ಸಾರಾಂಶ
ಕಟೀಲು ಶ್ರೀ ದುರ್ಗಾಪರಮೇಶ್ವರೀ ಪದವಿ ಪೂರ್ವ ಕಾಲೇಜಿನಲ್ಲಿ ಶುಕ್ರವಾರ ಪ್ರತಿಭಾ ಪುರಸ್ಕಾರ ಮತ್ತು ಪ್ರತಿಭಾ ಪ್ರದರ್ಶನ ಕಾರ್ಯಕ್ರಮ ನೆರವೇರಿತು.
ಕನ್ನಡಪ್ರಭ ವಾರ್ತೆ ಮೂಲ್ಕಿ
ಕಟೀಲು ಕಾಲೇಜ್ ವಿದ್ಯಾಸಂಸ್ಥೆ ಕಡಿಮೆ ವೆಚ್ಚದಲ್ಲಿ ಗುಣಮಟ್ಟದ ಶಿಕ್ಷಣ ನೀಡುತ್ತಿದ್ದು, ಪಾಠದ ಜೊತೆಗೆ ಪಠ್ಯೇತರ ಚಟುವಟಿಕೆಗಳನ್ನು ಅಳವಡಿಸಿಕೊಂಡು ಬದುಕುವ ಪಾಠ ನೀಡುತ್ತಿದೆ ಎಂದು ಶಾಸಕ ಉಮಾನಾಥ ಕೋಟ್ಯಾನ್ ಹೇಳಿದ್ದಾರೆ.ಕಟೀಲು ಶ್ರೀ ದುರ್ಗಾಪರಮೇಶ್ವರೀ ಪದವಿ ಪೂರ್ವ ಕಾಲೇಜಿನಲ್ಲಿ ಶುಕ್ರವಾರ ಜರಗಿದ ಪ್ರತಿಭಾ ಪುರಸ್ಕಾರ ಮತ್ತು ಪ್ರತಿಭಾ ಪ್ರದರ್ಶನ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಅವರು ಮಾತನಾಡಿದರು. ಕಟೀಲು ದೇವಳದ ಅನುವಂಶಿಕ ಮೊಕ್ತೇಸರ ವಾಸುದೇವ ಆಸ್ರಣ್ಣ ಕಾರ್ಯಕ್ರಮ ಉದ್ಘಾಟಿಸಿ ಆಶೀರ್ವಚನ ನೀಡಿದರು. ಕಾರ್ಯಕ್ರಮದಲ್ಲಿ ದ್ವಿತೀಯ ಪಿ.ಯು.ಸಿ.ಯಲ್ಲಿ ರಾಜ್ಯಕ್ಕೆ 8 ನೇ ರ್‍ಯಾಂಕ್ ಪಡೆದ ಅತ್ಮೀಯ ಅವರನ್ನು ಸನ್ಮಾನಿಸಲಾಯಿತು. ಶಿಕ್ಷಣ ಕ್ಷೇತ್ರದಲ್ಲಿ ಸಾಧನೆಗೈದ ವಿದ್ಯಾರ್ಥಿಗಳು, ರಾಜ್ಯ ಮಟ್ಟದಲ್ಲಿ ಬಹುಮಾನ ಪಡೆದವರನ್ನು ಸನ್ಮಾನಿಸಲಾಯಿತು.ರಾಜ್ಯ, ರಾಷ್ಟ ಮಟ್ಟದ ಕ್ರೀಡಾ ಸಾಧಕರನ್ನು ಸನ್ಮಾನಿಸಲಾಯಿತು. ರಾಜ್ಯ ರಾಷ್ಟ್ರಮಟ್ಟದ ಕ್ರೀಡಾ, ಯೋಗ ಮತ್ತಿತರ ಚಟುವಟಿಕೆಗಳ ಸಾಧಕರಿಗೆ ಶಾಲಾ ಪ್ರವೇಶ ಶುಲ್ಕವನ್ನು ಸಾಧಕರ ನೆಲೆಯಲ್ಲಿ ಹಿಂದುರಿಗಿಸಲಾಯಿತು.ಈ ಸಂದರ್ಭ ದೇವಳದ ಪ್ರಧಾನ ಅರ್ಚಕ ಶ್ರಿಹರಿನಾರಾಯಣ ದಾಸ ಆಸ್ರಣ್ಣ, ಮೂಡುಬಿದಿರೆ ಎಕ್ಸಲೆಂಟ್ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಯುವರಾಜ್ ಜೈನ್, ಬಿಪಿನ್ ಚಂದ್ರ ಶೆಟ್ಟಿ ಕೊಡೆತ್ತೂರುಗುತ್ತು, ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಲೋಕಯ್ಯ ಸಾಲಿಯಾನ್ ಕೊಂಡೇಲ, ಶಿಕ್ಷಕ ರಕ್ಷಕ ಸಂಘದ ಉಪಾಧ್ಯಕ್ಷ ಜಯರಾಮ ಅಮೀನ್, ಕಾಲೇಜು ಪ್ರಾಂಶುಪಾಲೆ ಕುಸುಮಾವತಿ, ವಿದ್ಯಾರ್ಥಿ ಸಂಘದ ನಾಯಕ ಶಿವಮಾನ್ಯ ಮತ್ತಿತರರು ಉಪಸ್ಥಿತರಿದ್ದರು.ಉಪನ್ಯಾಸಕ ಪರಮೇಶ್ವರ್ ಸ್ವಾಗತಿಸಿದರು. ಉಪನ್ಯಾಸಕಿ ಶೈಲಜ ನಿರೂಪಿಸಿದರು. ಡಾ ಸುಧೀರ್ ನಾಯಕ್ ವಂದಿಸಿದರು.
;Resize=(128,128))
;Resize=(128,128))
;Resize=(128,128))
;Resize=(128,128))