ಕಟಪಾಡಿ: ಎಸ್‌ಡಿಪಿಐ ಕೊಡುಗೆಯ ಆ್ಯಂಬುಲೆನ್ಸ್ ಲೋಕಾರ್ಪಣೆ

| Published : Jul 21 2025, 12:00 AM IST

ಕಟಪಾಡಿ: ಎಸ್‌ಡಿಪಿಐ ಕೊಡುಗೆಯ ಆ್ಯಂಬುಲೆನ್ಸ್ ಲೋಕಾರ್ಪಣೆ
Share this Article
  • FB
  • TW
  • Linkdin
  • Email

ಸಾರಾಂಶ

ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಕಟಪಾಡಿ ಗ್ರಾಮ ಸಮಿತಿ ವತಿಯಿಂದ ಸಾರ್ವಜನಿಕ ಸೇವೆಗಾಗಿ ದಾನಿಗಳ ಸಹಾಯದಿಂದ ಆಂಬ್ಯುಲೆನ್ಸ್ ಖರೀದಿಸಿ, ಪಕ್ಷದ ಉಡುಪಿ ಜಿಲ್ಲಾಧ್ಯಕ್ಷರಾದ ಆಸಿಫ್ ಕೋಟೇಶ್ವರ ಅವರ ಸಮ್ಮುಖದಲ್ಲಿ ಲೋಕಾರ್ಪಣೆ ಮಾಡಲಾಯಿತು.

ಕನ್ನಡಪ್ರಭ ವಾರ್ತೆ ಉಡುಪಿ

ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಕಟಪಾಡಿ ಗ್ರಾಮ ಸಮಿತಿ ವತಿಯಿಂದ ಸಾರ್ವಜನಿಕ ಸೇವೆಗಾಗಿ ದಾನಿಗಳ ಸಹಾಯದಿಂದ ಆಂಬ್ಯುಲೆನ್ಸ್ ಖರೀದಿಸಿ, ಪಕ್ಷದ ಉಡುಪಿ ಜಿಲ್ಲಾಧ್ಯಕ್ಷರಾದ ಆಸಿಫ್ ಕೋಟೇಶ್ವರ ಅವರ ಸಮ್ಮುಖದಲ್ಲಿ ಲೋಕಾರ್ಪಣೆ ಮಾಡಲಾಯಿತು.ಎಸ್.ಡಿ.ಪಿ.ಐ. ಕಟಪಾಡಿ ಗ್ರಾಮ ಸಮಿತಿ ಅಧ್ಯಕ್ಷ ಶಾಹಿದ್ ಅಹ್ಮದ್ ಅವರ ಅಧ್ಯಕ್ಷತೆಯಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಕಟಪಾಡಿ ಗ್ರಾಪಂ ಅಧ್ಯಕ್ಷೆ ಮಮತಾ ಶೆಟ್ಟಿ ಅವರು ಆಗಮಿಸಿ, ಜಾತಿಮತ ಭೇದವಿಲ್ಲದೆ ಪಕ್ಷ ಮಾಡುತ್ತಿರುವ ಸೇವೆ ಶ್ಲಾಘನೀಯವಾಗಿದ್ದು, ಈ ಸೇವೆ ಸದಾ ಮುಂದುವರಿಯಲಿ ಎಂದು ಶುಭ ಹಾರೈಸಿದರು. ಪಕ್ಷದ ಉಡುಪಿ ಕ್ಷೇತ್ರ ಸಮಿತಿ ಉಪಾಧ್ಯಕ್ಷ ರಹೀಮ್ ಆದಿಉಡುಪಿ ಪ್ರಸ್ತಾವಿಕವಾಗಿ ಮಾತನಾಡಿದರು.

ಕಟಪಾಡಿ ಜಾಮಿಯಾ ಮಸೀದಿ ಅಧ್ಯಕ್ಷ ವೈ.ಎಂ.ಇಲ್ಯಾಸ್, ನಿಕಟಪೂರ್ವ ಅಧ್ಯಕ್ಷ ಬಿ.ಎಂ. ಮೊಯ್ದೀನ್, ಪಕ್ಷದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ರಜಾಕ್ ವೈ.ಎಸ್., ಕಾಪು ಕ್ಷೇತ್ರ ಸಮಿತಿಯ ಅಧ್ಯಕ್ಷ ಸಾದಿಕ್ ಕೆ.ಪಿ., ಕಟಪಾಡಿ ಜಾಮಿಯಾ ಮಸೀದಿ ಇಮಾಮ್ ರಶೀದ್ ಮೌಲಾನ, ಉದ್ಯಾವರ ಮಸೀದಿ ಇಮಾಮ್ ಇಮ್ರಾನ್ ಮೌಲಾನ, ಹೆಚ್.ಐ.ಎಸ್.ಎಫ್. ಅಧ್ಯಕ್ಷ ಇಮ್ತಿಯಾಜ್ ಹಾಗೂ ಉದ್ಯಮಿ ವೈ.ಎಂ.ಅಯ್ಯೂಬ್ ಅವರು ಅತಿಥಿಗಳಾಗಿ ಆಗಮಿಸಿ ಶುಭ ಹಾರೈಸಿದರು. ಈ ಸಂದರ್ಭದಲ್ಲಿ ಉಡುಪಿಯ ಸಮಾಜ ಸೇವಕರಾಗಿರುವ ಮುನೀರ್ ಕಲ್ಮಾಡಿ ಅವರನ್ನು ಸನ್ಮಾನಿಸಲಾಯಿತು. ಶಫೀಕ್ ಉಡುಪಿ ಸ್ವಾಗತಿಸಿ ಕಾರ್ಯಕ್ರಮ ನಿರೂಪಿಸಿದರು.