಿಕ್ಷಣ ಬಾಲಕೃಷ್ಣ ಮಾಸ್ತರ್, ಧಾರ್ಮಿಕ ಕ್ಷೇತ್ರದಲ್ಲಿ ಬೋಜಪ್ಪ ಗೌಡ ಪಾಲಾರುಮೂಲೆ, ಸಮಾಜ ಸೇವೆಗೆ ಪುರುಷೋತ್ತಮ ಬೊಡ್ಡನಕೊಚ್ಚಿ ಮತ್ತು ಕುತ್ತಿಕೋಲು ಗ್ರಾಮ ಪಂಚಾಯಿತಿ ಪ್ರಥಮ ಅರೆಭಾಷೆ ಮಹಿಳಾ ಜನಪ್ರತಿನಿಧಿ ಪಾಲಾರುಮೂಲೆ ಧರ್ಮಾವತಿ ಅವರನ್ನು ಸನ್ಮಾನಿಸಲಾಗುತ್ತದೆ. ಕ್ರೀಡೆಯಲ್ಲಿ ಯಕ್ಷಿತ್ ಬಾಲೆಂಬಿ ಅವರು ದಿ.ಗೋವಿಂದೇ ಗೌಡ ಸ್ಮರಣಾರ್ಥ ರಾಜ್ಯ ಅತ್ಯುತ್ತಮ ಪ್ರಶಸ್ತಿ ಪುರಸ್ಕೃತರಾಗಿರುತ್ತಾರೆ.