ಸಾರಾಂಶ
ಕಟ್ಟೆಮಾಡು ಶ್ರೀ ಮೃತ್ಯುಂಜಯ ದೇವಾಲಯದಲ್ಲಿ ತಹಸೀಲ್ದಾರ್ ಸಮ್ಮುಖದಲ್ಲಿ ಸಭೆ ನಡೆಯಿತು. ಗ್ರಾಮದ ಪ್ರಮುಖರು ಭಾಗವಹಿಸಿದ್ದರು.
ಕನ್ನಡಪ್ರಭ ವಾರ್ತೆ ಮಡಿಕೇರಿ
ಗ್ರಾಮಸ್ಥರು ಸಮನ್ವಯತೆಯಿಂದ, ಶಾಂತಿ ಸೌಹಾರ್ದತೆ ಕಾಪಾಡುವಂತೆ ಅಧಿಕಾರಿಗಳು ಸೂಚನೆ ನೀಡಿದ್ದಾರೆ.ಮಂಗಳವಾರ ಕಟ್ಟೆಮಾಡು ಶ್ರೀ ಮೖತ್ಯುಂಜಯ ದೇವಾಲಯದಲ್ಲಿ ತಹಸೀಲ್ದಾರ್ ಪ್ರವೀಣ್ ಸಮ್ಮುಖದಲ್ಲಿ ಸಭೆ ನಡೆಯಿತು.
ದೇವಾಲಯದ ಐವರು ಸದಸ್ಯರು, ಗ್ರಾಪಂ. ಅಧ್ಯಕ್ಷರು, ಉಪಾಧ್ಯಕ್ಷ , ಸದಸ್ಯರು, ಪಿಡಿಓ ಸೇರಿದಂತೆ ಗ್ರಾಮದ ಪ್ರಮುಖರು ಭಾಗವಹಿಸಿದ್ದರು.ಕೋಟ್೯ ಆದೇಶವನ್ನು ಪರಿಪಾಲಿಸಬೇಕು. ದೇವಾಲಯಕ್ಕೆ ಐದು ಮಂದಿಗಿಂತ ಹೆಚ್ಚು ಜನರು ತೆರಳದಂತೆ ಸೂಚನೆ ನೀಡಿದರು.
ಯಾವುದೇ ಕಾರಣಕ್ಕೂ ಶಾಂತಿ ಸುವ್ಯವಸ್ಥೆಗೆ ಗ್ರಾಮಸ್ಥರಿಂದ ಸಮಸ್ಯೆಯಾಗದಂತೆ ಗ್ರಾಮದಲ್ಲಿ ಸೌಹಾರ್ದತೆ ಕಾಪಾಡುವಂತೆ ಸಲಹೆ ನೀಡಿದರು.ತಹಸೀಲ್ದಾರ್ ಪ್ರವೀಣ್ , ಗ್ರಾಮಾಂತರ ಪೊಲೀಸ್ ಠಾಣಾಧಿಕಾರಿ ಚಂದ್ರಶೇಖರ್ ಸೇರಿದಂತೆ ಅಧಿಕಾರಿಗಳು ಸೂಚಿಸಿದರು.
ದೇವಾಲಯದಿಂದ 200 ಮೀಟರ್ ಅಂತರದಲ್ಲಿ ಮಾರ್ಚ್ 13 ರವರೆಗೆ 163 ಸೆಕ್ಷನ್ ಪ್ರಕಾರ ನಿಷೇಧಾಜ್ಞೆ ಜಾರಿಯಲ್ಲಿದೆ. ಗ್ರಾಮ ಪ್ರಮುಖರ ಸಭೆ ಹಿನ್ನೆಲೆಯಲ್ಲಿ ಕಟ್ಟೆಮಾಡು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದ ಸಭೆಗೆ ಪೊಲೀಸರಿಂದ ಬಿಗಿ ಬಂದೋಬಸ್ತ್ ವ್ಯವಸ್ಥೆ ಮಾಡಲಾಗಿತ್ತು.