ಕಟೀಲು: 14ರಂದು ಕೀರ್ತಿಶೇಷ ಗೋಪಾಲಕೃಷ್ಣ ಆಸ್ರಣ್ಣ ಸಂಸ್ಮರಣೆ

| Published : Sep 03 2024, 01:42 AM IST

ಸಾರಾಂಶ

ಕಟೀಲು ಕೀರ್ತಿಶೇಷ ಗೋಪಾಲಕೃಷ್ಣ ಅಸ್ರಣ್ಣರ ಸಂಸ್ಮರಣೆ ಮತ್ತು ಸಾಂಸ್ಕೃತಿಕ ಕಾರ್ಯಕ್ರಮವು ಸೆ.14ರಂದು ಕಟೀಲಿನ ಗೋಪಾಲಕೃಷ್ಣ ಆಸ್ರಣ್ಣ ಸಭಾಭವನದಲ್ಲಿ ಮಧ್ಯಾಹ್ನ 2 ರಿಂದ ರಾತ್ರಿ 10ರ ವರೆಗೆ ಜರುಗಲಿದೆ. ಸಾಂಸ್ಕೃತಿಕ ಕಾರ್ಯಕ್ರಮದ ಅಂಗವಾಗಿ ಮಧ್ಯಾಹ್ನ 2ರಿಂದ 5ರ ವರೆಗೆ ಯಕ್ಷಗಾನ ಬಯಲಾಟ ನಡೆಯಲಿದೆ. ಸಭಾ ಕಾರ್ಯಕ್ರಮದ ಬಳಿಕ ರಾತ್ರಿ 7 ರಿಂದ ರಾತ್ರಿ 10 ಗಂಟೆ ವರೆಗೆ ಚಂದ್ರಹಾಸ (ಬಡಗು) ಯಕ್ಷಗಾನ ಪ್ರದರ್ಶನ ನಡೆಯಲಿದೆ.

ಕನ್ನಡಪ್ರಭ ವಾರ್ತೆ ಮೂಲ್ಕಿ

ಕಟೀಲು ಕೀರ್ತಿಶೇಷ ಗೋಪಾಲಕೃಷ್ಣ ಅಸ್ರಣ್ಣರ ಸಂಸ್ಮರಣೆ ಮತ್ತು ಸಾಂಸ್ಕೃತಿಕ ಕಾರ್ಯಕ್ರಮವು ಸೆ.14ರಂದು ಕಟೀಲಿನ ಗೋಪಾಲಕೃಷ್ಣ ಆಸ್ರಣ್ಣ ಸಭಾಭವನದಲ್ಲಿ ಮಧ್ಯಾಹ್ನ 2 ರಿಂದ ರಾತ್ರಿ 10ರ ವರೆಗೆ ಜರುಗಲಿದೆ.

ಸಾಂಸ್ಕೃತಿಕ ಕಾರ್ಯಕ್ರಮದ ಅಂಗವಾಗಿ ಮಧ್ಯಾಹ್ನ 2ರಿಂದ 5ರ ವರೆಗೆ ಯಕ್ಷಗಾನ ಬಯಲಾಟ ನಡೆಯಲಿದೆ. ಸಭಾ ಕಾರ್ಯಕ್ರಮದ ಬಳಿಕ ರಾತ್ರಿ 7 ರಿಂದ ರಾತ್ರಿ 10 ಗಂಟೆ ವರೆಗೆ ಚಂದ್ರಹಾಸ (ಬಡಗು) ಯಕ್ಷಗಾನ ಪ್ರದರ್ಶನ ನಡೆಯಲಿದೆ.

