ಇಲ್ಲಿನ ಕಟಪಾಡಿ ಜಂಕ್ಷನ್ ಬಳಿ ಈಗಾಗಲೇ ಓವರ್ ಪಾಸ್ ಕಾಮಗಾರಿ ಆರಂಭವಾಗಿ ಕಾಮಗಾರಿ ಭರದಿಂದ ಸಾಗುತ್ತಿದ್ದು ಸ್ಥಳಕ್ಕೆ ಸೋಮವಾರ ಉಡುಪಿ ಚಿಕ್ಕಮಗಳೂರು ಸಂಸದರಾದ ಕೋಟ ಶ್ರೀನಿವಾಸ ಪೂಜಾರಿ ಮತ್ತು ಕಾಪು ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಭೇಟಿ ನೀಡಿ ಕಾಮಗಾರಿಯ ಪ್ರಗತಿ ಪರಿಶೀಲನೆ ನಡೆಸಿದರು.
ಕಾಪು: ಇಲ್ಲಿನ ಕಟಪಾಡಿ ಜಂಕ್ಷನ್ ಬಳಿ ಈಗಾಗಲೇ ಓವರ್ ಪಾಸ್ ಕಾಮಗಾರಿ ಆರಂಭವಾಗಿ ಕಾಮಗಾರಿ ಭರದಿಂದ ಸಾಗುತ್ತಿದ್ದು ಸ್ಥಳಕ್ಕೆ ಸೋಮವಾರ ಉಡುಪಿ ಚಿಕ್ಕಮಗಳೂರು ಸಂಸದರಾದ ಕೋಟ ಶ್ರೀನಿವಾಸ ಪೂಜಾರಿ ಮತ್ತು ಕಾಪು ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಭೇಟಿ ನೀಡಿ ಕಾಮಗಾರಿಯ ಪ್ರಗತಿ ಪರಿಶೀಲನೆ ನಡೆಸಿದರು. ಏಪ್ರಿಲ್ 10ರಿಂದ ಒಂದು ಭಾಗದ ರಸ್ತೆ ವಾಹನ ಸಂಚಾರಕ್ಕೆ ಮುಕ್ತವಾಗಲಿದೆ ಎಂದು ಸಂಸದರು ತಿಳಿಸಿದರು.
ಈ ಸಂದರ್ಭದಲ್ಲಿ ಕಾಪು ಮಂಡಲ ಬಿಜೆಪಿ ಅಧ್ಯಕ್ಷ ಜಿತೇಂದ್ರ ಶೆಟ್ಟಿ, ಉಡುಪಿ ಜಿಪ ಮಾಜಿ ಸದಸ್ಯೆ ಶಿಲ್ಪಾ ಜಿ. ಸುವರ್ಣ, ಕಟಪಾಡಿ ಗ್ರಾಪಂ ಮಾಜಿ ಸದಸ್ಯರಾದ ಶ್ರೀನಿವಾಸ್ ಕಿಣಿ, ಸುಭಾಸ್ ಬಲ್ಲಾಳ್, ಪವಿತ್ರ ಶೆಟ್ಟಿ, ಕೋಟೆ ಗ್ರಾಪಂ ಮಾಜಿ ಸದಸ್ಯರಾದ ಯೋಗೀಶ್, ಹರ್ಷಿತ್, ರತ್ನಾಕರ್, ಕುರ್ಕಾಲು ಗ್ರಾಮ ಗ್ರಾಪಂ ಮಾಜಿ ಸದಸ್ಯ ಪ್ರವೀಣ್ ಪೂಜಾರಿ, ಕಾಪು ಮಂಡಲ ಬಿಜೆಪಿ ಪ್ರಧಾನ ಕಾರ್ಯದರ್ಶಿ ಗೋಪಾಲಕೃಷ್ಣ ರಾವ್, ಮೂಡಬೆಟ್ಟು ಮಹಾಶಕ್ತಿ ಕೇಂದ್ರದ ನಿತಿನ್, ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳು ಮತ್ತು ಸ್ಥಳೀಯರು ಉಪಸ್ಥಿತರಿದ್ದರು.