ಸಂಜೆ 5 ರಿಂದ ನಡೆಯುವ ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಅಖಿಲ ಭಾರತ ತುಳು ಒಕ್ಕೂಟದ ಅಧ್ಯಕ್ಷ ಪಿ.ವಿ. ಭಂಡಾರಿ ವಹಿಸಲಿದ್ದಾರೆ. ಯಕ್ಷನಂದನ ಕುಳಾಯಿಯ ಸಂಚಾಲಕ, ನ್ಯಾಯವಾದಿ ಸಂತೋಷ್ ಐತಾಳ್, ಪುರಂದರ ಶೆಟ್ಟಿಗಾರ್‌, ನಮ್ಮ ಕುಡ್ಲ ವಾಹಿನಿ ಮಂಗಳೂರಿನ ಮುಖ್ಯಸ್ಥ ಲೀಲಾಕ್ಷ ಕರ್ಕೇರ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.ದಿ. ಗೋಪಾಲಕೃಷ್ಣ ಆಸ್ರಣ್ಣ ಅರ್ಚಕ ಪ್ರಶಸ್ತಿಯನ್ನು ಉಡುಪಿ ಶ್ರೀ ಅನಂತೇಶ್ವರ ದೇವಸ್ಥಾನದ ಪ್ರಧಾನ ಅರ್ಚಕ ವೇದಮೂರ್ತಿ ಸಗ್ರಿ ವೇದವ್ಯಾಸ ಐತಾಳರಿಗೆ, ದಿ. ಗೋಪಾಲಕೃಷ್ಣ ಆಸ್ರಣ್ಣ ಮೊಕ್ತೇಸರ ಪ್ರಶಸ್ತಿಯನ್ನು ಮುಚ್ಚೂರು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದ ಅನುವಂಶಿಕ ಆಡಳಿತ ಮೊಕ್ತೇಸರ ಮುಚ್ಚೂರು ಹರಿ ಭಟ್ ಅವರಿಗ ಹಾಗೂ ದಿ. ಗೋಪಾಲಕೃಷ್ಣ ಆಸ್ರಣ್ಣ ಕಲಾವಿದ ಪ್ರಶಸ್ತಿಯನ್ನು ಯಕ್ಷಗಾನ ಕಲಾವಿದ ಲಕ್ಷ್ಮಣ ಕೋಟ್ಯಾನ್ ಅವರಿಗೆ ಪ್ರದಾನ ಮಾಡಲಾಗುತ್ತದೆ. ವಿಶೇಷ ಪುರಸ್ಕಾರವನ್ನು ಧನಲಕ್ಷ್ಮೀ ಕ್ಯಾಶ್ಯೂ ಇಂಡಸ್ಟ್ರೀಸ್ ಮೂಡುಬಿದಿರೆಯ ಶ್ರೀಪತಿ ಭಟ್ ಅವರಿಗೆ ನೀಡಿ ಗೌರವಿಸಲಾಗುವುದು. ಶ್ರೀ ಕ್ಷೇತ್ರ ಕಟೀಲಿನ ಆಡಳಿತ ಮೊಕ್ತೇಸರ ಸನತ್ ಕುಮಾರ್ ಶೆಟ್ಟಿ, ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷ ಐಕಳ ಹರೀಶ್ ಶೆಟ್ಟಿ, ಕಸಾಪ ಮಾಜಿ ರಾಜ್ಯಾಧ್ಯಕ್ಷ ಧರ್ಮದರ್ಶಿ ಡಾ. ಹರಿಕೃಷ್ಣ ಪುನರೂರು, ಕಲ್ಕೂರ ಪ್ರತಿಷ್ಠಾನದ ಪ್ರದೀಪ ಕುಮಾರ್ ಕಲ್ಕೂರ, ಯುಗಪುರುಷ ಕಿನ್ನಿಗೋಳಿಯ ಪ್ರಧಾನ ಸಂಪಾದಕ ಕೊಡೆತ್ತೂರು ಭುವನಾಭಿರಾಮ ಉಡುಪ ಉಪಸ್ಥಿತರಿರುವರು.

1944ರಲ್ಲಿ ಕಟೀಲು ಪರಿಸರದಲ್ಲಿ ಮಾಯಕದ ನೆರೆಯು ಬಂದ ಸಂದರ್ಭದಲ್ಲಿ ಗೋಪಾಲಕೃಷ್ಣ ಆಸ್ರಣ್ಣರು ಶ್ರೀ ದೇವರ ವಿಗ್ರಹವನ್ನು ಅಪ್ಪಿಕೊಂಡು ರಕ್ಷಿಸಿದ 80ನೇ ವರ್ಷದ ಸವಿನೆನಪಿಗಾಗಿ ವಿಶೇಷ ಗೌರವಾರ್ಪಣೆ ಜರುಗಲಿದೆ.

ಸಾಂಸ್ಕೃತಿಕ ಕ್ಷೇತ್ರದಲ್ಲಿ ಸಾಧಕಾರದ ಮಹಾನಟಿ ಖ್ಯಾತಿಯ ಆರಾಧನಾ ಭಟ್, ಕ್ರೀಡಾ ಕ್ಷೇತ್ರದಲ್ಲಿ ಬಡಗ ಎಕ್ಕಾರು ಸರ್ಕಾರಿ ಸಂಯುಕ್ತ ಪ್ರೌಢಶಾಲೆ, ಶಿಕ್ಷಣ ಕ್ಷೇತ್ರದಲ್ಲಿ ವಿದ್ವಾನ್ ರಾಧಾಕೃಷ್ಣ ಭಟ್ ಬೇಂಗ್ರೋಡಿ, ಕೃಷಿ ಕ್ಷೇತ್ರದಲ್ಲಿ ಸಿರಿ ಕುರಲ್ ರೈತ ಉತ್ಪಾದಕರ ಸಂಸ್ಥೆ (ನಿ.), ಎಕ್ಕಾರು, ಗೋಸೇವೆಯಲ್ಲಿ ಪಾಂಚಜನ್ಯ ಗೋ ಶಾಲೆ ಕಿನ್ನಿಗೋಳಿ, ಯೋಗದಲ್ಲಿ ಅಂತಾರಾಷ್ಟ್ರೀಯ ಯೋಗಪಟು ಮೇಘಶ್ರೀ ಶೆಟ್ಟಿ, ಕೆ.ಬಿ. ಬೆಟ್ಟು ಕೊಡೆತ್ತೂರು ಅವರನ್ನು ಗೌರವಿಸಲಾಗುವುದು ಎಂದು ಕೆ. ಲಕ್ಷ್ಮೀನಾರಾಯಣ ಆಸ್ರಣ್ಣ, ಕಟೀಲು ಶ್ರೀ ಗೋಪಾಲಕೃಷ್ಣ ಅಸ್ರಣ್ಣ ಸ್ಮಾರಕ ಟ್ರಸ್ಟ್ ಪ್ರಕಟಣೆಯಲ್ಲಿ ತಿಳಿಸಿದೆ.